Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 21:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನೀನು ಅಗ್ನಿಗೆ ಆಹುತಿಯಾಗುವಿ; ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವುದು; ನೀನು ಇನ್ನು ಜ್ಞಾಪಕಕ್ಕೆ ಬರುವುದಿಲ್ಲ’ ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ನೀನು ಅಗ್ನಿಗೆ ಆಹುತಿಯಾಗುವೆ; ನೀನು ರಕ್ತ ನಾಡಿನಲ್ಲೆಲ್ಲಾ ಇಂಗಿರುವುದು; ನೀನು ಇನ್ನು ನೆನಪಿಗೆ ಬರುವುದಿಲ್ಲ; ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನೀನು ಅಗ್ನಿಗೆ ಆಹುತಿಯಾಗುವಿ; ನಿನ್ನ ರಕ್ತವು ದೇಶದಲ್ಲೆಲ್ಲಾ ಇಂಗಿರುವದು; ನೀನು ಇನ್ನು ಜ್ಞಾಪಕಕ್ಕೆ ಬರುವದಿಲ್ಲ; ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನೀನು ಬೆಂಕಿಗೆ ಸೌದೆಯಂತೆ ಇರುವಿ. ನಿನ್ನ ರಕ್ತವು ಭೂಮಿಯ ಆಳಕ್ಕೆ ಹರಿಯುವದು. ಜನರು ಇನ್ನು ಮುಂದಕ್ಕೆ ನಿನ್ನನ್ನು ಎಂದಿಗೂ ನೆನಪು ಮಾಡರು. ಇದನ್ನು ಯೆಹೋವನಾದ ನಾನೇ ಹೇಳಿದ್ದೇನೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ನೀನು ಅಗ್ನಿಗೆ ಆಹುತಿಯಾಗುವೆ. ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವುದು. ಇನ್ನು ಮೇಲೆ ನೀನು ಜ್ಞಾಪಕಕ್ಕೆ ಬರುವುದಿಲ್ಲವೆಂದು, ಯೆಹೋವ ದೇವರಾದ ನಾನೇ ಹೇಳಿದ್ದೇನೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 21:32
15 ತಿಳಿವುಗಳ ಹೋಲಿಕೆ  

ಆ ಸೀಮೆಯನ್ನಲ್ಲದೆ, ಅಮ್ಮೋನನ್ನೂ ಮೂಡಣದವರಿಗೆ ಬಾಧ್ಯವಾಗಿ ಕೊಟ್ಟು, ಅಮ್ಮೋನ್ಯರು ಜನಾಂಗಗಳೊಳಗೆ ನಿರ್ನಾಮವಾಗಬೇಕೆಂಬ ನನ್ನ ಸಂಕಲ್ಪವನ್ನು ನೆರವೇರಿಸುವೆನು.


“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.


ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.


ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿದೆ; ಆದ್ದರಿಂದ ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.


ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”


“‘ಕತ್ತಿಯನ್ನು ಒರೆಗೆ ಸೇರಿಸು. ನಿನ್ನ ಸೃಷ್ಟಿಯಾದ ಸ್ಥಳದಲ್ಲಿ, ನಿನ್ನ ಜನ್ಮಭೂಮಿಯಲ್ಲಿ ನಿನಗೆ ನ್ಯಾಯ ತೀರಿಸುವೆನು.


ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?


ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,


ಆದುದರಿಂದ ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ಸುಲಿಗೆಗಾಗಿ ಮ್ಲೇಚ್ಛರಿಗೆ ವಶಪಡಿಸಿ, ಜನಾಂಗಗಳೊಳಗಿಂದ ಕಿತ್ತುಬಿಟ್ಟು, ದೇಶಗಳೊಳಗಿಂದ ನಿನ್ನ ಹೆಸರನ್ನು ಅಳಿಸಿ, ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.”


ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.


ಚಿಯೋನ್ ನಗರವೇ ನಿನ್ನ ಸೇನಾವ್ಯೂಹಗಳನ್ನು ಈಗ ಒಟ್ಟುಗೂಡಿಸು. ಆಹಾ ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು