Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾನು ನಿನ್ನನ್ನು ಜನಾಂಗಗಳಲ್ಲಿ ಚದುರಿಸಿ, ದೇಶ ದೇಶಗಳಿಗೆ ಹರಡಿಸಿಬಿಟ್ಟು, ನಿನ್ನ ಹೊಲಸನ್ನು ನಿನ್ನೊಳಗಿಂದ ತೆಗೆದು ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಾನು ನಿನ್ನನ್ನು ಜನಾಂಗಗಳಲ್ಲಿ ಚದರಿಸಿ, ದೇಶವಿದೇಶಗಳಿಗೆ ತೂರಿಬಿಟ್ಟು, ನಿನ್ನ ಹೊಲಸನ್ನು ನಿನ್ನೊಳಗಿಂದ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾನು ನಿನ್ನನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಟ್ಟು ನಿನ್ನ ಹೊಲಸನ್ನು ನಿನ್ನೊಳಗಿಂದ ತೆಗೆದು ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾನು ನಿಮ್ಮನ್ನು ಜನಾಂಗಗಳ ಮಧ್ಯೆ ಚದರಿಸಿಬಿಡುವೆನು. ನಿಮ್ಮನ್ನು ಬಹುದೇಶಗಳ ಮಧ್ಯೆ ಅಟ್ಟಿಬಿಡುವೆನು. ಈ ನಗರದಲ್ಲಿರುವ ಅಸಹ್ಯ ವಸ್ತುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿನ್ನನ್ನು ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು. ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:15
25 ತಿಳಿವುಗಳ ಹೋಲಿಕೆ  

ಆದರೂ, ನಿನ್ನ ಸೇವಕನಾದ ಮೋಶೆಗೆ ಹೇಳಿದ ಮಾತನ್ನು ನೆನಪಿಸಿಕೊಳ್ಳಿರಿ; ‘ನೀವು ಅವಿಧೇಯರಾಗಿ ನಡೆಯುವುದಾದರೆ ನಾನು ನಿಮ್ಮನ್ನು ಜನಾಂಗಗಳ ಮದ್ಯ ಚದುರಿಸಿಬಿಡುವೆನು;


ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು. ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯ ದೇಶವನ್ನು ಹಾಳುಮಾಡಿದರು.’”


ಬೆಳ್ಳಿಯು ಕುಲುಮೆಯೊಳಗೆ ಕರಗುವಂತೆ ನೀವು ನನ್ನ ರೋಷಾಗ್ನಿಯಲ್ಲಿ ಕರಗುವಿರಿ; ನಿಮ್ಮ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.’”


ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಜನ ಮಾತ್ರ ಉಳಿಯುವಿರಿ.


ಜನಾಂಗಗಳೊಳಗೆ ಅವರನ್ನು ಚದರಿಸಿ, ದೇಶಗಳಿಗೆ ತೂರಿಬಿಟ್ಟು, ಅವರ ದುರ್ಮಾರ್ಗ, ದುರಾಚಾರಗಳಿಗೆ ಸರಿಯಾಗಿ ನ್ಯಾಯತೀರಿಸಿದೆನು.


ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು.


ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.


ಹೊಟ್ಟನು ತೂರುವ ಮೊರವನ್ನು ಆತನು ಕೈಯಲ್ಲಿ ಹಿಡಿದಿದ್ದಾನೆ; ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನು ಮಾಡಿ ತನ್ನ ಗೋದಿಯನ್ನು ಕಣಜದಲ್ಲಿ ತುಂಬಿಕೊಂಡು ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟು ಬಿಡುವನು” ಎಂದು ಹೇಳಿದನು.


“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.


ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.


“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”


ನನ್ನ ಕುರಿಗಳು ಪರ್ವತಗಳ ಮೇಲೆಯೂ, ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದುರಿಹೋಗಿದೆ; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.


ಹೀಗೆ ನಾನು ನಿನ್ನ ದುಷ್ಕರ್ಮವನ್ನು, ನೀನು ಐಗುಪ್ತದಲ್ಲಿ ಇದ್ದಂದಿನಿಂದ ನಡೆದು ಬಂದ ನಿನ್ನ ವ್ಯಭಿಚಾರವನ್ನೂ ನಿನ್ನಿಂದ ತೊಲಗಿಸುವೆನು; ಆ ಮೇಲೆ ನೀನು ಅವರ ಕಡೆಗೆ ಇನ್ನು ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತಾರದೆ ಇರುವಿ.”


“ನರಪುತ್ರನೇ, ಇಸ್ರಾಯೇಲ್ ವಂಶವೆಂಬ ಲೋಹವು ನನ್ನ ದೃಷ್ಟಿಯಲ್ಲಿ ಕಲ್ಮಷವಾಗಿದೆ; ಕುಲುಮೆಯಲ್ಲಿನ ತಾಮ್ರ, ತವರ, ಕಬ್ಬಿಣ, ಸೀಸ ಮತ್ತು ಕಂದು ಬೆಳ್ಳಿಯ ಹಾಗೆ ಇದ್ದಾರೆ.


ನನಗೆ ತಿರುಗಿ ಬಿದ್ದು ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಕಳುಹಿಸಿ ಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರು ಮಾಡಿದರೂ, ಅವರು ಇಸ್ರಾಯೇಲ್ ದೇಶಕ್ಕೆ ಸೇರುವುದೇ ಇಲ್ಲ; ನಾನೇ ಯೆಹೋವನು” ಎಂದು ನಿಮಗೆ ಗೊತ್ತಾಗುವುದು.


ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲೂ ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


“ಹಿಜ್ಕೀಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇಮಿನಲ್ಲಿ ನಡೆಸಿದ್ದಕ್ಕೆ ಪ್ರತಿಯಾಗಿ, ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.


ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಪುಟಕ್ಕೆ ಹಾಕಿ, ನಿನ್ನ ಹೊಲಸುತನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಬಿಡುವೆನು.


ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲಾ ಜನಾಂಗಗಳಲ್ಲಿಯೂ ಯೆಹೋವನು ನಿಮ್ಮನ್ನು ಚದರಿಸುವನು. ಅಲ್ಲಿ ನಿಮಗಾಗಲಿ ಅಥವಾ ನಿಮ್ಮ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.


ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸುತ್ತೇನೆಂದೂ ದೇಶದಲ್ಲಿ ಹರಡಿಸುತ್ತೇನೆಂದೂ ಮರುಭೂಮಿಯಲ್ಲಿ ಪ್ರಮಾಣ ಮಾಡಿ ಹೇಳಿದೆ.


ಹೀಗಿರಲು, ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು