ಯೆಹೆಜ್ಕೇಲನು 22:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅಲ್ಲಿನ ಸುಳ್ಳು ಪ್ರವಾದಿಗಳು ಇವರಿಗಾಗಿ ವ್ಯರ್ಥ ದರ್ಶನವನ್ನೂ, ಸುಳ್ಳು ಕಣಿಯನ್ನೂ ಕಂಡು ಯೆಹೋವನು ಅವರೊಂದಿಗೆ ಮಾತನಾಡದಿದ್ದರೂ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿಯುತ್ತಾ ಮೇಲೆ ಸುಣ್ಣ ಹಚ್ಚುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅಲ್ಲಿನ ಪ್ರವಾದಿಗಳು ಇವರಿಗಾಗಿ ಮಿಥ್ಯ ದರ್ಶನವನ್ನು ಕಂಡು, ಸುಳ್ಳು ಕಣಿಯನ್ನು ಹೇಳಿ, ಸರ್ವೇಶ್ವರ ಮಾತಾಡದಿದ್ದರೂ ‘ಸರ್ವೇಶ್ವರ ದೇವರು ಇಂತೆನ್ನುತ್ತಾರೆ’ ಎಂದು ನುಡಿಯುತ್ತಾ ಮೇಲೆ ಮೇಲೆ ಸುಣ್ಣ ಬಳಿದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅಲ್ಲಿನ ಪ್ರವಾದಿಗಳು ಇವರಿಗಾಗಿ ವಿುಥ್ಯಾದರ್ಶನವನ್ನೂ ಸುಳ್ಳು ಕಣಿಯನ್ನೂ ಕಂಡು ಯೆಹೋವನು ಮಾತಾಡದಿದ್ದರೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯುತ್ತಾ ಮೇಲೆ ಮೇಲೆ ಸುಣ್ಣ ಬಳಿದಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 “ಪ್ರವಾದಿಗಳು ಜನರನ್ನು ಎಚ್ಚರಿಸುವದಿಲ್ಲ. ಸತ್ಯವನ್ನು ಮುಚ್ಚಿಡುತ್ತಾರೆ. ಒಂದು ಗೋಡೆಯನ್ನು ದುರಸ್ತಿ ಮಾಡದೆ ಅದರ ರಂಧ್ರಗಳನ್ನು ಗಾರೆಯಿಂದ ಮುಚ್ಚುವ ಕೆಲಸಗಾರರಂತಿದ್ದಾರೆ. ಅವರು ಸುಳ್ಳುದರ್ಶನಗಳನ್ನೆ ನೋಡುತ್ತಾರೆ. ತಮ್ಮ ಭವಿಷ್ಯದ ಬಗ್ಗೆ ಶಕುನದ ಮೂಲಕ ತಿಳಿದುಕೊಳ್ಳುವುದೆಲ್ಲ ಸುಳ್ಳಾಗಿರುತ್ತದೆ. ಅವರು, ‘ನನ್ನ ಒಡೆಯನಾದ ಯೆಹೋವನು ಹೇಳಿದನು’ ಎಂಬುದಾಗಿ ಸುಳ್ಳು ಹೇಳುವರು. ಆದರೆ ನಿಜವಾಗಿಯೂ ಯೆಹೋವನು ಅವರ ಕೂಡ ಮಾತನಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಯೆಹೋವ ದೇವರು ಮಾತನಾಡದಿದ್ದರೂ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ’ ಎಂದು ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ. ಅಧ್ಯಾಯವನ್ನು ನೋಡಿ |