Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 “ಈ ವಿಪತ್ತುಗಳು ನಿನಗೆ ಸಂಭವಿಸುವುದಕ್ಕೆ, ನೀನು ಜನಾಂಗಗಳನ್ನು ಮೋಹಿಸಿ, ಅವರ ವಿಗ್ರಹಗಳಿಂದ ನಿನ್ನನ್ನು ಅಪವಿತ್ರ ಮಾಡಿಕೊಂಡದ್ದೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಈ ವಿಪತ್ತುಗಳು ನಿನಗೆ ಸಂಭವಿಸುವುದಕ್ಕೆ, ನೀನು ಜನಾಂಗಗಳನ್ನು ಮೋಹಿಸಿ ಅವರ ವಿಗ್ರಹಗಳಿಂದ ನಿನ್ನನ್ನೇ ಹೊಲಸುಮಾಡಿಕೊಂಡಿದ್ದೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಈ ವಿಪತ್ತುಗಳು ನಿನಗೆ ಸಂಭವಿಸುವದಕ್ಕೆ ನೀನು ಜನಾಂಗಗಳನ್ನು ಮೋಹಿಸಿ ಅವರ ಬೊಂಬೆಗಳಿಂದ ನಿನ್ನನ್ನು ಹೊಲಸು ಮಾಡಿಕೊಂಡದ್ದೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಿನ್ನ ಮೇಲೆ ಇವುಗಳನ್ನು ಬರಮಾಡಿದವು; ಯಾಕೆಂದರೆ ನೀನು ನನ್ನನ್ನು ತೊರೆದು ಜನಾಂಗಗಳನ್ನು ಹಿಂಬಾಲಿಸಿದೆ ಮತ್ತು ಅವರ ಕೊಳಕು ವಿಗ್ರಹಗಳಿಂದ ನಿನ್ನನ್ನು ಕೆಡಿಸಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನೀನು ಇತರ ಜನಾಂಗಗಳ ಹಿಂದೆ ಹೋಗಿ ವ್ಯಭಿಚಾರ ಮಾಡಿದ್ದರಿಂದಲೂ ಅವರ ವಿಗ್ರಹಗಳಿಂದ ನಿನ್ನನ್ನು ಅಪವಿತ್ರ ಪಡಿಸಿಕೊಂಡಿದ್ದರಿಂದಲೂ ಇವುಗಳನ್ನು ನಿನಗೆ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:30
9 ತಿಳಿವುಗಳ ಹೋಲಿಕೆ  

ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.


ಅವರಿಗೆ ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು; ಅವರೆಲ್ಲರೂ ಅಶ್ಶೂರ್ಯರಲ್ಲಿ ಉತ್ತಮೋತ್ತಮರು; ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು.


ನೀವು ಆ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಮಾಡಿಕೊಳ್ಳದಂತೆ ಜಾಗರೂಕರಾಗಿರಿ, ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಯಜ್ಞಗಳನ್ನು ಮಾಡುವಾಗ ಅವರಲ್ಲಿ ಒಬ್ಬನು ಯಜ್ಞಭೋಜನಕ್ಕೆ ನಿಮ್ಮನ್ನೂ ಕರೆದಾನು, ನೀವು ಹೋಗಿ ಭೋಜನ ಮಾಡಬೇಕಾದೀತು,


ಅಯ್ಯೋ, ಅವಿಧೇಯತೆ ಮಲಿನವೂ ಆದ ದಬ್ಬಾಳಿಕೆ ನಡೆಸುವ ನಗರದ ಗತಿಯನ್ನು ಏನು ಹೇಳಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು