Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನವರು ತಾಯಿ ತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ, ವಿಧವೆಯರನ್ನೂ ಹಿಂಸಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿನ್ನವರು ತಾಯಿತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಯರನ್ನು ಬಾದಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿನ್ನವರು ತಾಯಿತಂದೆಗಳನ್ನು ತುಚ್ಫೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಜೆರುಸಲೇಮಿನ ಜನರು ತಮ್ಮನ್ನು ಹೆತ್ತವರನ್ನು ಸನ್ಮಾನಿಸುವುದಿಲ್ಲ. ಪರದೇಶಸ್ಥರನ್ನು ಹಿಂಸಿಸುವರು. ಆ ಸ್ಥಳದಲ್ಲಿ ವಿಧೆವೆಯರಿಗೂ ಅನಾಥರಿಗೂ ಮೋಸ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿನ್ನಲ್ಲಿ ತಂದೆಯನ್ನೂ, ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ. ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ. ನಿನ್ನಲ್ಲಿ ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಪೀಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:7
25 ತಿಳಿವುಗಳ ಹೋಲಿಕೆ  

“ಲೇವಿಯರು, ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.


“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಒಬ್ಬರಿಗೊಬ್ಬರು ಪ್ರೀತಿ, ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರರಿಗೂ ಅನ್ಯಾಯಮಾಡಬೇಡಿರಿ; ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.’


ಪರದೇಶಿಯನ್ನಾಗಲಿ, ಅನಾಥನನ್ನಾಗಲಿ ಅಥವಾ ವಿಧವೆಯನ್ನಾಗಲಿ ಹಿಂಸಿಸದೆ, ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ, ನಿಮಗೆ ಹಾನಿಕರವಾದ ಅನ್ಯದೇವತೆಗಳಲ್ಲಿ ಭಕ್ತಿ ಇಡದೆ ಇದ್ದರೆ,


“‘ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳನ್ನು ದೂಷಿಸುವುದರಿಂದ ಅವನಿಗೆ ಸಂಭವಿಸಿದ ಮರಣಶಿಕ್ಷೆಗೆ ಅವನೇ ಕಾರಣನು.


‘ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ಮತ್ತು ‘ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ’ ಮೋಶೆಯು ಹೇಳಿದ್ದಾನೆ.


ಸಾಮಾನ್ಯ ಜನರನ್ನು ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿ, ವಿದೇಶಿಗಳನ್ನು ಅನ್ಯಾಯಕ್ಕೆ ಒಳಪಡಿಸಿದ್ದಾರೆ.


ದೀನದರಿದ್ರರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,


ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.


ತಾಯಿಗೆ ಶುಭವನ್ನು ಕೋರದೆ, ತಂದೆಯನ್ನು ಶಪಿಸುವ ಒಂದು ತರದವರು ಉಂಟು.


ತಂದೆಯನ್ನಾಗಲಿ ಅಥವಾ ತಾಯಿಯನ್ನಾಗಲಿ ಶಪಿಸುವವನ ದೀಪವು, ಮಧ್ಯರಾತ್ರಿಯ ಅಂಧಕಾರದಲ್ಲಿ ಆರಿಹೋಗುವುದು.


“ಅವರು, ಪರದೇಶಿ, ಅನಾಥ, ಇವರ ವ್ಯಾಜ್ಯದಲ್ಲಿ ನ್ಯಾಯ ಬಿಟ್ಟು ತೀರ್ಪುಹೇಳಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.


“ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಕ್ಷೇಮವಾಗಿ ಇರುವಿ, ಮತ್ತು ನಿನಗೆ ಒಳ್ಳೆಯದಾಗುವುದು.


ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವವನಿಗೆ ಮರಣಶಿಕ್ಷೆಯಾಗಬೇಕು.


“ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.


ಪರದೇಶದವನಿಗೆ ಉಪದ್ರವವನ್ನು ಕೊಡಬಾರದು. ನೀವೂ ಐಗುಪ್ತದೇಶದಲ್ಲಿ ಪರದೇಶದವರಾಗಿದ್ದೀರಷ್ಟೇ. ಅಂಥವರ ಮನೋವ್ಯಥೆಯನ್ನು ತಿಳಿದವರಾಗಿದ್ದೀರಿ.


ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪು ಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.


ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.


ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ. ಆಸ್ತಿಯನ್ನೂ, ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹಳ ಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.


ಯೆಹೋವನೇ, ನಿನ್ನ ಪ್ರಜೆಯನ್ನು ಜಜ್ಜಿಹಾಕುತ್ತಾರೆ; ನಿನ್ನ ಸ್ವತ್ತನ್ನು ಕುಗ್ಗಿಸಿಬಿಡುತ್ತಾರೆ;


ವಿಧವೆಯರನ್ನೂ, ಪರದೇಶಿಯನ್ನೂ ಕೊಲ್ಲುತ್ತಾರೆ; ಅನಾಥರನ್ನು ಹತಮಾಡುತ್ತಾರೆ.


ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು