Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೀಗೆ ಆಜ್ಞೆಯಾಗಲು ನಾನು ಪ್ರಾತಃಕಾಲದಲ್ಲಿ ಜನರೊಂದಿಗೆ ಮಾತನಾಡಿದನು, ಸಾಯಂಕಾಲಕ್ಕೆ ನನ್ನ ಪತ್ನಿಯು ತೀರಿಹೋದಳು; ಮಾರನೆಯ ಬೆಳಿಗ್ಗೆ ನನಗೆ ಅಪ್ಪಣೆಯಾದಂತೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಹೀಗೆ ಆಜ್ಞೆಯಾಗಲು, ನಾನು ಪ್ರಾತಃಕಾಲದಲ್ಲಿ ಜನರಿಗೆ ಪ್ರವಾದಿಸಿದೆನು; ಸಾಯಂಕಾಲಕ್ಕೆ ನನ್ನ ಪತ್ನಿ ತೀರಿಹೋದಳು; ಮಾರನೆಯ ಬೆಳಿಗ್ಗೆ ನನಗೆ ಅಪ್ಪಣೆಯಾದಂತೆ ನಡೆದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೀಗೆ ಆಜ್ಞೆಯಾಗಲು ನಾನು ಪ್ರಾತಃಕಾಲದಲ್ಲಿ ಜನರಿಗೆ ಪ್ರವಾದಿಸಿದೆನು; ಸಾಯಂಕಾಲಕ್ಕೆ ನನ್ನ ಪತ್ನಿಯು ತೀರಿಹೋದಳು; ಮಾರಣೆ ಬೆಳಿಗ್ಗೆ ನನಗೆ ಅಪ್ಪಣೆಯಾದಂತೆ ನಡೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರು ಹೇಳಿದ್ದನ್ನು ನಾನು ಮರುದಿವಸ ಮುಂಜಾನೆ ತಿಳಿಸಿದೆ. ಆ ಸಾಯಂಕಾಲ ನನ್ನ ಪತ್ನಿಯು ಸತ್ತುಹೋದಳು. ಮರುದಿವಸ ಬೆಳಿಗ್ಗೆ ದೇವರು ಆಜ್ಞಾಪಿಸಿದ್ದನ್ನೆಲ್ಲ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹಾಗೆಯೇ ನಾನು ಬೆಳಗಿನ ಜಾವದಲ್ಲಿ ಜನರೊಂದಿಗೆ ಮಾತನಾಡಿದೆನು. ಸಂಜೆ ನನ್ನ ಹೆಂಡತಿ ಸತ್ತಳು. ಮರುದಿನ ಬೆಳಿಗ್ಗೆ ನಾನು ಆಜ್ಞಾಪಿಸಿದಂತೆ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:18
5 ತಿಳಿವುಗಳ ಹೋಲಿಕೆ  

ಆಗ ನಾನು ನನಗಾದ ಅಪ್ಪಣೆಯನ್ನು ನೆರವೇರಿಸಿದೆನು; ಹಗಲಿನಲ್ಲಿ ನನ್ನ ಸಾಮಗ್ರಿಗಳನ್ನು, ವಲಸೆಯ ಸಾಮಗ್ರಿಯನ್ನೋ ಎಂಬಂತೆ ಮನೆಯೊಳಗಿಂದ ಆಚೆಗೆ ಹಾಕಿ, ಸಾಯಂಕಾಲ ನನ್ನ ಕೈಯಿಂದಲೇ ಗೋಡೆಯಲ್ಲಿ ಕಿಂಡಿಯನ್ನು ಮಾಡಿ, ಕತ್ತಲಲ್ಲಿ ಆ ಸಾಮಾನನ್ನು ಆಚೆಗೆ ಸಾಗಿಸಿ, ಅವರ ಕಣ್ಣ ಮುಂದೆ ಹೆಗಲ ಮೇಲೆ ಹೊತ್ತುಕೊಂಡು ಹೋದೆನು.


“ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು, ಆದರೂ ನೀನು ಗೋಳಾಡಬೇಡ, ಅಳಬೇಡ, ನಿನ್ನ ಕಣ್ಣೀರು ಸುರಿಯದಿರಲಿ.


ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.”


ಆಗ ಜನರು, “ನೀನು ಹೀಗೆ ಮಾಡುವುದರಿಂದ ಪ್ರಯೋಜನವೇನೆಂದು ತಿಳಿಸುವುದಿಲ್ಲವೇ?” ಎಂದು ನನ್ನನ್ನು ಕೇಳಲು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು