Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 “ದೂತನನ್ನು ಕಳುಹಿಸಿ, ಪುರುಷರನ್ನು ದೂರದಿಂದ ಕರೆಯಿಸಿಕೊಂಡರು; ಇಗೋ, ಅವರು ಬಂದರು; ಎಲೈ ಹೆಂಗಸೇ, ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿ, ನಿನ್ನನ್ನು ಆಭರಣಗಳಿಂದ ಶೃಂಗರಿಸಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 “ಇಷ್ಟರಲ್ಲಿ ದೂತನನ್ನು ಕಳುಹಿಸಿ ಪುರುಷರನ್ನು ದೂರದಿಂದ ಕರೆಯಿಸಿಕೊಂಡರು. ಇಗೋ, ಅವರೂ ಬಂದರು. ಎಲೌ ಹೆಂಗಸೇ, ಅವರಿಗಾಗಿ ನೀನು ಸ್ನಾನಮಾಡಿ, ಕಣ್ಣಿಗೆ ಕಾಡಿಗೆ ಹಚ್ಚಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಇಷ್ಟಲ್ಲದೆ ದೂತನನ್ನು ಕಳುಹಿಸಿ ಪುರುಷರನ್ನು ದೂರದಿಂದ ಕರೆಯಿಸಿಕೊಂಡರು; ಇಗೋ, ಅವರು ಬಂದರು; [ಎಲೈ ಹೆಂಗಸೇ,] ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆಹಚ್ಚಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 “ಅವರು ದೂರ ಪ್ರಾಂತ್ಯಗಳಿಂದ ಪುರುಷರನ್ನು ಕರಿಸಿದರು. ಅವರಿಗೆ ನೀನು ಸಂದೇಶ ಕಳುಹಿಸಿದೆ. ಅವರು ನಿನ್ನನ್ನು ನೋಡಲು ಬಂದರು. ಅವರಿಗಾಗಿ ನೀನು ಸ್ನಾನ ಮಾಡಿ, ನಿನ್ನ ಕಣ್ಣುಗಳಿಗೆ ಕಾಡಿಗೆ ಹಚ್ಚಿ, ನಿನ್ನ ಆಭರಣಗಳನ್ನು ಧರಿಸಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 “ದೂತನನ್ನು ಕಳುಹಿಸಿ ದೂರದಿಂದ ಬರಬೇಕೆಂದು ಮನುಷ್ಯರಿಗೆ ಕರೆಯ ಕಳುಹಿಸಿದ್ದಾರೆ. ಅವರು ಬಂದಾಗ ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ನಿನ್ನ ಆಭರಣಗಳಿಂದ ಅಲಂಕರಿಸಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:40
13 ತಿಳಿವುಗಳ ಹೋಲಿಕೆ  

ಎಲೈ, ನಗರವೇ, ನೀನು ಸೂರೆಯಾಗುವಾಗ ಏನು ಮಾಡುವಿ? ನೀನು ರಕ್ತಾಂಬರವನ್ನು ಹೊದ್ದು ಸುವರ್ಣಾಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡು, ನೀಲಾಂಜನ ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು, ನಿನ್ನನ್ನು ಶೃಂಗಾರಿಸಿಕೊಳ್ಳುವುದು ವ್ಯರ್ಥ. ನಿನ್ನೊಂದಿಗೆ ವ್ಯಭಿಚಾರ ಮಾಡಿದವರೇ ನಿನ್ನನ್ನು ಧಿಕ್ಕರಿಸಿ ನಿನ್ನ ಪ್ರಾಣವನ್ನೇ ಹುಡುಕುತ್ತಾರೆ.


ಅನಂತರ ಯೇಹುವು ಇಜ್ರೇಲಿಗೆ ಬಂದನು. ಈಜೆಬೆಲಳು ಅದನ್ನು ಕೇಳಿ ತನ್ನ ತಲೆಯನ್ನು ನಯವಾಗಿ ಬಾಚಿಕೊಂಡು, ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ಕಿಟಕಿಯಿಂದ ಇಣುಕಿ ನೋಡಿದಳು.


ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲವನ್ನೂ ತೆಗೆದುಕೊಂಡು, ಪರರಾಜನ ಬಳಿಗೆ ಪ್ರಯಾಣಮಾಡಿದ್ದಿ; ನಿನ್ನ ರಾಯಭಾರಿಗಳನ್ನು ದೂರ ದೂರ ಕಳುಹಿಸಿದ್ದಿ; ನಿನ್ನನ್ನು ಪಾತಾಳದವರೆಗೂ ತಗ್ಗಿಸಿಕೊಂಡಿದ್ದಿ.


ಇವಳೂ ಅಪವಿತ್ರಳಾಗಿ ಹೋದದ್ದನ್ನು ನೋಡಿದೆನು. ಅವರಿಬ್ಬರು ಒಂದೇ ಮಾರ್ಗವನ್ನು ಹಿಡಿದವರು.


ಇಗೋ ವೇಶ್ಯಾರೂಪವನ್ನು ಧರಿಸಿಕೊಂಡಿದ್ದ ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರುಗೊಂಡಳು.


ಕನ್ಯೆಯರ ಲೇಪನಕಾಲವು ಪೂರೈಸುವುದಕ್ಕೆ ಗಂಧರಸಪ್ರಯೋಗದಲ್ಲಿ ಆರು ತಿಂಗಳೂ, ಪರಿಮಳದ್ರವ್ಯ ಕಾಂತಿವರ್ಧಕದ್ರವ್ಯಗಳ ಪ್ರಯೋಗದಲ್ಲಿ ಆರು ತಿಂಳಗಳೂ ಅಂತು ಹನ್ನೆರಡು ತಿಂಗಳು ಕಳೆದವು. ಈ ಕಾಲ ಮುಗಿದನಂತರ ರಾಜನ ಅರಮನೆಯ ನಿಯಮದ ಮೇರೆಗೆ ತನ್ನನ್ನು ಸಿದ್ಧಪಡಿಸಿಕೊಂಡ ಪ್ರತಿಯೊಬ್ಬ ಕನ್ಯೆಯು ಅರಸನಾದ ಅಹಷ್ವೇರೋಷನ ಬಳಿಗೆ ಹೋಗಬೇಕಾಗಿತ್ತು.


ನೀನು ಸ್ನಾನಮಾಡಿ, ಸುಗಂಧತೈಲವನ್ನು ಹಚ್ಚಿಕೊಂಡು, ಶ್ರೇಷ್ಠವಸ್ತ್ರಗಳನ್ನು ಧರಿಸಿಕೊಂಡು ಅಲ್ಲಿಗೆ ಹೋಗು; ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವರೆಗೂ ಮರೆಯಾಗಿದ್ದು.


ಜಡೆ ಹೆಣೆದುಕೊಳ್ಳುವುದೂ, ಚಿನ್ನದ ಒಡವೆಗಳನ್ನು ಹಾಕಿಕೊಳ್ಳುವುದೂ, ಬೆಲೆಬಾಳುವ ವಸ್ತ್ರಗಳನ್ನು ಧರಿಸಿಕೊಳ್ಳುವುದೂ ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.


ನಿನ್ನ ಹೃದಯವು ಅವಳ ಸೌಂದರ್ಯವನ್ನು ಮೋಹಿಸದಿರಲಿ, ಅವಳು ತನ್ನ ಕಣ್ಣುರೆಪ್ಪೆಗಳಿಂದ ನಿನ್ನನ್ನು ವಶಮಾಡಿಕೊಂಡಾಳು, ನೋಡಿಕೋ.


ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಶೃಂಗರಿಸಿಕೊಂಡು, ವ್ಯಭಿಚಾರಿಗಳ ಹಿಂದೆ ಹೋಗಿ ಬಾಳ್ ದೇವತೆಗಳ ಉತ್ಸವ ದಿನಗಳಲ್ಲಿ ಧೂಪಹಾಕಿದ್ದಕ್ಕೆ ನಾನು ಅವಳನ್ನು ದಂಡಿಸುವೆನು, ಇದು ಯೆಹೋವನ ನುಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು