ಯೆಹೆಜ್ಕೇಲನು 22:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀನು ಸುರಿಸಿದ ರಕ್ತದಿಂದ ಅಪರಾಧಿಯಾಗಿರುವೆ; ಮಾಡಿಕೊಂಡ ವಿಗ್ರಹಗಳಿಂದ ಅಶುದ್ಧವಾಗಿ, ಶಿಕ್ಷೆಯ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿರುವೆ. ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ, ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನೀನು ಸುರಿಸಿದ ರಕ್ತದಿಂದ ಅಪರಾಧಿಯಾಗಿರುವೆ; ಮಾಡಿಕೊಂಡ ವಿಗ್ರಹಗಳಿಂದ ಅಶುದ್ಧವಾಗಿರುವೆ. ಹೀಗೆ ನಿನ್ನ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿರುವೆ. ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀನು ಸುರಿಸಿದ ರಕ್ತದಿಂದ ಅಪರಾಧಿಯೂ ಮಾಡಿಕೊಂಡ ಬೊಂಬೆಗಳಿಂದ ಹೊಲಸೂ ಆಗಿ ಶಿಕ್ಷೆಯ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿದ್ದೀ; ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “‘ಜೆರುಸಲೇಮಿನ ನಿವಾಸಿಗಳೇ, ನೀವು ಅನೇಕರನ್ನು ಕೊಂದಿದ್ದೀರಿ. ಆದ್ದರಿಂದ ನೀವು ದೋಷಿಗಳು. ನೀವು ಹೊಲಸು ವಿಗ್ರಹಗಳನ್ನು ಮಾಡಿಕೊಂಡಿದ್ದೀರಿ. ಆದ್ದರಿಂದ ನೀವು ಅಶುದ್ಧರು. ನಿಮ್ಮನ್ನು ಶಿಕ್ಷಿಸುವ ಸಮಯ ಈಗ ಬಂದಿದೆ. ನಿಮ್ಮ ಅಂತ್ಯವು ಬಂದಿದೆ. ಆದ್ದರಿಂದಲೇ ಇತರ ಜನಾಂಗಗಳವರು ನಿಮ್ಮನ್ನು ಗೇಲಿಮಾಡುವರು. ಎಲ್ಲಾ ದೇಶಗಳು ನಿಮ್ಮನ್ನು ನೋಡಿ ನಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀನು ಚೆಲ್ಲಿದ ನಿನ್ನ ರಕ್ತದಿಂದ ನೀನು ಅಪರಾಧಿಯಾದೆ; ನೀನು ಮಾಡಿದ ನಿನ್ನ ವಿಗ್ರಹಗಳಿಂದ ನೀನು ಅಶುದ್ಧನಾದೆ; ನಿನ್ನ ದಿನಗಳನ್ನು ಸಮೀಪಿಸಿರುವೆ; ಮತ್ತು ನಿಮ್ಮ ವರ್ಷಗಳ ಅಂತ್ಯವು ಬಂದಿದೆ. ಆದ್ದರಿಂದ ನಿನ್ನನ್ನು ಇತರ ಜನಾಂಗಗಳಿಗೆ ನಾಚಿಕೆಯಾಗಿಯೂ, ಎಲ್ಲಾ ದೇಶಗಳಿಗೂ ನಿಂದೆಯಾಗಿಯೂ ಮಾಡಿದ್ದೇನೆ. ಅಧ್ಯಾಯವನ್ನು ನೋಡಿ |