Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ನರಪುತ್ರನೇ, ಅವರ ಬಲಾಧಾರವೂ, ಅವರ ನೇತ್ರಾನಂದಕರವಾದ ಆಲಯವನ್ನು, ಅವರು ಆಶಿಸುವುದನ್ನೂ, ಅವರ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಅವರ ಬಲದಿಂದ ತೆಗೆದು ಹಾಕುವ ದಿನದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ನರಪುತ್ರನೇ, ಅವರಿಗೆ ಬಲಾಧಾರವೂ ನೇತ್ರಾನಂದವೂ ಆದ ಅವರ ಇಷ್ಟು ಸುಂದರ ಆಲಯವನ್ನೂ ಹೃದಯೋಲ್ಲಾಸವಾದ ಅವನ ಗಂಡು ಹೆಣ್ಣುಮಕ್ಕಳನ್ನೂ ನಾನು ನಿರ್ಮೂಲಮಾಡುವ ದಿನದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನರಪುತ್ರನೇ, ಅವರಿಗೆ ಬಲಾಧಾರವೂ ನೇತ್ರಾನಂದವೂ ಆದ ಅವರ ಇಷ್ಟಸುಂದರಾಲಯವನ್ನೂ ಹೃದಯೋಲ್ಲಾಸವಾದ ಅವರ ಗಂಡುಹೆಣ್ಣುಮಕ್ಕಳನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25-26 ಆತನು ಹೇಳಿದ್ದೇನೆಂದರೆ: “ನರಪುತ್ರನೇ, ನಾನು ಬಲಿಷ್ಠವಾದ ಆಲಯವನ್ನು ಜನರಿಂದ ತೆಗೆದುಬಿಡುವೆನು. ಆ ಸುಂದರ ಸ್ಥಳವು ಅವರಿಗೆ ಆನಂದವನ್ನು ಕೊಡುತ್ತಿದೆ. ಆ ಸ್ಥಳವನ್ನು ನೋಡಲು ಅವರು ಆತುರಪಡುವರು. ಆದರೆ ನಾನು ಆಲಯವನ್ನೂ ಮತ್ತು ಅವರ ಮಕ್ಕಳನ್ನೂ ಆ ಜನರಿಂದ ತೆಗೆದುಬಿಡುವೆನು. ಆ ದಿನದಂದು, ಪಾರಾದವನು ನಿನ್ನ ಬಳಿಗೆ ಬಂದು ನಾಶನದ ಕುರಿತಾದ ಕೆಟ್ಟ ಸುದ್ದಿಯನ್ನು ನಿನಗೆ ತಿಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ಮನುಷ್ಯಪುತ್ರನೇ, ಅವರ ಮಹತ್ತರ ಸಂತೋಷವನ್ನೂ ಅವರ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವುದನ್ನೂ ಅವರ ಪುತ್ರಪುತ್ರಿಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ ದಿನದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:25
10 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ ವಂಶದವರಿಗೆ ಹೀಗೆ ಸಾರು, ‘ಇಗೋ, ನಿಮಗೆ ಮುಖ್ಯಬಲವೂ ನೇತ್ರಾನಂದವೂ ಪ್ರಾಣಪ್ರಿಯವೂ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಪಡಿಸುವೆನು, ನೀವು ಬಿಟ್ಟು ಬಂದಿರುವ ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸೇನಾದೀಶ್ವರನಾದ ಯೆಹೋವನು ನುಡಿದಿದ್ದಾರೆ


ಇಗೋ, ಅವರನ್ನು ದಂಡಿಸುವೆನು, ಯೌವನಸ್ಥರು ಖಡ್ಗದಿಂದ ನಾಶವಾಗುವರು. ಅವರ ಗಂಡು ಮತ್ತು ಹೆಣ್ಣುಮಕ್ಕಳು ಕ್ಷಾಮದಿಂದ ಸಾಯುವರು.


ಅತ್ಯಂತ ರಮಣೀಯವಾದ ಚೀಯೋನಿನಲ್ಲಿರುವ, ದೇವರು ಪ್ರಕಾಶಿಸುತ್ತಾನೆ.


ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ, ರಮ್ಯವಾಗಿಯೂ, ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವುದು.


ಬಾಬೆಲಿನ ಅರಸನು ಅವನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ, ಯೆಹೂದದ ಸಕಲ ಸರದಾರರನ್ನು ರಿಬ್ಲದಲ್ಲಿ ಕೊಲ್ಲಿಸಿದನು.


‘ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ’ ಎಂಬ ಸುಳ್ಳು ಮಾತುಗಳ ಮೇಲೆ ಭರವಸವಿಡಬೇಡಿರಿ.


ನಿಮ್ಮ ಗಂಡು ಮತ್ತು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಪ್ರಯತ್ನವೇನೂ ಸಾಗುವುದಿಲ್ಲ.


ವೈರಿಯ ಹಾಗೆ ಬಿಲ್ಲನ್ನು ಬೊಗ್ಗಿಸಿ, ವಿರೋಧಿಯಂತೆ ಬಲಗೈಯೆತ್ತಿ ನಿಂತು, ಸುಂದರ ಪ್ರಜೆಯನ್ನೆಲ್ಲಾ ಸಂಹರಿಸಿದ್ದಾನೆ; ಚೀಯೋನ್ ಗುಡಾರದ ಮೇಲೆ ತನ್ನ ರೋಷಾಗ್ನಿಯನ್ನು ಸುರಿಸಿದ್ದಾನೆ.


ಅವನು ಬರುವುದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು, ಯೆಹೋವನು ತಪ್ಪಿಸಿಕೊಂಡವನು ಬೆಳಿಗ್ಗೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿತ್ತು; ಹೌದು, ನನ್ನ ಬಾಯಿ ತೆರೆದಿತ್ತು, ನಾನು ಮೂಕನಾಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು