Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿನ್ನಲ್ಲಿ ಚಾಡಿಕೋರರು ರಕ್ತ ಹರಿಸಿದ್ದಾರೆ; ನಿನ್ನವರು ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದಿದ್ದಾರೆ; ನಿನ್ನ ಮಧ್ಯದಲ್ಲಿ ದುರಾಚಾರಗಳನ್ನು ನಡೆಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿನ್ನವರು ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದಿದ್ದಾರೆ; ನಿನ್ನ ಮಧ್ಯೆ ದುರಾಚಾರಗಳನ್ನು ನಡೆಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿನ್ನಲ್ಲಿ ಚಾಡಿಕೋರರು ರಕ್ತಹರಿಸಿದ್ದಾರೆ; ನಿನ್ನವರು ಗುಡ್ಡಗಳ ಮೇಲೆ [ಯಜ್ಞಶೇಷವನ್ನು] ತಿಂದಿದ್ದಾರೆ; ನಿನ್ನ ಮಧ್ಯದಲ್ಲಿ ದುರಾಚಾರಗಳನ್ನು ನಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜೆರುಸಲೇಮ್ ನಿವಾಸಿಗಳು ಇತರರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಾರೆ. ಆ ನಿರಪರಾಧಿ ಜನರನ್ನು ಹತ್ಯೆ ಮಾಡಲು ಹಾಗೆ ಮಾಡುತ್ತಾರೆ. ಆ ಜನರು ಬೆಟ್ಟದ ಮೇಲೆ ಹೋಗಿ ಸುಳ್ಳುದೇವರುಗಳನ್ನು ಸನ್ಮಾನಿಸುವುದಕ್ಕಾಗಿ ಊಟಮಾಡುತ್ತಾರೆ. “‘ಜೆರುಸಲೇಮಿನ ಜನರು ಎಲ್ಲಾ ಬಗೆಯ ಲೈಂಗಿಕ ಪಾಪಗಳನ್ನು ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಚಾಡಿ ಹೇಳುವವರು ಇದ್ದಾರೆ; ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನುತ್ತಾರೆ; ನಿನ್ನಲ್ಲಿ ಅವರು ದ್ರೋಹವನ್ನು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:9
35 ತಿಳಿವುಗಳ ಹೋಲಿಕೆ  

ವ್ಯಭಿಚಾರಿಣಿಯರಾಗಿ ನಡೆಯುವ ನಿಮ್ಮ ಕುಮಾರಿಯರನ್ನೂ ವ್ಯಭಿಚಾರ ಮಾಡುವ ನಿಮ್ಮ ವಧುಗಳನ್ನೂ ನಾನು ದಂಡಿಸುವುದಿಲ್ಲ; ನೀವೇ ವ್ಯಭಿಚಾರಿಗಳನ್ನು ಕರೆದುಕೊಂಡು ಓರೆಯಾಗಿ ಹೋಗುತ್ತೀರಿ; ದೇವದಾಸಿಯರೊಂದಿಗೆ ಯಜ್ಞಮಾಡುತ್ತೀರಿ; ಆಹಾ, ವಿವೇಕವಿಲ್ಲದ ಜನರು ಕೆಡವಲ್ಪಡುವರು.


ಅವರು ಉಣ್ಣುತ್ತಿದ್ದರೂ ತೃಪ್ತಿ ದೊರೆಯದು, ಹಾದರ ಮಾಡುತ್ತಿದ್ದರೂ ಪ್ರಜಾಭಿವೃದ್ಧಿಯಾಗದು; ಯೆಹೋವನ ಕಡೆಗೆ ಗಮನಿಸುವುದನ್ನು ಬಿಟ್ಟುಬಿಟ್ಟಿದ್ದಾರಷ್ಟೆ.


ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ನಡೆಯುತ್ತಿವೆ, ದೇಶವೆಲ್ಲಾ ರಕ್ತಮಯವಾಗಿದೆ.


“‘ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಠ ಹಿಡಿಯಬಾರದು. ನಾನು ಯೆಹೋವನು.


ಒಳ್ಳೆಕಾರ್ಯಗಳಲ್ಲಿ ಯಾವುದನ್ನೂ ನಡೆಸದೆ ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದು ನೆರೆಯವನ ಹೆಂಡತಿಯನ್ನು ಕೆಡಿಸಿ,


ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ,


“ನೀನು ನಿನ್ನ ಯೌವನ ಕಾಲವನ್ನು ಜ್ಞಾಪಕಮಾಡಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿರುವೆ” ಇದು ಕರ್ತನಾದ ಯೆಹೋವನ ನುಡಿ.


ಇದಲ್ಲದೆ ಇವರು ಈಗ ನನ್ನ ಮೇಲೆಹೊರಿಸುವ ತಪ್ಪುಗಳನ್ನು ನಿಜವೆಂದು ನಿನಗೆ ತೋರಿಸಲಾರರು.


“ಈ ಮನುಷ್ಯನನು ‘ಹಾನಿಕರವೂ ಲೋಕದ ಎಲ್ಲೆಡೆ ಇರುವ, ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ, ನಜರೇನ ಎಂಬ ಪಂಥದ ನಾಯಕ ಎಂತಲೂ ಕಂಡೆವು.’


ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ.


ಅವರೆಲ್ಲರೂ ವ್ಯಭಿಚಾರಿಗಳು; ರೊಟ್ಟಿಸುಡುವವನು ಬೆಂಕಿಹೊತ್ತಿಸಿ, ಉರಿಸಿ, ಕಣಕವನ್ನು ನಾದಿದಾಗಿನಿಂದ ಹುಳಿಬರುವ ತನಕ ಮತ್ತಷ್ಟು ಉರಿಸದೆ ಹಾಗೆಯೇ ಬಿಟ್ಟಿರುವ ಒಲೆಗೆ ಸಮಾನರಾಗಿದ್ದಾರೆ.


ಕಳ್ಳರ ಗುಂಪು ಒಬ್ಬನಿಗೆ ಹೊಂಚು ಹಾಕುವಂತೆ ಯಾಜಕರು ಗುಂಪಾಗಿ ದಾರಿಯಲ್ಲಿ ಹೊಂಚಿಕೊಂಡಿದ್ದು, ಶೆಕೆಮಿಗೆ ಯಾತ್ರೆ ಹೋಗುವವರನ್ನು ದೋಚಿ ಕೊಂದುಹಾಕುತ್ತಾರೆ; ಹೌದು, ಘೋರಕೃತ್ಯವನ್ನು ನಡೆಸುತ್ತಾರೆ.


“ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.”


“ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ,


ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ. ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು.


ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಅವರು ತಾಮ್ರ ಮತ್ತು ಕಬ್ಬಿಣ, ಅವರೆಲ್ಲರೂ ಭ್ರಷ್ಟರೇ.


ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಇವು ಹೊಟ್ಟೆಯೊಳಕ್ಕೇ ಇಳಿಯುವವು.


ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು, ಹೊಟ್ಟೆಯೊಳಕ್ಕೇ ಇಳಿಯುವವು.


ಹೊಟ್ಟೆಯಲ್ಲಿ ಹಗೆಯನ್ನಿಟ್ಟುಕೊಂಡವನು ಸುಳ್ಳುಗಾರ, ಚಾಡಿಗಾರನು ಜ್ಞಾನಹೀನ.


ಅವರು ತಮ್ಮನ್ನು ಬಾಳ್ ಪೆಗೋರನ ಸೇವೆಗೆ ಒಪ್ಪಿಸಿ, ಮೂರ್ತಿಗಳಿಗೆ ಯಜ್ಞ ಮಾಡಿದ್ದನ್ನು ಊಟಮಾಡಿದರು.


ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣೂ, ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವುದಿಲ್ಲ.


ನೀವು ಕುಳಿತುಕೊಂಡು ನಿಮ್ಮ ಸಹೋದರರ ವಿರುದ್ಧವಾಗಿ ಮಾತನಾಡುತ್ತೀರಿ; ನಿಮ್ಮ ಒಡಹುಟ್ಟಿದವರನ್ನು ದೂರುತ್ತೀರಿ.


ಅವರು ಇಸ್ರಾಯೇಲರಲ್ಲಿ ನಡೆಸಿದ ಇಂಥ ಕೆಟ್ಟ ಮತ್ತು ಕ್ರೂರ ಕೆಲಸವು ಎಲ್ಲರಿಗೂ ಗೊತ್ತಾಗಲೆಂದು ನಾನು ಆಕೆಯ ಶವವನ್ನು ತುಂಡುಮಾಡಿ ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದೆನು.


ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು.


“ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.


ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿ ಮಾಡಿ, ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.


ಅವರು ನಿನ್ನಲ್ಲಿ ಹಗೆ ತೀರಿಸಿಕೊಂಡು, ನೀನು ದುಡಿದದ್ದನ್ನೆಲ್ಲಾ ಅಪಹರಿಸಿ, ನಿನ್ನನ್ನು ಬರಿದುಮಾಡಿ ಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ವ್ಯಭಿಚಾರವು, ಹೌದು, ನಿನ್ನ ದುಷ್ಕರ್ಮವು ಮತ್ತು ವ್ಯಭಿಚಾರವೂ ಬಯಲಿಗೆ ಬರುವುದು.


“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಈ ಹೊತ್ತು ಯೆಹೋವನು ಗವಿಯಲ್ಲಿ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾನೆಂಬುದು ಈಗ ನಿನಗೆ ಗೊತ್ತಾಯಿತಲ್ಲವೋ? ನಿನ್ನನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು. ಆದರೆ ನಾನು ಅವರಿಗೆ, ‘ಯೆಹೋವನ ಅಭಿಷಿಕ್ತನಾದ ನನ್ನ ಒಡೆಯನ ಮೇಲೆ ಕೈಹಾಕುವುದಿಲ್ಲ’ ಎಂದು ಹೇಳಿ ನಿನ್ನನ್ನು ಉಳಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು