ಯೆಹೆಜ್ಕೇಲನು 23:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವಳು ಐಗುಪ್ತದಲ್ಲಿ ವಾಸಿಸುವ ದಿನದವರೆಗೂ ತನ್ನ ವ್ಯಭಿಚಾರವನ್ನು ಬಿಡಲಿಲ್ಲ; ಅವಳ ಬಾಲ್ಯದಲ್ಲಿಯೇ ಅಲ್ಲಿನವರು ಅವಳೊಂದಿಗೆ ಮಲಗಿ, ಅವಳ ಎಳೆಯ ತೊಟ್ಟುಗಳನ್ನು ಒತ್ತಿ, ಅವಳ ಸಂಗಡ ವ್ಯಭಿಚಾರಿಕೆಯನ್ನು ಹೆಚ್ಚೆಚ್ಚಾಗಿ ನಡೆಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವಳು ಈಜಿಪ್ಟಿನಲ್ಲಿ ಇದ್ದಂದಿನಿಂದಲೂ ತನ್ನ ಸೂಳೆತನವನ್ನು ಬಿಡಲಿಲ್ಲ; ಬಾಲ್ಯದಲ್ಲಿಯೇ ಅಲ್ಲಿಯವರು ಅವಳೊಂದಿಗೆ ಮಲಗಿ, ಅವಳ ಎಳೆಯ ತೊಟ್ಟುಗಳನ್ನು ನಸುಕಿ, ಅವಳ ಸಂಗಡ ಸೂಳೆಗಾರಿಕೆಯನ್ನು ಹೆಚ್ಚೆಚ್ಚಾಗಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವಳು ಐಗುಪ್ತದಲ್ಲಿದ್ದಂದಿಂನಿಂದಲೂ ತನ್ನ ಸೂಳೆತನವನ್ನು ಬಿಡಲಿಲ್ಲ; ಅವಳ ಬಾಲ್ಯದಲ್ಲಿಯೇ ಅಲ್ಲಿನವರು ಅವಳೊಂದಿಗೆ ಮಲಗಿ ಅವಳ ಎಳೆಯ ತೊಟ್ಟುಗಳನ್ನು ನಸುಕಿ ಅವಳ ಸಂಗಡ ಸೂಳೆಗಾರಿಕೆಯನ್ನು ಹೆಚ್ಚೆಚ್ಚಾಗಿ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಇದರ ಜೊತೆಯಲ್ಲಿಯೇ ಈಜಿಪ್ಟಿನೊಂದಿಗೆ ತನ್ನ ಪ್ರಣಯ ಸಂಬಂಧವನ್ನು ಮುಂದುವರಿಸುತ್ತಿದ್ದಳು. ಆಕೆಯು ಇನ್ನೂ ಎಳೆಯ ಹುಡುಗಿಯಾಗಿದ್ದಾಗಲೇ ಈಜಿಪ್ಟ್ ಆಕೆಯೊಂದಿಗೆ ಸಂಭೋಗ ಮಾಡಿತ್ತು. ಅವಳ ಎಳೆ ಸ್ತನಗಳನ್ನು ಹಿಸುಕಿದವರಲ್ಲಿ ಮೊದಲನೆಯವರು ಈಜಿಪ್ಟಿನವರೇ. ಈಜಿಪ್ಟ್ ತನ್ನ ಅನೈತಿಕ ಪ್ರೀತಿಯನ್ನು ಆಕೆಯ ಮೇಲೆ ಸುರಿಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವಳು ಈಜಿಪ್ಟಿನಲ್ಲಿ ಇದ್ದಾಗಿನಿಂದಲೂ ವ್ಯಭಿಚಾರವನ್ನು ಬಿಡಲಿಲ್ಲ. ಅವಳ ಯೌವನದಲ್ಲಿ ಪುರುಷರು ಅವಳ ಸಂಗಡ ಮಲಗಿದರು. ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ಅವಳ ಮೇಲೆ ವ್ಯಭಿಚಾರ ನಡೆಸಿದರು. ಅಧ್ಯಾಯವನ್ನು ನೋಡಿ |