Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿನ್ನ ಮಧ್ಯದಲ್ಲಿ ರಕ್ತವನ್ನು ಸುರಿಸಿ, ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ನಗರಿಯೇ! ನಿನ್ನ ಕೇಡಿಗಾಗಿ ವಿಗ್ರಹಗಳನ್ನು ಮಾಡಿಕೊಂಡು ನಿನ್ನನ್ನು ಹೊಲೆಗೆಡಿಸಿಕೊಂಡ ನಗರಿಯೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಿನ್ನ ಮಧ್ಯೆ ರಕ್ತ ಸುರಿಸಿ, ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ನಗರಿಯೇ, ನಿನ್ನ ಕೇಡಿಗಾಗಿಯೇ ವಿಗ್ರಹಗಳನ್ನು ಮಾಡಿಕೊಂಡು ನಿನ್ನನ್ನೆ ಹೊಲೆಗೆಡಿಸಿಕೊಂಡ ನಗರಿಯೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿನ್ನ ಮಧ್ಯದಲ್ಲಿ ರಕ್ತವನ್ನು ಸುರಿಸಿ ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ಪುರಿಯೇ! ನಿನ್ನ ಕೇಡಿಗಾಗಿ ಬೊಂಬೆಗಳನ್ನು ಮಾಡಿಕೊಂಡು ನಿನ್ನನ್ನು ಹೊಲೆಗೆಡಿಸಿಕೊಂಡ ನಗರಿಯೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀನು ಹೀಗೆ ಹೇಳಬೇಕು: ‘ನನ್ನ ಒಡೆಯನಾದ ಯೆಹೋವನ ಮಾತುಗಳಿವು. ಈ ನಗರವು ಕೊಲೆಗಾರರಿಂದ ತುಂಬಿದೆ. ಆದ್ದರಿಂದ ಆಕೆಯ ಶಿಕ್ಷೆಯ ದಿನವು ಬಂದಿದೆ. ಆಕೆ ತನಗೋಸ್ಕರ ಹೊಲಸು ವಿಗ್ರಹಗಳನ್ನು ಮಾಡಿ ತನ್ನನ್ನು ಹೊಲಸು ಮಾಡಿಕೊಂಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಮೇಲೆ ನೀನು ಹೇಳಬೇಕಾದದ್ದೇನೆಂದರೆ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಪಟ್ಟಣವು ಅದರ ಮಧ್ಯದಲ್ಲಿ ಅದರ ದಂಡನೆಯ ಕಾಲ ಬರುವಂತೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧಮಾಡುವಂತೆ ತನ್ನಲ್ಲಿ ವಿಗ್ರಹ ಮಾಡಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:3
22 ತಿಳಿವುಗಳ ಹೋಲಿಕೆ  

ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.


ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.


ಅವರೊಳಗಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಬೆಳಗ್ಗೆ ಕಡಿಯುವುದಕ್ಕೆ ಎಲುಬು ಸಹಾ ಬಿಡದ ಕ್ರೂರರು.


ನೀತಿಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ, ವ್ಯಭಿಚಾರಿಣಿಯರಿಗೂ, ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಮಯವಾಗಿದೆ.”


ಅವರು ವ್ಯಭಿಚಾರ ಮಾಡಿದ್ದಾರೆ, ಅವರ ಕೈ ರಕ್ತಮಯವಾಗಿದೆ, ತಮ್ಮ ವಿಗ್ರಹಗಳಿಂದ ವ್ಯಭಿಚಾರಮಾಡಿದ್ದಾರೆ, ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬದಲಾಗಿ ಆಹುತಿಕೊಟ್ಟಿದ್ದಾರೆ.


“‘ಇಗೋ, ಇಸ್ರಾಯೇಲಿನ ಪ್ರಭುಗಳು ತಮ್ಮ ತಮ್ಮ ಶಕ್ತ್ಯಾನುಸಾರ ನಿನ್ನಲ್ಲಿ ರಕ್ತ ಸುರಿಸುತ್ತಲೇ ಇದ್ದಾರೆ.


ನೀನು ಸುರಿಸಿದ ರಕ್ತದಿಂದ ಅಪರಾಧಿಯಾಗಿರುವೆ; ಮಾಡಿಕೊಂಡ ವಿಗ್ರಹಗಳಿಂದ ಅಶುದ್ಧವಾಗಿ, ಶಿಕ್ಷೆಯ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿರುವೆ. ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ, ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ.


ನಾನೇ ಯೆಹೋವನು; ನಾನು ನುಡಿದೇ ನುಡಿಯುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು; ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು’” ಇದು ಕರ್ತನಾದ ಯೆಹೋವನ ವಾಕ್ಯ.


ಆತನು ನನಗೆ, “ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡುವುದಿಲ್ಲ’ ಎಂಬುದಾಗಿ ಮಾತನಾಡಿಕೊಳ್ಳುತ್ತಿದ್ದಾರೆ.


“ನರಪುತ್ರನೇ, ರಕ್ತಮಯವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೋ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು,


ಅವರಿಗೆ ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು; ಅವರೆಲ್ಲರೂ ಅಶ್ಶೂರ್ಯರಲ್ಲಿ ಉತ್ತಮೋತ್ತಮರು; ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು.


ಯೆಹೂದ ರಾಜ್ಯದ ನಿರಪರಾಧಿಗಳ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸದೆ ಹೋದನು.


ಅವುಗಳಿಗಾಗಿ ಯೆಹೋವನು ಯೆರೂಸಲೇಮಿನವರನ್ನು ಕ್ಷಮಿಸದೆ ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದರಿಂದ ಅವರಿಗೆ ಶಿಕ್ಷೆಯಾಯಿತು. ಇದು ಯೆಹೋವನ ಅಪ್ಪಣೆಯ ಪ್ರಕಾರ ನಡೆಯಿತು.


ಅವರು ತಮ್ಮ ದುಷ್ಕೃತ್ಯಗಳಿಂದ ಅಶುದ್ಧರಾದರು. ದುರಾಚಾರಗಳಿಂದ ದೇವದ್ರೋಹಿಗಳಾದರು.


ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ.


ಆದುದರಿಂದ ನೀನು ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಲ್ಲವೇ? ವಿಗ್ರಹಗಳ ಕಡೆಗೆ ನಿಮ್ಮ ಕಣ್ಣೆತ್ತಿ ನೋಡುತ್ತೀರಿ ಜನರ ರಕ್ತವನ್ನು ಚೆಲ್ಲುತ್ತೀರಿ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?


ಚೀಯೋನನ್ನು ನರಹತ್ಯದಿಂದಲೂ, ಯೆರೂಸಲೇಮನ್ನು ಅನ್ಯಾಯದಿಂದಲೂ ಕಟ್ಟುವವರೇ, ಇದನ್ನು ಕಿವಿಗೊಟ್ಟು ಕೇಳಿರಿ, ಕೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು