ಯೆಹೆಜ್ಕೇಲನು 23:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 “ಅಲ್ಲಿ ವಿನೋದ ಪ್ರಿಯರ ದೊಡ್ಡ ಗುಂಪಿನ ಶಬ್ದವು ಇತ್ತು. ಮರುಭೂಮಿಯಿಂದ ಕುಡುಕರನ್ನೂ ಕರೆಯಿಸಿಕೊಂಡು ಅವರು ನಾಡಿನ ಜನರೊಂದಿಗೆ ಸೇರಿ, ನಿನ್ನ ಕೈಗೆ ಕಡಗವನ್ನು ತೊಡಿಸಿ, ತಲೆಗೆ ಸುಂದರ ಕಿರೀಟವನ್ನಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಅಲ್ಲಿ ವಿನೋದ ಪ್ರಿಯರ ದೊಡ್ಡ ಗುಂಪಿನವರ ಕಳಕಳವಾಯಿತು; ಅರಣ್ಯದಿಂದ ಕರೆಯಿಸಿಕೊಂಡ ಕುಡುಕರು ನಾಡಾಡಿಗರೊಂದಿಗೆ ಸೇರಿ ಅಸ್ಸೀರಿಯರಿಬ್ಬರ ಕೈಗೆ ಕಡಗವನ್ನು ತೊಡಿಸಿ, ಅವರ ತಲೆಗೆ ಸುಂದರ ಕಿರೀಟವನ್ನಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಅಲ್ಲಿ ವಿನೋದಪಡುತ್ತಿರುವ ದೊಡ್ಡ ಗುಂಪಿನವರ ಕಳಕಳವಾಯಿತು; ಅರಣ್ಯದಿಂದ ಕರೆಯಿಸಿಕೊಂಡ ಕುಡಿಕರು ನಾಡಾಡಿಗರೊಂದಿಗೆ ಸೇರಿ ಅವರಿಬ್ಬರ ಕೈಗೆ ಕಡಗವನ್ನು ತೊಡಿಸಿ ಅವರ ತಲೆಗೆ ಸುಂದರ ಕಿರೀಟವನ್ನಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 “ನಿಶ್ಚಿಂತೆಯುಳ್ಳ ಗುಂಪಿನ ಆನಂದಪೂರ್ಣವಾದ ಗದ್ದಲವು ಆಕೆಯ ಸುತ್ತಲೂ ಇತ್ತು. ಔತಣಕ್ಕೆ ಅನೇಕರು ಬಂದರು. ಮರುಭೂಮಿಯ ಕಡೆಯಿಂದ ಜನರು ಬರುತ್ತಿರುವಾಗಲೇ ಅಮಲೇರಿಕೊಂಡು ಬಂದರು. ಅವರು ಬಳೆಗಳನ್ನು, ಸುಂದರವಾದ ಕಿರೀಟಗಳನ್ನು ಹೆಂಗಸರಿಗೆ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 “ಅವಳ ಸಂಗಡ ವಿನೋದಪ್ರಿಯ ಸಮೂಹದ ಶಬ್ದವು ಇತ್ತು. ಸಾಧಾರಣ ಮನುಷ್ಯರ ಸಂಗಡ ಮರುಭೂಮಿಯಿಂದ ಕುಡುಕರನ್ನೂ ಕರೆಯಿಸಿಕೊಂಡು ಆ ಮಹಿಳೆ ಮತ್ತು ಅವಳ ಸಹೋದರಿಯ ಕೈಗಳ ಮೇಲೆ ಕಡಗಳನ್ನೂ ತಮ್ಮ ತಲೆಗಳ ಮೇಲೆ ಶೃಂಗಾರವಾದ ಕಿರೀಟವನ್ನೂ ಇಟ್ಟರು. ಅಧ್ಯಾಯವನ್ನು ನೋಡಿ |