Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲ್ ದೇಶಕ್ಕೆ ಹೀಗೆ ಸಾರಿ ಹೇಳು, ‘ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು, ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಿ ಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರ ಇಂತೆನ್ನುತ್ತಾರೆ - ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು ನಿನ್ನಲ್ಲಿನ ಸಜ್ಜನರನ್ನೂ ದುರ್ಜನರನ್ನೂ ಸಂಹರಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನಗೆ ವಿರುದ್ಧನಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು ನಿನ್ನಲ್ಲಿನ ಶಿಷ್ಟರನ್ನೂ ದುಷ್ಟರನ್ನೂ ಸಂಹರಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಸ್ರೇಲ್ ದೇಶಕ್ಕೆ ಹೀಗೆ ಹೇಳು: ‘ಯೆಹೋವನು ನನಗೆ ಹೀಗೆಂದಿದ್ದಾನೆ, ನಾನು ನಿನಗೆ ವಿರೋಧವಾಗಿದ್ದೇನೆ. ನನ್ನ ಖಡ್ಗವನ್ನು ಅದರ ಒರೆಯಿಂದ ಹೊರತೆಗೆಯುವೆನು. ನಿನ್ನಲ್ಲಿರುವ ಒಳ್ಳೆಯ ಜನರನ್ನೂ ಕೆಟ್ಟ ಜನರನ್ನೂ ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ‘ಇಸ್ರಾಯೇಲ್ ದೇಶಕ್ಕೆ ಹೇಳಬೇಕಾದದ್ದೇನೆಂದರೆ, ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ. ನನ್ನ ಖಡ್ಗವನ್ನು ಅದರ ಒರೆಯಿಂದ ಹೊರಗೆ ತೆಗೆದು, ನಿನ್ನೊಳಗಿರುವ ನೀತಿವಂತರನ್ನೂ, ದುಷ್ಟರನ್ನೂ ಕಡಿದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:3
37 ತಿಳಿವುಗಳ ಹೋಲಿಕೆ  

ಆಹಾ, ತಗ್ಗಿನ ನಗರವೇ, ಬಯಲು ಭೂಮಿಯ ಶಿಖರದ ಮೇಲಣ ಪುರಿಯೇ, ನಾನು ನಿನ್ನ ವಿರುದ್ಧವಾಗಿದ್ದೇನೆ. “ಯಾರು ಇಳಿದು ನಮ್ಮ ಮೇಲೆ ಬಂದಾರು? ನಮ್ಮ ನಿವಾಸಗಳಲ್ಲಿ ಯಾರು ನುಗ್ಗುವರು?” ಎಂದು ಹೇಳುವವರೇ,


ಎಲ್ಲಾ ಒಂದೇ. ಆದಕಾರಣ ‘ನಾನು, ನಿರ್ದೋಷಿಯನ್ನೂ, ದೋಷಿಯನ್ನೂ ಆತನು ನಾಶ ಮಾಡುತ್ತೇನೆ’ ಎಂದು ಹೇಳುತ್ತಾನೆ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಇಗೋ ನಾನು ನಿನಗೆ ವಿರುದ್ಧವಾಗಿದ್ದೇನೆ, ನಿನ್ನ ನೆರಿಗೆಯನ್ನು ನಿನ್ನ ಕಣ್ಣ ಮುಂದೆಯೇ ಕೀಳಿಸುವೆನು, ನಿನ್ನ ಬೆತ್ತಲೆತನವನ್ನು ಜನಾಂಗಗಳಿಗೆ ತೋರಿಸುವೆನು, ನಿನ್ನ ಅವಮಾನವನ್ನು ರಾಜ್ಯಗಳಿಗೆ ತೋರುವಂತೆ ಮಾಡುವೆನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ! ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ರಥಗಳನ್ನು ಸುಟ್ಟು ಹೊಗೆಹಾಯಿಸುವೆನು, ಕತ್ತಿಯು ನಿನ್ನ ಪ್ರಾಯದ ಸಿಂಹಗಳನ್ನು ಸೀಳಿ ನುಂಗಿ ಬಿಡುವವು; ನಿನಗೆ ಸಿಕ್ಕಿದ ಬೇಟೆಯನ್ನು ಲೋಕದೊಳಗಿಂದ ನಿರ್ಮೂಲಮಾಡುವೆನು; ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸುವುದಿಲ್ಲ.”


ಆದುದರಿಂದ ಯೆರೂಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು ಇದು ಕರ್ತನಾದ ಯೆಹೋವನ ನುಡಿ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಕೂಷಿನವರೇ, ನೀವು ಸಹ ನನ್ನ ಖಡ್ಗದಿಂದ ಹತರಾಗುವಿರಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ತೂರ್ ದೇಶವೇ, ನಾನು ನಿನಗೆ ವಿರುದ್ಧವಾಗಿದ್ದೇನೆ; ಸಮುದ್ರವು ತನ್ನ ತೆರೆಗಳನ್ನು ಎಬ್ಬಿಸುವಂತೆ ನಾನು ಅನೇಕ ಜನಾಂಗಗಳನ್ನು ನಿನ್ನ ಮೇಲೆ ಎಬ್ಬಿಸುವೆನು.


“ನರಪುತ್ರನೇ, ಬಾಬೆಲಿನ ಅರಸನ ಖಡ್ಗವು ಬರುವುದಕ್ಕೆ ಎರಡು ದಾರಿಗಳ ನಕ್ಷೆಯನ್ನು ಬರೆ; ಅವೆರಡು ಒಂದೇ ದೇಶದಿಂದ ಹೊರಟ ಹಾಗಿರಲಿ; ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಖಡ್ಗ, ಕ್ಷಾಮ, ದುಷ್ಟಮೃಗ ಮತ್ತು ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಯೆರೂಸಲೇಮಿನ ಮೇಲೆ ಒಟ್ಟಿಗೆ ತಂದು, ಜನರನ್ನು, ಪಶುಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!


“ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ, ನಾನು ಅದನ್ನು ಆ ದೇಶಕ್ಕೆ ತಂದು, ಜನ ಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ,


ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲೂ ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ಯೆಹೋವನು ಇಂತೆನ್ನುತ್ತಾನೆ, “ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕರ ಪರ್ವತವೇ, ನಾನು ನಿನ್ನ ವಿರುದ್ಧನಾಗಿದ್ದೇನೆ; ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಮೇಲಿನಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು.


ಬಾಬೆಲೇ, ನೀನು ನನಗೆ ಗದೆಯು ಮತ್ತು ಶಸ್ತ್ರವು, ನಾನು ನಿನ್ನಿಂದ ಜನಾಂಗಗಳನ್ನು ಒಡೆದುಬಿಡುತ್ತೇನೆ;


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ, “ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನ್ನ ವಿರುದ್ಧವಾಗಿದ್ದೇನೆ; ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ.


ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು.


ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.


ಎಲ್ಲವುಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ಮತ್ತು ದುಷ್ಟನಿಗೂ, ಒಳ್ಳೆಯವನಿಗೂ ಮತ್ತು ಕೆಟ್ಟವನಿಗೂ, ಶುದ್ಧನಿಗೂ ಮತ್ತು ಅಶುದ್ಧನಿಗೂ, ಯಜ್ಞವನ್ನು ಅರ್ಪಿಸುವವನಿಗೂ ಮತ್ತು ಅರ್ಪಿಸದವನಿಗೂ ಒಂದೇ ಗತಿಯಾಗುವುದು. ಒಳ್ಳೆಯವನು ಹೇಗೋ ಹಾಗೆಯೇ ಪಾಪಿಯೂ ಇರುವನು. ಆಣೆಯಿಡುವವನು ಹೇಗೋ ಹಾಗೆಯೇ ಆಣೆಗೆ ಭಯಪಡುವವನೂ ಇರುವನು.


ಯೆಹೋವನೇ, ನೀನು ಅವನಿಗೆ ಎದುರಾಗಿ ನಿಂತು ಅವನನ್ನು ಕೆಡವಿಬಿಡು; ನಿನ್ನ ಕತ್ತಿಯಿಂದ ನನ್ನ ಪ್ರಾಣವನ್ನು ದುಷ್ಟರಿಗೆ ತಪ್ಪಿಸಿ ಕಾಪಾಡು.


ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು.


ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನೆಯನ್ನು ಮೀರಿದ್ದರಿಂದ ಆ ಕತ್ತಿಯು ಪ್ರತಿದಂಡನೆಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗ ಉಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.


ಶತ್ರುವು, ‘ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು; ಅವರಲ್ಲಿ ನಮ್ಮ ಬಯಕೆಯನ್ನು ತೀರಿಸಿಕೊಳ್ಳುವೆವು. ನಾವು ಖಡ್ಗವನ್ನು ಹಿಡಿದು; ಶಕ್ತಿಯಿಂದ ಅವರನ್ನು ಸಂಹಾರಮಾಡುವೆವು’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದರು.


ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ, ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು.


“ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀವು ವ್ಯರ್ಥವಾದದ್ದನ್ನು ನುಡಿದು, ಸುಳ್ಳಾದ ದರ್ಶನವನ್ನು ಕಂಡಿದ್ದರಿಂದ ಇಗೋ, ನಿಮಗೆ ವಿರುದ್ಧವಾಗಿದ್ದೇನೆ’ ಇದು ಕರ್ತನಾದ ಯೆಹೋವನೆಂಬ ನನ್ನ ನುಡಿ.


‘ಇಗೋ, ನಾನು ನಿನಗೂ, ನಿನ್ನ ನದಿಗೂ ವಿರುದ್ಧವಾಗಿ ಐಗುಪ್ತ ದೇಶವನ್ನು ಮಿಗ್ದೋಲಿನಿಂದ ಸೆವೇನಿಯ ತನಕ, ಹೌದು, ಕೂಷಿನ ಮೇರೆಯವರೆಗೂ ತೀರಾ ಹಾಳು ಮಾಡುವೆನು.


ನಿನ್ನ ಬಲಗೈ ಉದ್ಧರಿಸಿದ ಪುರುಷನೂ, ನೀನು ನಿನಗೋಸ್ಕರ ಸಾಕಿ ಬೆಳೆಸಿದ ನರಪುತ್ರನೂ ಆಗಿರುವವನನ್ನು, ನಿನ್ನ ಹಸ್ತದಿಂದ ಹಿಡಿದಿರು.


ನಿನ್ನ ಸುಂಟರಗಾಳಿಯಿಂದ ಅವರನ್ನು ಬೆನ್ನಟ್ಟು; ತುಫಾನಿನಿಂದ ಅವರನ್ನು ಕಳವಳಗೊಳಿಸು.


ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’” ಎಂದು ಹೇಳಿದನು.


ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರವೆಂಬ ವನಕ್ಕೆ ಬೆಂಕಿ ಹಚ್ಚುವೆನು, ಅದು ಸುತ್ತುಮುತ್ತಣದ ಪ್ರದೇಶವನ್ನೆಲ್ಲಾ ನುಂಗಿಬಿಡುವುದು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ರಕ್ತಾಪರಾಧವುಳ್ಳ ಆ ಪಟ್ಟಣಕ್ಕೆ ಕಷ್ಟ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.


ಯೆಹೋವನ ಕಡೆಗೆ ತಿರುಗಿಕೊಂಡು ಬದುಕಿರಿ, ತಿರುಗಿಕೊಳ್ಳದಿದ್ದರೆ ಆತನು ಬೆಂಕಿಯೋಪಾದಿಯಲ್ಲಿ ಯೋಸೇಫನ ವಂಶದೊಳಗೆ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವುದಕ್ಕೆ ಬೇತೇಲಿನಲ್ಲಿ ಯಾರೂ ಇರುವುದಿಲ್ಲ.


ಕರ್ತನಾದ ಯೆಹೋವನು ಇನ್ನೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಕರ್ತನಾದ ಯೆಹೋವನು ತನ್ನ ಜನರನ್ನು ದಂಡಿಸುವುದಕ್ಕಾಗಿ ಅಗ್ನಿಯನ್ನು ಕರೆದನು. ಅದು ಮಹಾ ಸಾಗರವನ್ನು ನುಂಗಿ ದೇಶವನ್ನೂ ತಿಂದುಬಿಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು