Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರು ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ, ತಲೆಗೆ ರುಮಾಲನ್ನು ಧರಿಸಿ, ನೋಟಕ್ಕೆ ಸರದಾರರಂತಿದ್ದ ತಮ್ಮ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಪುತ್ರರ ಹಾಗಿರುವ ಆಕಾರಗಳು ಗೋಡೆಯಲ್ಲಿ ಕಿರುಮಂಜಿಯಿಂದ ಚಿತ್ರಿಸಿರುವುದನ್ನು ನೋಡಿದ ಕೂಡಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಗೋಡೆಯಲ್ಲಿ ಕಿರಮಂಜಿಯಿಂದ ಚಿತ್ರಿಸಿರುವದನ್ನು ನೋಡಿದ ಕೂಡಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವರು ಸೊಂಟಕ್ಕೆ ಪಟ್ಟಿಯನ್ನು ಬಿಗಿದು, ಉದ್ದ ಮುಂಡಾಸವನ್ನು ಧರಿಸಿದ್ದರು. ಅವರೆಲ್ಲರೂ ಅಧಿಕಾರಿಗಳಂತೆ ಕಾಣುತ್ತಿದ್ದರು. ಅವರೆಲ್ಲರೂ ಬಾಬಿಲೋನಿನಲ್ಲಿಯೇ ಹುಟ್ಟಿ ಬೆಳೆದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಚಿತ್ರದಲ್ಲಿನ ಪುರುಷರು ತಮ್ಮ ಸೊಂಟದ ಸುತ್ತಲೂ ಪಟ್ಟಿಗಳನ್ನು ಕಟ್ಟಿಕೊಂಡಿದ್ದರು ಮತ್ತು ತಲೆಯ ಮೇಲೆ ಬೀಸುವ ಪೇಟಗಳನ್ನು ಹೊಂದಿದ್ದರು; ಅವರೆಲ್ಲರೂ ಬಾಬಿಲೋನ್ ನಿವಾಸಿಗಳಂತೆ, ಬಾಬಿಲೋನಿನ ರಥದ ಅಧಿಕಾರಿಗಳಂತೆ ಕಾಣುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:15
7 ತಿಳಿವುಗಳ ಹೋಲಿಕೆ  

ನಿನ್ನ ನಿಲುವಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟಿ, ನಿನ್ನ ಅಧಿಕಾರವನ್ನು ಅವನ ಕೈಗೆ ಕೊಡುವೆನು; ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಮನೆತನದವರಿಗೂ ತಂದೆಯಾಗುವನು.


ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಾಯೇಲರಲ್ಲಿ ಒಬ್ಬನೂ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯ ವರೆಗೂ ಒಂದು ದೋಷವಾದರೂ ಇರಲಿಲ್ಲ.


ಇದಲ್ಲದೆ ಅವನು ತನ್ನ ಮೈಮೇಲಿದ್ದ ನಿಲುವಂಗಿಯನ್ನು ತನ್ನ ಯುದ್ಧವಸ್ತ್ರಗಳನ್ನು, ಕತ್ತಿ, ಬಿಲ್ಲು, ನಡುಕಟ್ಟುಗಳನ್ನೂ ದಾವೀದನಿಗೆ ಕೊಟ್ಟನು.


ಅವನು ಜೆಬಹ, ಚಲ್ಮುನ್ನರನ್ನು, “ನೀವು ತಾಬೋರದಲ್ಲಿ ಕೊಂದುಹಾಕಿದ ಮನುಷ್ಯರು ಹೇಗಿದ್ದರು?” ಎಂದು ಕೇಳಲಾಗಿ ಅವರು ಅವನಿಗೆ, “ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು” ಎಂದು ಉತ್ತರಕೊಟ್ಟರು.


“ಇವಳು ತನ್ನ ವ್ಯಭಿಚಾರವನ್ನು ಇನ್ನೂ ಹೆಚ್ಚಿಸಿದಳು; ಗೋಡೆಯ ಮೇಲೆ ಚಿತ್ರಿಸಲ್ಪಟ್ಟ ಕಸ್ದೀಯರ ಪುರುಷರನ್ನು ನೋಡಿದಳು.


ಇವಳು ಮೋಹಗೊಂಡು, ಕಸ್ದೀಯ ದೇಶಕ್ಕೆ ದೂತರನ್ನು ಕಳುಹಿಸಿದಳು.


ಶತ್ರುವಿನ ಶೂರರ ಗುರಾಣಿಯು ರಕ್ತವರ್ಣವಾಗಿದೆ, ಪರಾಕ್ರಮಿಗಳ ಉಡುಪುಗಳು ಕಿರಿಮಂಜಿನಂತೆ; ಅವನ ಸಿದ್ಧತೆಯ ದಿನಗಳಲ್ಲಿ ಸೈಪ್ರಸ್ ಮರದದಿಂದ ಮಾಡಿದ ಈಟಿಗಳು ಝಳಪಿಸುತ್ತವೆ ಮತ್ತು ಪಟ್ಟಣದಲ್ಲಿ ಅವರು ನಡೆದು ಹೋಗುವಾಗ ಅವರ ರಥಗಳ ಉಕ್ಕು ಥಳಥಳಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು