ಯೆಹೆಜ್ಕೇಲನು 24:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 “ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅಂತೆಯೇ ನಿನ್ನ ಲಂಪಟತನ ಅಸಹ್ಯವಾಗಿರುವುದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ಹರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನೂ ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಿನ್ನ ಪುಂಡಾಟವು ಅಸಹ್ಯವಾಗಿರುವದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ ಶುದ್ಧಿಯಾಗದೆ ಇರುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “‘ನಿನ್ನ ವಿರುದ್ಧ ನನಗಿರುವ ಕೋಪ ತೃಪ್ತಿಗೊಳ್ಳುವ ತನಕ ನೀನು ಮತ್ತೆಂದಿಗೂ ಶುದ್ಧಳಾಗುವುದಿಲ್ಲ. ನಿನ್ನನ್ನು ತೊಳೆದು ಕಲೆಗಳನ್ನು ತೆಗೆಯಲು ನನಗೆ ಮನಸ್ಸಿತ್ತು. ಆದರೆ ಕಲೆಗಳು ಹೋಗಲಿಲ್ಲ. ಆದ್ದರಿಂದ ನಿನ್ನ ಮೇಲಿನ ನನ್ನ ಕೋಪವು ತಣ್ಣಗಾಗುವ ತನಕ ನಾನು ನಿನ್ನನ್ನು ತೊಳೆಯುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ ‘ನಿನ್ನ ಅಶುದ್ಧತ್ವವು ದುಷ್ಕರ್ಮವುಳ್ಳದ್ದು. ನಾನು ನಿನ್ನನ್ನು ಪರಿಶುದ್ಧಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರದಿಂದ ಇನ್ನು ಶುದ್ಧವಾಗುವುದಿಲ್ಲ. ಅಧ್ಯಾಯವನ್ನು ನೋಡಿ |