ಯೆಹೆಜ್ಕೇಲನು 21:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ, “ಅಮ್ಮೋನ್ಯರ ವಿಷಯದಲ್ಲಿಯೂ ಮತ್ತು ಅವರು ಮಾಡುವ ದೂಷಣೆಯ ವಿಷಯದಲ್ಲಿಯೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಚೆನ್ನಾಗಿ ಮಸೆದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 “ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ - ಅಮ್ಮೋನ್ಯರ ವಿಷಯದಲ್ಲೂ ಅವರು ಮಾಡುವ ದೂಷಣೆಯ ವಿಷಯದಲ್ಲೂ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ಖಡ್ಗ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ; ಮಿಂಚುವಂತೆ ಪೂರ್ಣ ಮಸೆಯಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ - ಅಮ್ಮೋನ್ಯರ ವಿಷಯದಲ್ಲಿಯೂ ಅವರು ಮಾಡುವ ದೂಷಣೆಯ ವಿಷಯದಲ್ಲಿಯೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಖಡ್ಗ, ಖಡ್ಗ, ಸಂಹರಿಸುವದಕ್ಕೆ ಹಿರಿದಿದೆ, ವಿುಂಚುವಂತೆ ತೀರಾತಿಕ್ಕಿದೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ದೇವರು ಹೇಳಿದ್ದು, “ನರಪುತ್ರನೇ, ನನ್ನ ಪರವಾಗಿ ಜನರ ಕೂಡ ಮಾತನಾಡು. ‘ನನ್ನ ಒಡೆಯನಾದ ಯೆಹೋವನು ಅಮ್ಮೋನಿಯರ ಬಗ್ಗೆಯೂ ಅವರ ದೂಷಣೆಗಳ ಬಗ್ಗೆಯೂ ಹೀಗೆ ಹೇಳುತ್ತಾನೆ: “‘ನೋಡು, ಒಂದು ಖಡ್ಗ. ಆ ಖಡ್ಗವು ಒರೆಯಿಂದ ಹೊರಬಂದಿದೆ. ಆ ಖಡ್ಗವನ್ನು ಹರಿತಗೊಳಿಸಲಾಗಿದೆ ಮತ್ತು ನಯಗೊಳಿಸಲಾಗಿದೆ. ಖಡ್ಗವು ಕೊಲ್ಲಲು ಸಿದ್ಧವಾಗಿದೆ. ಮಿಂಚಿನಂತೆ ಹೊಳೆಯಲೆಂದು ಅದನ್ನು ನಯಗೊಳಿಸಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 “ಮನುಷ್ಯಪುತ್ರನೇ, ನೀನು ಪ್ರವಾದಿಸಿ, ಸಾರ್ವಭೌಮ ಯೆಹೋವ ದೇವರು ಅಮ್ಮೋನಿಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾರೆ, ‘ಹೌದು, ನೀನು ಹೀಗೆ ಹೇಳು: “ ‘ಒಂದು ಖಡ್ಗವು, ಒಂದು ಖಡ್ಗವು ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಬಹಳವಾಗಿ ಮಸೆಯಲಾಗಿದೆ. ಥಳಥಳಿಸುತ್ತಾ ನುಂಗುವಹಾಗಿದೆ. ಅಧ್ಯಾಯವನ್ನು ನೋಡಿ |