Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರ ಹೆಸರುಗಳೇನೆಂದರೆ: ಹಿರಿಯವಳ ಹೆಸರು ಒಹೊಲ ಮತ್ತು ಕಿರಿಯವಳ ಹೆಸರು ಒಹೊಲೀಬ. ಅವರು ನನ್ನವರಾಗಿ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹೆತ್ತರು. ಒಹೊಲ ಸಮಾರ್ಯವನ್ನೂ, ಒಹೊಲೀಬ ಯೆರೂಸಲೇಮನ್ನೂ ಸೂಚಿಸತಕ್ಕ ಹೆಸರುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹಿರಿಯಳ ಹೆಸರು ಒಹೊಲ, ಕಿರಿಯವಳ ಹೆಸರು ಒಹೊಲೀಬ. ಅವರು ನನ್ನವರಾಗಿ ಗಂಡು ಹೆಣ್ಣು ಮಕ್ಕಳನ್ನು ಹೆತ್ತರು. ಒಹೊಲ ಸಮಾರಿಯವನ್ನೂ, ಒಹೊಲೀಬ ಜೆರುಸಲೇಮನ್ನೂ ಸೂಚಿಸುವ ಹೆಸರುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರ ಹೆಸರುಗಳೇನಂದರೆ, ಒಹೊಲ ಎಂಬದು ಅಕ್ಕನದು, ಒಹೊಲೀಬ ಎಂಬದು ತಂಗಿಯದು; ಅವರು ನನ್ನ ಹೆಂಡರಾಗಿ ಗಂಡುಹೆಣ್ಣುಮಕ್ಕಳನ್ನು ಹೆತ್ತರು. (ಒಹೊಲ ಎಂಬದು ಸಮಾರ್ಯವನ್ನೂ, ಒಹೊಲೀಬ ಎಂಬದು ಯೆರೂಸಲೇಮನ್ನೂ ಸೂಚಿಸತಕ್ಕ ಹೆಸರುಗಳಾಗಿವೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಹಿರಿಯ ಅಕ್ಕನ ಹೆಸರು ಒಹೊಲ. ತಂಗಿಯ ಹೆಸರು ಒಹೊಲೀಬ. ಅವರಿಬ್ಬರೂ ನನ್ನ ಹೆಂಡತಿಯರಾದರು. ಅವರು ಗಂಡುಮಕ್ಕಳನ್ನು ಮತ್ತು ಹೆಣ್ಣುಮಕ್ಕಳನ್ನು ಹೆತ್ತರು. ಒಹೊಲ ಎಂದರೆ ಸಮಾರ್ಯ; ಮತ್ತು ಒಹೊಲೀಬ ಎಂದರೆ ಜೆರುಸಲೇಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರುಗಳ ಹೆಸರುಗಳೇನೆಂದರೆ ಒಹೊಲ ಎಂಬವಳು ದೊಡ್ಡವಳು. ಒಹೊಲೀಬ ಎಂಬವಳು ಚಿಕ್ಕವಳು. ಅವರು ನನ್ನವರಾಗಿದ್ದು ಪುತ್ರಪುತ್ರಿಯರನ್ನು ಹೆತ್ತರು; ಅವರ ಹೆಸರುಗಳಾದ ಒಹೊಲ ಎಂಬುದು ಸಮಾರ್ಯವು ಮತ್ತು ಒಹೊಲೀಬ ಎಂಬುದು ಯೆರೂಸಲೇಮು ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:4
22 ತಿಳಿವುಗಳ ಹೋಲಿಕೆ  

ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯನ್ನು ನಿನಗೆ ಹೊದಿಸಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಪ್ರಮಾಣಮಾಡಿ ಒಡಂಬಡಿಕೆ ಮಾಡಿಕೊಂಡೆ ಆದುದರಿಂದ ನೀನು ನನ್ನವಳಾದೆ’” ಇದು ಕರ್ತನಾದ ಯೆಹೋವನ ನುಡಿ.


ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತಿದ್ದೀರಿ. ದೇವರಿಗೆ ಫಲಕೊಡುವುದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತು ಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿದ್ದೀರಿ.


ಸಮಾರ್ಯದವರಾದ ನೀವು ಅರಿಯದೇ ಇರುವಂಥದನ್ನು ಆರಾಧಿಸುತ್ತೀರಿ, ಆದರೆ ನಾವು ಅರಿತಿರುವುದನ್ನೇ ಆರಾಧಿಸುವವರಾಗಿದ್ದೇವೆ. ಏಕೆಂದರೆ, ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ.


ಅವರು ನಿನ್ನ ವಿಚಾರವಾಗಿ ನ್ಯಾಯಸಭೆಯನ್ನು ಕೂಡಿಸಿ, ನಿನ್ನನ್ನು ಕಲ್ಲೆಸೆದು ಕೊಲ್ಲುವರು, ಕತ್ತಿಗಳಿಂದ ಹತಿಸುವರು.


“ಇದಲ್ಲದೆ ನೀನು ನನಗೆ ಹೆತ್ತ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಆಹಾರವಾಗಲೆಂದು ಯಜ್ಞಮಾಡಿದೆ. ನಿನ್ನ ವ್ಯಭಿಚಾರವು ಅಲ್ಪಕಾರ್ಯವೆಂದು ಭಾವಿಸಿದಿಯೋ?


ಸಾಲೇಮಿನಲ್ಲಿ ಆತನ ಬಿಡಾರವಿದೆ; ಚೀಯೋನಿನಲ್ಲಿ ಆತನು ವಾಸಿಸುತ್ತಾನೆ.


ಯಾರೊಬ್ಬಾಮನು ಹಿಂತಿರುಗಿ ಬಂದಿದ್ದಾನೆಂಬ ವರ್ತಮಾನವು ಇಸ್ರಾಯೇಲರಿಗೆ ತಿಳಿದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರೆಯಿಸಿ ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದ ಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ.


ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’ ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ. ಇಲ್ಲಿ ನಿನ್ನ ಸೇವಕರು ನಿನ್ನನ್ನು ಪ್ರಾರ್ಥಿಸುವಾಗೆಲ್ಲಾ ಅವರಿಗೆ ಸದುತ್ತರವನ್ನು ದಯಪಾಲಿಸು.


ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ.


ನಿನ್ನ ಉತ್ತರಕ್ಕೆ ತನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯ ನಿನ್ನ ಅಕ್ಕ, ನಿನ್ನ ದಕ್ಷಿಣಕ್ಕೆ ನಿನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.


ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಬಾಲ್ಯದಲ್ಲೇ ವ್ಯಭಿಚಾರ ಮಾಡಿದ್ದರಿಂದ ಅವರ ಸ್ತನಗಳು ಹಿಸುಕಲ್ಪಟ್ಟವು. ಎಳೆಯ ತೊಟ್ಟುಗಳು ನಸುಕಲ್ಪಟ್ಟವು.


“ಒಹೊಲಳು ನನ್ನ ವಶವಾಗಿರುವಾಗಲೇ, ವ್ಯಭಿಚಾರ ಮಾಡಿದಳು. ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯರನ್ನು,


ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಒಹೊಲಳಿಗೂ, ಒಹೊಲೀಬಳಿಗೂ ನ್ಯಾಯತೀರುಸುವೆಯೋ? ಅವರ ದುರಾಚಾರಗಳನ್ನು ಅವರಿಗೆ ತಿಳಿಸು.


ವ್ಯಭಿಚಾರಿಯನ್ನು ಸೇರುವ ಹಾಗೆ ಈ ಜನರು ಅವಳನ್ನು ಸೇರಿದರು; ಹೌದು, ಕೆಟ್ಟ ಹೆಂಗಸರಾದ ಒಹೊಲಳನ್ನೂ ಮತ್ತು ಒಹೊಲೀಬಳನ್ನೂ ಸೇರಿದರು.


ಅದರಂತೆ ಹೋಶೇಯನು ಹೋಗಿ ದಿಬ್ಲಯಿಮನ ಮಗಳಾದ ಗೋಮೆರಳನ್ನು ಮದುವೆಯಾದನು. ಅವಳು ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ಕೊಟ್ಟಳು.


ಅವಳು ತನ್ನೊಂದಿಗೆ ವ್ಯಭಿಚಾರ ಮಾಡಿದವರನ್ನು ಅನುಸರಿಸಿ ಹೋದರೂ ಅವರು ಸಿಕ್ಕುವುದಿಲ್ಲ. ಆಗ ಅವಳು, “‘ನಾನು ಮದುವೆಯಾದ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು, ಈಗಿನ ನನ್ನ ಸ್ಥಿತಿಗಿಂತ ಆಗಿನ ಸ್ಥಿತಿಯು ಎಷ್ಟೋ ಲೇಸು’ ಅಂದುಕೊಳ್ಳುವಳು.


ಅವಳು ಇವುಗಳನ್ನೆಲ್ಲಾ ನಡೆಸಿದ ಮೇಲೆ ನನ್ನ ಬಳಿಗೆ ಪುನಃ ಬಂದಾಳು ಅಂದುಕೊಂಡೆನು. ಆದರೆ ಬರಲಿಲ್ಲ. ಆಗ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ಇದನ್ನು ನೋಡಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು