Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಸಮಾರ್ಯಳೆಂಬ ನಿನ್ನ ಅಕ್ಕನು ಕುಡಿದ ಪಾತ್ರೆಯಿಂದಲೇ ವಿಸ್ಮಯವೂ, ನಾಶವೂ ಆಗುವುದು. ನೀನು ಅಮಲಿನಿಂದಲೂ, ದುಃಖದಿಂದಲೂ ತುಂಬಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ನೀನೂ ಕುಡಿದು, ಕುಡಿದು ಪೂರಾ ಅಮಲೇರಿ ದುಃಖಭರಿತಳಾಗುವೆ. ಅದರಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಸಮಾರ್ಯಳೆಂಬ ನಿನ್ನ ಅಕ್ಕನು ಕುಡಿದ ಬೆಚ್ಚುಬೆರಗಿನ ಪಾತ್ರೆಯಲ್ಲಿ ನೀನೂ ಕುಡಿದು ಕುಡಿದು ಪೂರಾ ಅಮಲೇರಿ ದುಃಖಭರಿತಳಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ನೀನು ಅಮಲೇರಿದವಳ ಹಾಗೆ ತೂರಾಡುವೆ. ನೀನು ಕುಗ್ಗಿಹೋಗುವೆ. ಆ ಲೋಟವು ನಾಶನದ ಮತ್ತು ಹಾಳುಮಾಡುವ ಲೋಟ. ನಿನ್ನ ಅಕ್ಕ ಕುಡಿದ ಪಾತ್ರೆಯಂತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ನಿನ್ನ ಸಹೋದರಿಯಾದ ಸಮಾರ್ಯದ ಪಾತ್ರೆಯಿಂದಲೇ ವಿಸ್ಮಯವೂ ನಾಶವೂ ಆಗುವುದು. ನೀನು ಮತ್ತಿನಿಂದಲೂ ದುಃಖದಿಂದಲೂ ತುಂಬಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:33
6 ತಿಳಿವುಗಳ ಹೋಲಿಕೆ  

ಇದಲ್ಲದೆ ನನಗೆ ಈ ಅಪ್ಪಣೆಯಾಯಿತು, ನೀನು ಅವರಿಗೆ ನುಡಿಯತಕ್ಕದ್ದೇನೆಂದರೆ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; ಆ ನನ್ನ ರೋಷವನ್ನು ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.”


ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚೆತ್ತುಕೋ, ಎಚ್ಚೆತ್ತುಕೋ, ಎದ್ದುನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದುಬಿಟ್ಟಿದ್ದಿ.


ನಿನ್ನ ಕರ್ತನೂ, ತನ್ನ ಜನರ ಪಕ್ಷವಾಗಿ ವ್ಯಾಜ್ಯವಾಡುವ ನಿನ್ನ ದೇವರೂ ಆದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ಭ್ರಮಣಗೊಳಿಸುವ ಪಾನದ ಪಾತ್ರೆಯನ್ನು ಅಂದರೆ, ನನ್ನ ರೋಷದಿಂದ ತುಂಬಿರುವ ಬಟ್ಟಲನ್ನು ನಿನ್ನ ಕೈಯೊಳಗಿಂದ ತೆಗೆದುಹಾಕುವೆನು. ಅದನ್ನು ನೀನು ತಿರುಗಿ ಕುಡಿಯುವುದೇ ಇಲ್ಲ.


ನೀನು ಮಾನವಂತನಲ್ಲ, ನಿನಗೆ ಸನ್ಮಾನವಲ್ಲಾ ಅವಮಾನ ಕಟ್ಟಿಟ್ಟ ಬುತ್ತಿ. ನೀನು ಕುಡಿ ಕುಡಿದು ನಗ್ನನಾಗು, ಯೆಹೋವನ ಬಲಗೈಯಲ್ಲಿರುವ ನಿನ್ನ ಪಾಪದ ಕೊಡ ತುಂಬಿ ಅವಮಾನವೇ ನಿನಗೆ ಸಲ್ಲುವುದು.


ನೀನು, ನಿನ್ನ ಅಕ್ಕನ ಮಾರ್ಗದಲ್ಲಿ ನಡೆದುಕೊಂಡಿದ್ದರಿಂದ ಅವಳು ಕುಡಿದ ಪಾತ್ರೆಯನ್ನೇ ನಿನ್ನ ಕೈಗೆ ಕೊಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು