Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 “ನೀನು ಅದರಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿಯುವಿ. ಅದನ್ನು ಬೋಕಿಗಳ ಹಾಗೆ ಒಡೆದುಹಾಕುವೆ ಮತ್ತು ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವಿ. ಏಕೆಂದರೆ ನಾನೇ ಅದನ್ನು ಹೇಳಿದ್ದೇನೆ” ಎಂಬುದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅದರ ಬೋಕಿಗಳನ್ನು ಕಚ್ಚಿ, ನೆಕ್ಕಿ, ನಿನ್ನ ಮೊಲೆಗಳನ್ನು ಬಗೆದುಕೊಳ್ಳುವೆ. ಇದು ನನ್ನ ಅಪ್ಪಣೆ ಎಂಬುದೇ ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅದರಲ್ಲಿ ಒಂದು ಬೊಟ್ಟನ್ನೂ ಉಳಿಸದೆ ಕುಡಿದು ಅದರ ಬೋಕಿಗಳನ್ನು ಕಚ್ಚಿ ನೆಕ್ಕಿ ನಿನ್ನ ಮೊಲೆಗಳನ್ನು ಬಗಿದುಕೊಳ್ಳುವಿ; ಇದು ನನ್ನ ಅಪ್ಪಣೆ ಎಂಬದೇ ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನೀನು ಆ ಲೋಟದಿಂದ ಕುಡಿಯುವೆ. ಕಡೆಯ ತೊಟ್ಟಿನವರೆಗೂ ನೀನು ಕುಡಿಯುವೆ. ನೀನು ಆ ಲೋಟವನ್ನು ಒಡೆದುಹಾಕುವೆ. ನಿನ್ನ ಸ್ತನಗಳನ್ನು ಬಗಿದುಕೊಳ್ಳುವೆ. ಒಡೆಯನೂ ಯೆಹೋವನೂ ಆದ ನಾನು ಇದನ್ನು ಹೇಳುವದರಿಂದ ಇದು ನಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನೀನು ಅದರಲ್ಲಿ ಸ್ವಲ್ಪವೂ ಉಳಿಯದಂತೆ ಹೀರಿ ಕುಡಿದು ಅದನ್ನು ಬೋಕಿಗಳ ಹಾಗೆ ಒಡೆದುಹಾಕುವೆ ಮತ್ತು ನೀನೇ ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವೆ; ಏಕೆಂದರೆ ನಾನೇ ಅದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:34
7 ತಿಳಿವುಗಳ ಹೋಲಿಕೆ  

ಯೆಹೋವನ ಕೈಯಲ್ಲಿ ಪಾತ್ರೆ ಇದೆ; ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.


ಯೆಹೋವನು ತನ್ನ ರೋಷವನ್ನು ತುಂಬಿಕೊಟ್ಟ ಪಾತ್ರೆಯಿಂದ ಕುಡಿದ ಯೆರೂಸಲೇಮೇ, ಎಚ್ಚೆತ್ತುಕೋ, ಎಚ್ಚೆತ್ತುಕೋ, ಎದ್ದುನಿಲ್ಲು! ಭ್ರಮಣಗೊಳಿಸುವ ಆ ಪಾನದ ಪಾತ್ರೆಯಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿದುಬಿಟ್ಟಿದ್ದಿ.


ಅವಳು ಎಷ್ಟರ ಮಟ್ಟಿಗೆ ತನ್ನನ್ನು ಘನಪಡಿಸಿಕೊಂಡು ಸುಖಭೋಗವನ್ನು ಅನುಭವಿಸಿದಳೋ ಅದಕ್ಕೆ ತಕ್ಕಂತೆ ನೀವು ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ, ಏಕೆಂದರೆ ಅವಳು ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಎಂದೆಂದಿಗೂ ಕಾಣುವುದೇ ಇಲ್ಲ’ ಎಂದು ಹೇಳಿಕೊಂಡಿದ್ದಾಳೆ.


ಅವಳು ಐಗುಪ್ತದಲ್ಲಿ ವಾಸಿಸುವ ದಿನದವರೆಗೂ ತನ್ನ ವ್ಯಭಿಚಾರವನ್ನು ಬಿಡಲಿಲ್ಲ; ಅವಳ ಬಾಲ್ಯದಲ್ಲಿಯೇ ಅಲ್ಲಿನವರು ಅವಳೊಂದಿಗೆ ಮಲಗಿ, ಅವಳ ಎಳೆಯ ತೊಟ್ಟುಗಳನ್ನು ಒತ್ತಿ, ಅವಳ ಸಂಗಡ ವ್ಯಭಿಚಾರಿಕೆಯನ್ನು ಹೆಚ್ಚೆಚ್ಚಾಗಿ ನಡೆಸಿದರು.


ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಬಾಲ್ಯದಲ್ಲೇ ವ್ಯಭಿಚಾರ ಮಾಡಿದ್ದರಿಂದ ಅವರ ಸ್ತನಗಳು ಹಿಸುಕಲ್ಪಟ್ಟವು. ಎಳೆಯ ತೊಟ್ಟುಗಳು ನಸುಕಲ್ಪಟ್ಟವು.


ನಾನಾದರೋ ಸದಾ ವರ್ಣಿಸುವವನಾಗಿ, ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುತ್ತಾ ವರ್ಣಿಸಿ ಹಾಡುವೆನು.


ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿ ಮಾಡಿಕೊಂಡಿರುವೆಯೋ? ಕೈಗಳನ್ನು ಬಲಪಡಿಸಿಕೊಂಡಿರುವೆಯೋ? ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ, ಅದರಂತೆ ನಡೆಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು