Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ. ಆಸ್ತಿಯನ್ನೂ, ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹಳ ಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ. ನರಪ್ರಾಣಿಗಳನ್ನು ನುಂಗಿದ್ದಾರೆ, ಆಸ್ತಿಯನ್ನೂ ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹುಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆ ನಾಡಿನೊಳಗೆ ಪ್ರವಾದಿಗಳು ಒಳಸಂಚುಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ, ಆಸ್ತಿಯನ್ನೂ ಅಮೂಲ್ಯವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹುಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಜೆರುಸಲೇಮಿನ ಪ್ರವಾದಿಗಳು ತಾನು ಬೇಟೆಯಾಡಿ ಕೊಂದ ಪ್ರಾಣಿಯನ್ನು ತಿನ್ನುವ ಗರ್ಜಿಸುವ ಸಿಂಹದಂತಿದ್ದಾರೆ. ಆ ಪ್ರವಾದಿಗಳು ಅನೇಕ ಪ್ರಾಣಗಳನ್ನು ತೆಗೆದುಕೊಂಡಿದ್ದಾರೆ. ಅವರಿಂದ ಬೆಲೆಬಾಳುವ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಜೆರುಸಲೇಮಿನಲ್ಲಿ ಅನೇಕ ಸ್ತ್ರೀಯರು ವಿಧವೆಯರಾಗಲು ಅವರೇ ಕಾರಣರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಬೇಟೆಯನ್ನು ಸುಲಿದುಕೊಳ್ಳುವ ಗರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಅವಳ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ, ಸಂಪತ್ತನ್ನೂ, ಅಮೂಲ್ಯವಾದ ವಸ್ತುವನ್ನೂ ದೋಚಿಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:25
30 ತಿಳಿವುಗಳ ಹೋಲಿಕೆ  

ಕಳ್ಳರ ಗುಂಪು ಒಬ್ಬನಿಗೆ ಹೊಂಚು ಹಾಕುವಂತೆ ಯಾಜಕರು ಗುಂಪಾಗಿ ದಾರಿಯಲ್ಲಿ ಹೊಂಚಿಕೊಂಡಿದ್ದು, ಶೆಕೆಮಿಗೆ ಯಾತ್ರೆ ಹೋಗುವವರನ್ನು ದೋಚಿ ಕೊಂದುಹಾಕುತ್ತಾರೆ; ಹೌದು, ಘೋರಕೃತ್ಯವನ್ನು ನಡೆಸುತ್ತಾರೆ.


ನೀವು ಜವೆಗೋದಿಯ ಹಿಡಿಗಳನ್ನೂ, ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳು ಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವುದರಿಂದ ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.’


ಯೆಹೋವನು ನನಗೆ, “ಯೆಹೂದ್ಯರಲ್ಲಿಯೂ ಮತ್ತು ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ.


ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು.


ಲವಂಗ, ಚಕ್ಕೆ, ಧೂಪ, ರಕ್ತಬೋಳ, ಸುಗಂಧತೈಲ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮರು, ಮನುಷ್ಯಪ್ರಾಣಗಳು ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಗೋಳಾಡುವರು.


ಆ ಸ್ತ್ರೀಯು ನೀತಿವಂತರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿನೀಡಿ ಹತರಾದವರ ರಕ್ತವನ್ನು ಕುಡಿದು ಮತ್ತಳಾಗಿರುವುದನ್ನು ಕಂಡೆನು. ನಾನು ಅವಳನ್ನು ನೋಡಿ ಅತ್ಯಾಶ್ಚರ್ಯಪಟ್ಟೆನು.


ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತನಾಡುವುದಲ್ಲದೆ, ತನ್ನನ್ನು ಆರಾಧಿಸದವರೆಲ್ಲರಿಗೂ ಮರಣದಂಡನೆಯಾಗುವಂತೆ ಮಾಡುವ ಶಕ್ತಿಯು ಆದಕ್ಕಿತ್ತು.


ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು, ಅದು ಘಟಸರ್ಪದಂತೆ ಮಾತನಾಡಿತು.


ಅವರು ವಿಧವೆಯರ ಮನೆಗಳನ್ನು ನುಂಗಿ, ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು” ಅಂದನು.


ಇವರು ವಿಧವೆಯರ ಮನೆಗಳನ್ನು ದೋಚಿ ತೋರಿಕೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಿನ ದಂಡನೆಯನ್ನು ಹೊಂದುವರು” ಎಂದನು.


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.


ಚೀಯೋನಿನ ಮಧ್ಯದಲ್ಲಿ ಶಿಷ್ಟರ ರಕ್ತವನ್ನು ಸುರಿಸಿದ ಯಾಜಕರ ಪಾಪ ಮತ್ತು ಪ್ರವಾದಿಗಳ ದೋಷಗಳಿಂದಲೇ ಈ ಗತಿ ಬಂತು.


ನಿನ್ನ ಪ್ರವಾದಿಗಳು ಕಂಡ ದರ್ಶನ, ಹೇಳಿದ ಪ್ರವಾದನೆಯ ವಾಕ್ಯಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದ ಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವುದಕ್ಕೆ ಆಸ್ಪದವಾದವು.


ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು. ಯುವಕರ ಮತ್ತು ತಾಯಂದಿರ ಮೇಲೆ ಕೊಳ್ಳೆ ಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು. ಅವರ ಮೇಲೆ ಕಳವಳವನ್ನು ಮತ್ತು ದಿಗಿಲನ್ನು ತಟ್ಟನೆ ಬೀಳಿಸುವೆನು.


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.


ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”


ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.


ನೋಡು ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ” ಎಂದು ಹೇಳಿದನು.


ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ, ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡತಿಯರು ಮಕ್ಕಳ್ಳಿಲ್ಲದವರಾಗಿಯೂ, ವಿಧವೆಯರಾಗಿಯೂ ಇರಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ. ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ.


“ನರಪುತ್ರನೇ, ಪ್ರವಾದನೆ ಮಾಡಿ, ಸ್ವಕಲ್ಪಿತವಾದುದನ್ನೇ ಸಾರುತ್ತಲಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತಾ ಹೀಗೆ ಹೇಳು, ‘ಯೆಹೋವನ ವಾಕ್ಯವನ್ನು ಕೇಳಿರಿ.


ನಿನ್ನವರು ತಾಯಿ ತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ, ವಿಧವೆಯರನ್ನೂ ಹಿಂಸಿಸಿದ್ದಾರೆ.


“ನರಪುತ್ರನೇ, ಇಸ್ರಾಯೇಲಿನ ಮಂದೆಯ ಕುರುಬರಿಗೆ ಈ ಪ್ರವಾದನೆಯನ್ನು ನುಡಿ, ಪ್ರವಾದಿಸಿ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಯ್ಯೋ, ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವ ಇಸ್ರಾಯೇಲಿನ ಕುರುಬರ ಗತಿಯನ್ನು ಏನು ಹೇಳಲಿ! ಕುರಿಗಳನ್ನು ಮೇಯಿಸುವುದು ಕುರುಬರ ಧರ್ಮವಲ್ಲವೋ?


ನೀವು ಕೊಬ್ಬಿನ ಮಾಂಸವನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಕೊಬ್ಬಿದ ಕುರಿಗಳನ್ನು ಕೊಲ್ಲುತ್ತೀರಿ; ಆದರೆ ಕುರಿಗಳನ್ನು ಮೇಯಿಸುವುದಿಲ್ಲ.


ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ. ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ. ಅವರೆಲ್ಲರು ಸೊದೋಮಿನಂತೆ, ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು