Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 24:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿ ತೆರೆದಿರುವುದು. ನೀನು ಇನ್ನು ಮೂಕನಾಗಿರದೆ ಮಾತನಾಡುವೆ ಮತ್ತು ಅವರಿಗೆ ಗುರುತಾಗಿರುವೆ. ನಾನೇ ಯೆಹೋವನು” ಎಂದು ಅವರಿಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆ ದಿನದಲ್ಲಿ ತಪ್ಪಿಸಿಕೊಂಡವನಿಗಾಗಿ ನೀನು ಬಾಯಿಬಿಡುವೆ, ನಿನ್ನ ಮೂಕತನವನ್ನು ಕಳೆದುಕೊಂಡು ಮಾತಾಡುವೆ; ಹೀಗೆ ನೀನು ಅವರಿಗೆ ಗುರುತಾಗುವೆ. ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ದಿನದಲ್ಲಿ ತಪ್ಪಿಸಿಕೊಂಡವನಿಗಾಗಿ ನೀನು ಬಾಯಿಬಿಡುವಿ, ನಿನ್ನ ಮೂಕತನವನ್ನು ಕಳಕೊಂಡು ಮಾತಾಡುವಿ; ಹೀಗೆ ನೀನು ಅವರಿಗೆ ಗುರುತಾಗಲು ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆ ಸಮಯದಲ್ಲಿ ನಿನಗೆ ಆ ಮನುಷ್ಯನೊಂದಿಗೆ ಮಾತನಾಡಲಾಗುವುದು. ನೀನು ಆಮೇಲೆ ಎಂದಿಗೂ ಮೌನವಾಗಿರುವುದಿಲ್ಲ. ಈ ರೀತಿಯಾಗಿ ನೀನು ಅವರಿಗೆ ಒಂದು ಮಾದರಿಯಾಗುವೆ. ನಾನು ಯೆಹೋವನೆಂದು ಆಗ ಅವರು ತಿಳಿಯುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿ ತೆರೆದಿರುವುದು. ನೀನು ಇನ್ನು ಮೂಕನಾಗಿರದೆ ಮಾತನಾಡುವೆ ಮತ್ತು ಅವರಿಗೆ ಗುರುತಾಗಿರುವೆ, ಆಗ ನಾನೇ ಯೆಹೋವ ದೇವರೆಂದು ತಿಳಿಯುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 24:27
10 ತಿಳಿವುಗಳ ಹೋಲಿಕೆ  

ಅವನು ಬರುವುದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು, ಯೆಹೋವನು ತಪ್ಪಿಸಿಕೊಂಡವನು ಬೆಳಿಗ್ಗೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲ್ಪಟ್ಟಿತ್ತು; ಹೌದು, ನನ್ನ ಬಾಯಿ ತೆರೆದಿತ್ತು, ನಾನು ಮೂಕನಾಗಿರಲಿಲ್ಲ.


“ಆ ದಿನದಲ್ಲಿ ನಾನು ಇಸ್ರಾಯೇಲ್ ವಂಶಕ್ಕೆ ಕೊಂಬನ್ನು ಮೊಳೆಯಿಸಿ, ಆ ವಂಶದವರ ಮಧ್ಯದಲ್ಲಿ ನಿನ್ನ ಬಾಯಿಯನ್ನು ತೆರೆಯುವಂತೆ ಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವುದು.”


ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.


ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರಮಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.


ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ಅವನು ಈ ಮಾತುಗಳನ್ನು ನನಗೆ ಹೇಳಿದ ಕೂಡಲೆ ನಾನು ಮುಖವನ್ನು ತಗ್ಗಿಸಿಕೊಂಡು ಬಾಯಿಬಿಡಲಾರದೆ ಹೋದೆನು.


ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು ಅದನ್ನು ನಿನಗೂ ಮತ್ತು ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಿಗೆ ಹಾಕಲ್ಪಡುವುದು, ನೀನು ಅದನ್ನು ಮುತ್ತಿಗೆ ಹಾಕಿದಂತಾಗುವುದು. ಇದು ಇಸ್ರಾಯೇಲ್ ವಂಶದವರಿಗೆ ಒಂದು ಗುರುತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು