Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “‘ಇಗೋ, ನೀನು ದೋಚಿಕೊಂಡ ಲಾಭವನ್ನೂ, ನಿನ್ನಲ್ಲಿ ಸುರಿದ ರಕ್ತವನ್ನೂ ನಾನು ನೋಡಿ ಕೈ ಎತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಇಗೋ, ನೀನು ದೋಚಿಕೊಂಡ ಲಾಭವನ್ನೂ ನೀನು ಸುರಿದ ರಕ್ತವನ್ನೂ ನೋಡಿ ಕೈ ಎತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಗೋ, ನೀನು ದೋಚಿಕೊಂಡ ಲಾಭವನ್ನೂ ನಿನ್ನಲ್ಲಿ ಸುರಿದ ರಕ್ತವನ್ನೂ ನಾನು ನೋಡಿ ಕೈಬಡಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರು ಹೀಗೆ ಹೇಳಿದನು: “‘ನೋಡಿರಿ, ನಾನು ಕೈಯನ್ನು ಬಡಿದು ನಿಮ್ಮನ್ನು ನಿಲ್ಲಿಸಿ ಬಿಡುವೆನು. ನೀವು ಮೋಸ ಮಾಡಿದ್ದಕ್ಕಾಗಿಯೂ, ಜನರನ್ನು ಕೊಲೆ ಮಾಡಿದ್ದಕ್ಕಾಗಿಯೂ ನಿಮ್ಮನ್ನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ಆದ್ದರಿಂದ ನೀನು ಮಾಡಿದ ಈ ದುರ್ಲಾಭದಿಂದಲೂ, ನಿನ್ನಲ್ಲಿರುವ ನಿನ್ನ ರಕ್ತಾಪರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:13
16 ತಿಳಿವುಗಳ ಹೋಲಿಕೆ  

ನಾನು ಚಪ್ಪಾಳೆ ಹೊಡೆದು ನನ್ನ ರೋಷವನ್ನು ತೀರಿಸಿಕೊಳ್ಳುವೆನು. ಕರ್ತನಾದ ನಾನೇ ಇದನ್ನು ನುಡಿದಿದ್ದೇನೆ.”


ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.


ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ನರಪುತ್ರನೇ, ನೀನು ದೈವೋಕ್ತಿಯನ್ನು ಸಾರಿ ಚಪ್ಪಾಳೆ ಹೊಡಿ; ಖಡ್ಗವು ಎರಡರಷ್ಟು, ಮೂರರಷ್ಟು ಸಂಹರಿಸಲಿ! ಪ್ರಜೆಯನ್ನು ಹತಿಸುವ ಖಡ್ಗ! ಸುತ್ತಲು ಬೀಸಿ, ಅಧಿಪತಿಯನ್ನು ಹತಿಸುವ ಖಡ್ಗ!


ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ.


ನ್ಯಾಯನೀತಿಗಳನ್ನು ಮಾಡುವುದಕ್ಕೆ ಅವರಿಗೆ ತಿಳಿದಿಲ್ಲ” ಇದು ಯೆಹೋವನ ನುಡಿ. ತಮ್ಮ ಉಪ್ಪರಿಗೆಗಳಲ್ಲಿ ಬಾಧೆಯನ್ನೂ, ನಾಶನವನ್ನೂ ಕೂಡಿಸಿಟ್ಟುಕೊಂಡಿದ್ದಾರೆ.


ಬಡ್ಡಿ ಮತ್ತು ಅನ್ಯಾಯ ಲಾಭದಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವುದು.


ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆಹೊಡೆದು ಅವನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.


ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.


“ನರಪುತ್ರನೇ, ಬಾಬೆಲಿನ ಅರಸನ ಖಡ್ಗವು ಬರುವುದಕ್ಕೆ ಎರಡು ದಾರಿಗಳ ನಕ್ಷೆಯನ್ನು ಬರೆ; ಅವೆರಡು ಒಂದೇ ದೇಶದಿಂದ ಹೊರಟ ಹಾಗಿರಲಿ; ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು