Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 25:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಎದೋಮು ಯೆಹೂದ ವಂಶಕ್ಕೆ ಪ್ರತಿಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ಎದೋಮ್ ಯೆಹೂದವಂಶಕ್ಕೆ ಪ್ರತೀಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕರ್ತನಾದ ಯೇಹೋವನು ಇಂತೆನ್ನುತ್ತಾನೆ - ಎದೋಮು ಯೆಹೂದವಂಶಕ್ಕೆ ಪ್ರತೀಕಾರಮಾಡಿದೆ; ಮುಯ್ಯಿಗೆ ಮುಯ್ಯಿತೀರಿಸಿ ಮಹಾಪರಾಧವನ್ನು ನಡಿಸಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “ಎದೋಮ್ಯರು ಯೆಹೂದದ ಜನರು ಮೇಲೆ ಕ್ರೂರವಾದ ಸೇಡನ್ನು ತೀರಿಸಿಕೊಂಡಿದ್ದಾರೆ. ಅವರ ಮೇಲೆ ಸತತವಾಗಿ ಸೇಡು ತೀರಿಸಿಕೊಳ್ಳುವುದರ ಮೂಲಕ ಎದೋಮ್ಯರು ಮಹಾಪರಾಧ ಮಾಡಿದ ದೋಷಿಗಳಾಗಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಏಕೆಂದರೆ ಎದೋಮು ಯೆಹೂದನ ಮನೆತನದವರಿಗೆ ಮುಯ್ಯಿಗೆ ಮುಯ್ಯಿ ತೀರಿಸಿದ್ದರಿಂದ ಅತಿ ಅಪರಾಧಮಾಡಿ ಅವರಲ್ಲಿ ಸೇಡು ತೀರಿಸಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 25:12
16 ತಿಳಿವುಗಳ ಹೋಲಿಕೆ  

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯೆಹೂದ ವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು? ಎಂದು ಮೋವಾಬೂ ಮತ್ತು ಸೇಯೀರೂ ಅಂದುಕೊಂಡಿದೆ.


ಯೆಹೋವನೇ, ಎದೋಮ್ಯರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ.


ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು.


ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, ಎದೋಮಿನ ಬೊಚ್ರದಿಂದ ಬರುವ ಇವನು ಯಾರು? ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ.


ಮೋವಾಬ್ಯರಿಗೂ ದಂಡನೆಗಳನ್ನು ವಿಧಿಸಿ ತೀರಿಸುವೆನು. ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಫಿಲಿಷ್ಟಿಯರು ಯೆಹೂದಕ್ಕೆ ಪ್ರತಿಕಾರಮಾಡಿದ್ದಾರೆ; ಹೌದು, ಮುಯ್ಯಿಗೆಮುಯ್ಯಿ ತೀರಿಸುತ್ತಾ ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ.”


ಓಬದ್ಯನಿಗಾದ ದೈವದರ್ಶನ. ಕರ್ತನಾದ ಯೆಹೋವನು ಎದೋಮನ್ನು ಕುರಿತು ಹೀಗೆ ನುಡಿಯುತ್ತಾನೆ: ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇವೆ. ಆತನು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ಹೊರಡಿರಿ! ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳೋಣ”


ದೂಮದ ಬಗ್ಗೆ ದೈವೋಕ್ತಿ. ಆತನು ಸೇಯೀರಿನಿಂದ ನನ್ನನ್ನು ಕರೆದು, “ಕಾವಲುಗಾರನೇ, ಈಗ ರಾತ್ರಿ ಎಷ್ಟು ಸಮಯವಾಯಿತು? ಕಾವಲುಗಾರನೇ, ರಾತ್ರಿ ಸಮಯ ಎಷ್ಟು ಕಳೆಯಿತು


ಅಲ್ಲಿ ಎದೋಮು, ಅದರ ಅರಸರೂ ಮತ್ತು ಎಲ್ಲಾ ಸರದಾರರೂ ಅಲ್ಲಿದ್ದಾರೆ; ಅವರು ಬಲಾತ್ಕಾರಿಗಳಾಗಿದ್ದು ಖಡ್ಗದಿಂದ ಹತರಾದವರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ಸಂಗಡ ಮಲಗಿದ್ದಾರೆ.


ದೇವರಾದ ಯೆಹೋವನಾದ ಕರ್ತನು ಹೀಗೆ ನುಡಿಯುತ್ತಾನೆ, ಆಹಾ, ನನ್ನ ದೇಶವನ್ನು ತಮ್ಮ ಸ್ವಾಸ್ತ್ಯಮಾಡಿಕೊಂಡು ಪೂರ್ಣಹೃದಯದಿಂದ ಆನಂದಪಟ್ಟವರೂ, ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರೂ ಆದ ಎದೋಮಿನವರೆಲ್ಲರನ್ನೂ, ಇತರ ಜನಾಂಗಗಳಲ್ಲಿ ಉಳಿದವರನ್ನೂ ನಾನು ರೋಷದ ಬೆಂಕಿಯಿಂದ ಉರಿಯುತ್ತಾ ಶಪಿಸಿದ್ದೇನೆ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು