Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿನ್ನವರು ತಂದೆಗೆ ಮಾನಭಂಗ ಮಾಡಿದ್ದಾರೆ; ನಿನ್ನಲ್ಲಿ ಮುಟ್ಟಿನಿಂದ ಅಶುದ್ಧಳಾದವಳನ್ನು ಕೂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಿನ್ನವರು ತಮ್ಮ ತಂದೆಯವರಿಗೆ ಮಾನಭಂಗಮಾಡಿದ್ದಾರೆ; ನಿನ್ನಲ್ಲಿ ಮುಟ್ಟಿನಿಂದ ಅಶುದ್ಧಳಾದವಳನ್ನು ಕೂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿನ್ನಲ್ಲಿ ತಂದೆಗೆ ಮಾನಭಂಗಮಾಡಿದ್ದಾರೆ; ನಿನ್ನಲ್ಲಿ ಮುಟ್ಟಿನಿಂದ ಅಶುದ್ಧಳಾದವಳನ್ನು ಕೂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ತಮ್ಮ ತಂದೆಯ ಹೆಂಡತಿಯರೊಂದಿಗೆ ಅನೈತಿಕ ಸಂಬಂಧವಿಟ್ಟುಕೊಳ್ಳುತ್ತಾರೆ. ಸ್ತ್ರೀಯರ ಮೇಲೆ ಅತ್ಯಾಚಾರ ಮಾಡುತ್ತಾರೆ; ಮುಟ್ಟಾಗಿ ಅಶುದ್ಧರಾಗಿರುವ ಸ್ತ್ರೀಯರ ಮೇಲೂ ಅವರು ಅತ್ಯಾಚಾರ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಿಮ್ಮಲ್ಲಿ ತಂದೆಯ ಹಾಸಿಗೆಯನ್ನು ಅವಮಾನಿಸುವವರು ಇದ್ದಾರೆ, ನಿನ್ನಲ್ಲಿ ಮುಟ್ಟಿನಿಂದ ಅಶುದ್ಧಳಾದವಳನ್ನು ಕೂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:10
14 ತಿಳಿವುಗಳ ಹೋಲಿಕೆ  

“‘ಮುಟ್ಟಿನಿಂದ ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಬಾರದು.


ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ,


ಯಾವನಾದರೂ ಮಲತಾಯಿಯನ್ನು ಸಂಗಮಿಸಿದರೆ ಅವನು ತಂದೆಗೆ ಮಾನಭಂಗಮಾಡಿದ ಹಾಗಾಯಿತು; ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.


ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ.


ಬಡವರ ತಲೆಗಳನ್ನು ನೆಲದ ಧೂಳಿನಂತೆ ತುಳಿದು ಬಿಡುತ್ತಾರೆ, ದೀನರ ದಾರಿಗೆ ಅಡ್ಡ ಹಾಕುತ್ತಾರೆ. ಮಗನೂ ಮತ್ತು ತಂದೆಯೂ ಒಬ್ಬಳಲ್ಲಿ ಹೋಗಿ ನನ್ನ ಪವಿತ್ರ ನಾಮವನ್ನು ಅಪಕೀರ್ತಿಗೆ ಗುರಿಮಾಡುತ್ತಾರೆ.


ಇಸ್ರಾಯೇಲನ ಚೊಚ್ಚಲ ಮಗನಾದ ರೂಬೇನನ ವಂಶಾವಳಿ. ರೂಬೇನನು ಚೊಚ್ಚಲ ಮಗನಾಗಿದ್ದರೂ ಅವನು ತನ್ನ ತಂದೆಯ ಉಪಪತ್ನಿಯೊಂದಿಗೆ ಸಂಗಮಿಸಿ ಹಾಸಿಗೆಯನ್ನು ಹೊಲೆ ಮಾಡಿದ್ದರಿಂದ ಅವನ ಹಕ್ಕು ಇಸ್ರಾಯೇಲನ ಮಗನಾದ ಯೋಸೇಫನ ಕುಲಕ್ಕೆ ಕೊಡಲ್ಪಟ್ಟಿತು.


“ಅವರು, ಅತ್ತೆಯನ್ನು ಸಂಗಮಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.


“ಅವರು, ಮಲತಾಯಿಯನ್ನು ಸಂಗಮಿಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.


ಯಾವನಾದರೂ ಮುಟ್ಟಾದ ಸ್ತ್ರೀಯನ್ನು ಸಂಗಮಿಸಿದರೆ ಅವನು ಅವಳ ರಕ್ತಸ್ರಾವದ ಸ್ಥಾನವನ್ನು ಬಯಲುಪಡಿಸಿದವನು, ಅವಳು ಬಯಲುಪಡಿಸಿಕೊಂಡವಳು; ಆದುದರಿಂದ ಅವರಿಬ್ಬರನ್ನು ಕುಲದಿಂದ ಹೊರಗೆ ಹಾಕಬೇಕು.


ಆದರೆ ದಡಮೀರಿದ ಪ್ರವಾಹದಂತಿರುವ ನೀನು ಇನ್ನು ಶ್ರೇಷ್ಠನಾಗುವುದಿಲ್ಲ. ಏಕೆಂದರೆ ನೀನು ನಿನ್ನ ತಂದೆಯ ಹಾಸಿಗೆಯನ್ನು ಹತ್ತಿ, ಅದನ್ನು ಹೊಲೆ ಮಾಡಿದಿಯಲ್ಲಾ. ಇವನು ನನ್ನ ಮಂಚವನ್ನು ಹತ್ತಿದನು!


ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.


“‘ನಿಮ್ಮಲ್ಲಿ ಯಾರೂ ರಕ್ತಸಂಬಂಧವುಳ್ಳ ಸ್ತ್ರೀಯ ಸಹವಾಸವನ್ನು ಮಾಡಬಾರದು, ನಾನು ಯೆಹೋವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು