ಯೆಹೆಜ್ಕೇಲನು 25:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಫಿಲಿಷ್ಟಿಯರು ಯೆಹೂದಕ್ಕೆ ಪ್ರತಿಕಾರಮಾಡಿದ್ದಾರೆ; ಹೌದು, ಮುಯ್ಯಿಗೆಮುಯ್ಯಿ ತೀರಿಸುತ್ತಾ ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಫಿಲಿಷ್ಟಿಯರು ಜುದೇಯಕ್ಕೆ ಪ್ರತೀಕಾರ ಮಾಡಿದ್ದಾರೆ; ಹೌದು, ಮುಯ್ಯಿಗೆ ಮುಯ್ಯಿ ತೀರಿಸುತ್ತಾ, ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಫಿಲಿಷ್ಟಿಯರು ಯೆಹೂದಕ್ಕೆ ಪ್ರತೀಕಾರಮಾಡಿದ್ದಾರೆ; ಹೌದು, ಮುಯ್ಯಿಗೆ ಮುಯ್ಯಿತೀರಿಸುತ್ತಾ ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಫಿಲಿಷ್ಟಿಯರು ಸೇಡನ್ನು ತೀರಿಸಿಕೊಂಡಿದ್ದಾರೆ. ಅವರು ಆವೇಶದಿಂದ ತಿರಸ್ಕರಿಸಿ ಸೇಡನ್ನು ತೀರಿಸಿಕೊಂಡಿದ್ದಾರೆ. ಅವರು ತಮ್ಮ ದೀರ್ಘಕಾಲದ ದ್ವೇಷದಿಂದ ನಾಶನವು ಬರುವಂತೆ ಮಾಡಿದ್ದಾರೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ತೀರಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಯೆಹೂದವನ್ನು ಕೆಡಿಸಿದರು. ಅಧ್ಯಾಯವನ್ನು ನೋಡಿ |