Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನೀನು, ನಿನ್ನ ಅಕ್ಕನ ಮಾರ್ಗದಲ್ಲಿ ನಡೆದುಕೊಂಡಿದ್ದರಿಂದ ಅವಳು ಕುಡಿದ ಪಾತ್ರೆಯನ್ನೇ ನಿನ್ನ ಕೈಗೆ ಕೊಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ನೀನು ನಿನ್ನ ಅಕ್ಕನ ಹಾದಿಯಲ್ಲೆ ನಡೆದುಕೊಂಡದ್ದರಿಂದ ಅವಳು ಕುಡಿದ ಪಾತ್ರೆಯನ್ನೇ ನಿನ್ನ ಕೈಗೆ ಕೊಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನೀನು ನಿನ್ನ ಅಕ್ಕನ ಮಾರ್ಗದಲ್ಲಿ ನಡೆದುಕೊಂಡದ್ದರಿಂದ ಅವಳು ಕುಡಿದ ಪಾತ್ರೆಯನ್ನೇ ನಿನ್ನ ಕೈಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನೀನು ನಿನ್ನ ಅಕ್ಕನನ್ನು ಅನುಸರಿಸಿ ಆಕೆಯಂತೆ ಜೀವಿಸಿದೆ. ಆದ್ದರಿಂದ ಆಕೆಯ ದಂಡನೆಯ ಲೋಟವನ್ನು ನಾನು ನಿನ್ನ ಕೈಯಲ್ಲಿ ಇಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನೀನು ನಿನ್ನ ಸಹೋದರಿಯ ಮಾರ್ಗದಲ್ಲಿಯೇ ನಡೆದದ್ದರಿಂದ ಅವಳ ಪಾತ್ರೆಯನ್ನು ನಿನ್ನ ಕೈಗೆ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:31
10 ತಿಳಿವುಗಳ ಹೋಲಿಕೆ  

ನೂಲು ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರ್ಯವನ್ನೂ, ಅಹಾಬನ ಮನೆಯನ್ನೂ ನೆಲಸಮಮಾಡಿದಂತೆ, ಯೆರೂಸಲೇಮನ್ನೂ ಅದರಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿ ಬೋರಲು ಹಾಕುವೆನು.


ಆಹಾ, ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ, ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇಮಿಗೆ ಆದಂತಹ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.


ಇವಳೂ ಅಪವಿತ್ರಳಾಗಿ ಹೋದದ್ದನ್ನು ನೋಡಿದೆನು. ಅವರಿಬ್ಬರು ಒಂದೇ ಮಾರ್ಗವನ್ನು ಹಿಡಿದವರು.


ಇಸ್ರಾಯೇಲರ ದೇವರಾದ ಯೆಹೋವನು ನನಗೆ, “ರೋಷರೂಪ ಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.


ಸಮಾರ್ಯಳೆಂಬ ನಿನ್ನ ಅಕ್ಕನು ಕುಡಿದ ಪಾತ್ರೆಯಿಂದಲೇ ವಿಸ್ಮಯವೂ, ನಾಶವೂ ಆಗುವುದು. ನೀನು ಅಮಲಿನಿಂದಲೂ, ದುಃಖದಿಂದಲೂ ತುಂಬಿರುವೆ.


ಇಸ್ರಾಯೇಲಿಗೆ ಅದರ ಹೆಮ್ಮೆಯೇ ವಿರುದ್ಧ ಸಾಕ್ಷಿಯಾಗಿದೆ; ಇಸ್ರಾಯೇಲೂ ಮತ್ತು ಎಫ್ರಾಯೀಮೂ ತಮ್ಮ ದುರ್ಮಾರ್ಗದಲ್ಲಿ ಎಡವಿ ಬೀಳುವವು; ಯೆಹೂದವೂ ಅವುಗಳೊಂದಿಗೆ ಬೀಳುವುದು.


ಯೆಹೂದ್ಯರೂ ಸಹ ತಮ್ಮ ದೇವರಾದ ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಾಯೇಲರ ಪದ್ಧತಿಯನ್ನು ಅನುಸರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು