ಯೆಹೆಜ್ಕೇಲನು 22:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರ ಮಾಡಿದ್ದಾರೆ; ಮೀಸಲಾದದ್ದಕ್ಕೂ, ಮೀಸಲಿಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧವಾದ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಉಲ್ಲಂಘಿಸಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಗೊಳಿಸಿದ್ದಾರೆ; ಮೀಸಲಾದುದಕ್ಕೂ ಮೀಸಲಲ್ಲದ್ದಕ್ಕೂ ಭೇದವೆಣಿಸಲಿಲ್ಲ. ಶುದ್ಧಾ ಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯೆ ಅಪಕೀರ್ತಿಗೆ ಗುರಿಯಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧವಸ್ತುಗಳನ್ನು ಹೊಲೆಮಾಡಿದ್ದಾರೆ; ಮೀಸಲಾದದ್ದಕ್ಕೂ ಮೀಸಲಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧಾಶುದ್ಧವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇವಿುಸಿದ ಸಬ್ಬತ್ ದಿನಗಳಿಗೆ ವಿಮುಖರಾಗಿದ್ದಾರೆ; ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ಯಾಜಕರು ನನ್ನ ಉಪದೇಶವನ್ನು ನಿರಾಕರಿಸಿರುತ್ತಾರೆ; ಪರಿಶುದ್ಧ ವಸ್ತುಗಳನ್ನು ಸರಿಯಾಗಿ ಲಕ್ಷ್ಯ ಮಾಡುತ್ತಿಲ್ಲ; ಅವುಗಳಿಗೆ ಮಹತ್ವವನ್ನು ಕೊಡುತ್ತಿಲ್ಲ. ಅವರು ಪವಿತ್ರ ವಸ್ತುಗಳನ್ನು ಅಪವಿತ್ರ ವಸ್ತುಗಳಂತೆ ನೋಡುತ್ತಿದ್ದಾರೆ. ಯಾವುದು ಶುದ್ಧ, ಯಾವುದು ಅಶುದ್ಧ ಎಂಬುದರ ಬಗ್ಗೆ ಅವರು ಜನರಿಗೆ ಸರಿಯಾಗಿ ಉಪದೇಶಿಸುತ್ತಿಲ್ಲ. ನನ್ನ ವಿಶೇಷ ವಿಶ್ರಾಂತಿ ದಿವಸಗಳನ್ನು ಮಾನ್ಯ ಮಾಡುತ್ತಿಲ್ಲ. ನಾನು ಏನೂ ಅಲ್ಲವೆಂಬಂತೆ ನನ್ನನ್ನು ಅವರು ನೋಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ. ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ. ಅವರು ಪರಿಶುದ್ಧವಾದದ್ದಕ್ಕೂ, ಅಪವಿತ್ರವಾದದ್ದಕ್ಕೂ ಬೇಧವೆಣಿಸಲಿಲ್ಲ. ಶುದ್ಧ, ಅಶುದ್ಧಗಳ ವ್ಯತ್ಯಾಸವಿಲ್ಲ ಎಂದು ಬೋಧಿಸಿದರು. ನನ್ನ ಸಬ್ಬತ್ ದಿನಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದ್ದರಿಂದ ನಾನು ಅವರಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ. ಅಧ್ಯಾಯವನ್ನು ನೋಡಿ |