Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 “‘ನಾನು ದೇಶವನ್ನು ಹಾಳು ಮಾಡದಂತೆ ನನ್ನೆದುರಿಗೆ ದೇಶ ರಕ್ಷಣೆಗಾಗಿ ಪೌಳಿ ಗೋಡೆಯ ಬಿರುಕಿನಲ್ಲಿ ನಿಲ್ಲುವುದಕ್ಕೂ, ಗೋಡೆಯನ್ನು ಗಟ್ಟಿಮಾಡುವುದಕ್ಕೂ ತಕ್ಕವನನ್ನು ನಾನು ಹುಡುಕಲು ಯಾರೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನಾನು ದೇಶವನ್ನು ಹಾಳುಮಾಡದಂತೆ ನನ್ನೆದುರಿಗೆ ದೇಶ ರಕ್ಷಣೆಗಾಗಿ, ಪೌಳಿಯ ಒಡಕಿನಲ್ಲಿ ನಿಲ್ಲುವುದಕ್ಕೂ ಗೋಡೆಯನ್ನು ಗಟ್ಟಿಮಾಡುವುದಕ್ಕೂ ತಕ್ಕವನನ್ನು ನಾನು ಹುಡುಕಿದರೂ ಯಾರೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಾನು ದೇಶವನ್ನು ಹಾಳುಮಾಡದಂತೆ ನನ್ನೆದುರಿಗೆ ದೇಶರಕ್ಷಣೆಗಾಗಿ ಪೌಳಿಯ ಒಡಕಿನಲ್ಲಿ ನಿಲ್ಲುವದಕ್ಕೂ ಗೋಡೆಯನ್ನು ಗಟ್ಟಿಮಾಡುವದಕ್ಕೂ ತಕ್ಕವನನ್ನು ನಾನು ಹುಡುಕಲು ಯಾರೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ನನ್ನ ಕೋಪದಿಂದ ದೇಶವು ನಾಶವಾಗದಂತೆ ಅದನ್ನು ರಕ್ಷಿಸಲು ಗೋಡೆಯನ್ನು ಸರಿಪಡಿಸುವುದಕ್ಕಾಗಿಯೂ ಗೋಡೆಯು ಒಡೆದುಹೋಗಿದ್ದ ಸ್ಥಳದಲ್ಲಿ ನಿಂತುಕೊಳ್ಳುವುದಕ್ಕಾಗಿ ಅವರಲ್ಲಿ ನಾನು ಒಬ್ಬನನ್ನು ಎದುರುನೋಡಿದೆ. ಆದರೆ ಯಾರೂ ನನಗೆ ಸಿಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ಗೋಡೆಯನ್ನು ಕಟ್ಟಿ ನಾಡನ್ನು ನಾನು ಹಾಳುಮಾಡದಂತೆ ನಾಡಿನ ಪರವಾಗಿ ಪೌಳಿಗೋಡೆಯ ಬಿರುಕಿನಲ್ಲಿ ನಿಲ್ಲುವ ಒಬ್ಬ ಮನುಷ್ಯನನ್ನು ಅವರೊಳಗೆ ನಾನು ಹುಡುಕಿದೆನು. ಆದರೆ ಯಾರೂ ಸಿಕ್ಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:30
13 ತಿಳಿವುಗಳ ಹೋಲಿಕೆ  

ಯೆಹೋವನು ಇವುಗಳನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು; ಉದ್ಧಾರಕನಾದ ಯಾವ ಪುರುಷನೂ ಇಲ್ಲವೆಂದು ಕಂಡು ಸ್ತಬ್ಧನಾದನು; ಆಗ ಆತನ ಸ್ವಹಸ್ತವೇ ಆತನಿಗೆ ರಕ್ಷಣಾ ಸಾಧನವಾಯಿತು, ಆತನ ಧರ್ಮವೇ ಆತನಿಗೆ ಆಧಾರವಾಯಿತು.


ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡುತ್ತಾ ಅಲ್ಲಿನ ಚೌಕಗಳಲ್ಲಿ ಹುಡುಕಿರಿ; ನ್ಯಾಯವನ್ನು ಕೈಕೊಂಡು ಸತ್ಯವನ್ನು ಅನುಸರಿಸುವ ಒಬ್ಬನಾದರೂ ಇದ್ದಾನೋ? ಇಂತಹ ಸತ್ಪುರುಷನನ್ನು ಕಂಡುಕೊಳ್ಳಬಹುದೇ ಎಂಬುದನ್ನು ನೋಡಿ ನಿಶ್ಚಯಿಸಿರಿ; ಸಿಕ್ಕಿದರೆ ನಾನು ಪಟ್ಟಣವನ್ನು ಕ್ಷಮಿಸುವೆನು.


ಆದುದರಿಂದ ಆತನು ಅವರನ್ನು ಸಂಹರಿಸುವೆನು ಎನ್ನಲು, ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ, ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.


ಯೆಹೋವನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿ ಗೋಡೆಯ ಒಡಕುಗಳನ್ನೇರಲಿಲ್ಲ, ಇಸ್ರಾಯೇಲ್ ವಂಶದ ರಕ್ಷಣೆಗಾಗಿ ಗೋಡೆಯನ್ನು ಭದ್ರ ಮಾಡಲೂ ಇಲ್ಲ. ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ,


ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ, ಯಾವ ಬೆಂಬಲವೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆನು; ಆಗ ನನ್ನ ಸ್ವಹಸ್ತವೇ ನನಗೆ ರಕ್ಷಣಾಸಾಧನವಾಯಿತು, ನನ್ನ ರೌದ್ರವೇ ನನಗೆ ಆಧಾರವಾಯಿತು.


ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!


ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.


ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತನಾಡಿಕೊಳ್ಳುತ್ತಿರಲಿಲ್ಲ; ಯಾರು ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು ‘ಆಹಾ, ನಾನು ಎಂಥಾ ಕೆಲಸ ಮಾಡಿದೆ’ ಎಂದುಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೆ ತ್ವರೆಪಡುತ್ತಾನೆ.


ಇಸ್ರಾಯೇಲರು ಯೆಹೋವನಿಗೆ ಅವಿಧೇಯರಾಗಿ ಘೋರಕಷ್ಟವನ್ನು ಅನುಭವಿಸುತ್ತಿದ್ದರು. ಅವರಲ್ಲಿ ಸ್ವತಂತ್ರರೂ, ಪರತಂತ್ರರೂ ನಾಶವಾಗುತ್ತಿದ್ದರೆ, ಅವರನ್ನು ರಕ್ಷಿಸುವವನು ಒಬ್ಬನೂ ಇರಲಿಲ್ಲ.


ನಿನ್ನ ಕೆಟ್ಟತನದಿಂದ ನಿನ್ನಂಥ ಮನುಷ್ಯನಿಗೇ ನಷ್ಟವಾದೀತು, ನಿನ್ನ ನೀತಿಯಿಂದ ನರಜನ್ಮದವನಿಗೇನು ಲಾಭ ಸಿಕ್ಕಬಹುದು.


ದುಷ್ಟರಿಗೆ ವಿರುದ್ಧವಾಗಿ ನನಗೋಸ್ಕರ ಏಳುವವರು ಯಾರು? ಕೆಡುಕರಿಗೆ ವಿರುದ್ಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು