Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ರುಮಾಲುಗಳು ನಿಮ್ಮ ತಲೆಯ ಮೇಲೆಯೂ, ಕೆರಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡುವುದಿಲ್ಲ, ಅಳುವುದಿಲ್ಲ; ನಿಮ್ಮ ಅಧರ್ಮದಿಂದ ಕ್ಷೀಣವಾಗಿ ಹೋಗುವಿರಿ, ಒಬ್ಬರ ಸಂಗಡಲೊಬ್ಬರು ನರಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಗಾರಿಗೆಯನ್ನು ತಿನ್ನದೆ, ರುಮಾಲನ್ನು ಸುತ್ತಿಕೊಂಡು, ಕೆರಗಳನ್ನು ಮೆಟ್ಟಿಕೊಂಡು ಇರುವಿರಿ; ನೀವು ಗೋಳಾಡುವುದಿಲ್ಲ, ಅಳುವುದಿಲ್ಲ. ಆದರೆ ನಿಮ್ಮ ಅಧರ್ಮದಿಂದ ಕ್ಷೀಣವಾಗಿ ನರಳುವಿರಿ. ಒಬ್ಬರೆದುರಿಗೆ ಒಬ್ಬರು ನರಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ರುಮಾಲನ್ನು ಸುತ್ತಿಕೊಂಡು ಕೆರಗಳನ್ನು ಮೆಟ್ಟಿಕೊಂಡು ಇರುವಿರಿ; ನೀವು ಗೋಳಾಡುವದಿಲ್ಲ, ಅಳುವದಿಲ್ಲ; ನಿಮ್ಮ ಅಧರ್ಮದಿಂದ ಕ್ಷೀಣವಾಗಿ ಹೋಗುವಿರಿ, ಒಬ್ಬರೆದುರಿಗೊಬ್ಬರು ನರಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನೀವು ನಿಮ್ಮ ಮುಂಡಾಸವನ್ನು ಧರಿಸಿಕೊಂಡು ಕಾಲಿಗೆ ಕೆರವನ್ನು ಹಾಕಿಕೊಳ್ಳುವಿರಿ. ನೀವು ನಿಮ್ಮ ದುಃಖವನ್ನು ತೋರಿಸಿಕೊಳ್ಳುವುದಿಲ್ಲ. ನೀವು ಅಳುವದೂ ಇಲ್ಲ. ಆದರೆ ನೀವು ನಿಮ್ಮ ಪಾಪಗಳ ದೆಸೆಯಿಂದ ಕೃಶರಾಗುವಿರಿ. ನೀವು ಒಬ್ಬರಿಗೊಬ್ಬರು ದುಃಖದ ಶಬ್ದಗಳನ್ನು ಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಿಮ್ಮ ಮುಂಡಾಸಗಳು ನಿಮ್ಮ ತಲೆಯ ಮೇಲೆಯೂ ನಿಮ್ಮ ಪಾದರಕ್ಷೆಯು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವುವು. ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:23
14 ತಿಳಿವುಗಳ ಹೋಲಿಕೆ  

“ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ‘ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಬದುಕುವೆವು? ಅಂದುಕೊಳ್ಳುತ್ತೀರಲ್ಲಾ.


ಅವರಲ್ಲಿ ಪ್ರತಿಯೊಬ್ಬರೂ ಅನ್ನ ಮತ್ತು ನೀರಿನ ಕೊರತೆಯಿಂದ ಕುಗ್ಗಿ ತಮ್ಮ ಅಧರ್ಮದಿಂದ ನಾಶವಾಗಿ ಹೋಗುವರು.”


ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ಮತ್ತು ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷೀಣವಾಗಿ ಹೋಗುವರು.


ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮುಲುಗುತ್ತಲೇ ಇದ್ದೇವೆ; ನಾವು ಯೆಹೋವನ ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಕ್ಕದು, ಆತನ ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರವಾಗಿರುವುದು.


ಯಾಜಕರು ಕತ್ತಿಯಿಂದ ಸಂಹೃತರಾದರು; ಇವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸಲಿಲ್ಲ.


ಅವನ ಮನೆಯವರಲ್ಲಿ ಯಾರಾದರೂ ಉಳಿದರೆ ವ್ಯಾಧಿಯು ಅವರನ್ನು ಮಣ್ಣಿಗೆ ಸೇರಿಸುವುದು, ಅವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸುವುದಿಲ್ಲ.


ನಾನು ನಿಮಗೆ ಮಾಡುವುದೇನೆಂದರೆ, ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.


ದಾವೀದನು ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೆಮರದ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಗುಡ್ಡವನ್ನು ಏರಿದರು.


ಮೂರ್ಖರು ಅಪರಾಧ, ದುರಾಚಾರಗಳ ದೆಸೆಯಿಂದ ಬಾಧೆಗೊಳಗಾದರು.


ಅದೇ ಸಮಯದಲ್ಲಿ ಯೆಹೋವನು ಆಮೋಚನ ಮಗನಾದ ಯೆಶಾಯನಿಗೆ, “ಹೋಗು, ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು. ನಿನ್ನ ಪಾದಗಳಲ್ಲಿರುವ ಪಾದರಕ್ಷೆಗಳನ್ನು ತೆಗೆದಿಡು” ಎಂದು ಹೇಳಿದನು. ಅವನು ಹಾಗೆಯೇ ಮಾಡಿ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ತಿರುಗಾಡುತ್ತಿದ್ದನು.


ರಾಜನಿಗೂ ಮತ್ತು ರಾಜಮಾತೆಗೂ, “ನೆಲದಲ್ಲಿ ಕುಳಿತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ” ಎಂದು ಹೇಳಿರಿ.


ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು. ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರಲ್ಲಾ.


ನಾನು ಮಾಡಿದಂತೆ ಆಗ ನೀವೂ ಮಾಡುವಿರಿ, ಅಂದರೆ ಬಟ್ಟೆಯಿಂದ ಬಾಯನ್ನು ಮುಚ್ಚಿಕೊಳ್ಳದೆ, ಮನುಷ್ಯರ ರೊಟ್ಟಿಯನ್ನು ತಿನ್ನದೆ ಇರುವಿರಿ,


ಅವರು ತಲೆಗೆ ನಾರಿನ ಮುಂಡಾಸವನ್ನು, ಸೊಂಟಕ್ಕೆ ನಾರಿನ ಒಳಉಡುಪನ್ನು ಹಾಕಿಕೊಂಡಿರಬೇಕು; ಬೆವರುವ ಯಾವ ಉಡುಪನ್ನೂ ಉಟ್ಟುಕೊಳ್ಳಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು