Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 25:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯೆಹೂದ ವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು? ಎಂದು ಮೋವಾಬೂ ಮತ್ತು ಸೇಯೀರೂ ಅಂದುಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ಆಹಾ, ಯೆಹೂದವಂಶ ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು ಎಂದು ಮೋವಾಬ ಹಾಗೂ ಸೇಯೀರ ಹೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಯೆಹೂದವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, [ವಿಶೇಷವೇನು] ಎಂದು ಮೋವಾಬೂ ಸೇಯೀರೂ ಅಂದುಕೊಂಡದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಮೋವಾಬ್ ಮತ್ತು ಸೇಯೀರ್, ‘ಯೆಹೂದ ಜನಾಂಗದವರು ಇತರ ಎಲ್ಲಾ ಜನಾಂಗಗಳವರಂತಿದ್ದಾರೆ.’ ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಮೋವಾಬು ಮತ್ತು ಸೇಯೀರು, “ಇಗೋ, ಯೆಹೂದನ ಮನೆಯು ಸಮಸ್ತ ಇತರ ಜನಾಂಗಗಳ ಹಾಗಿದೆ,” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 25:8
22 ತಿಳಿವುಗಳ ಹೋಲಿಕೆ  

ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು,


ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಮೂಲಕ ಅವುಗಳನ್ನು ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನ್ಯರ ರಾಜ, ತೂರಿನ ರಾಜ, ಚೀದೋನಿನ ರಾಜ, ಇವರಿಗೆ ಕಳುಹಿಸು.


ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವುದು; ಮೋವಾಬ್ಯರೋ ತಿಪ್ಪೆಗುಂಡಿಯ ಕೆಸರಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾವಿದ್ದಲ್ಲೇ ತುಳಿಯಲ್ಪಡುವರು.


ನಾನು ಸೇಯೀರ್ ಬೆಟ್ಟದ ಸೀಮೆಯನ್ನು ಏಸಾವ್ಯರಿಗೇ ಸ್ವದೇಶವಾಗಿ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವುದಿಲ್ಲ.


ನಾನು ಅವನನ್ನು ನೋಡುವೆನು, ಈಗಲ್ಲ. ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು. ಇಸ್ರಾಯೇಲರಲ್ಲಿ ರಾಜದಂಡವು ಏಳುವುದು. ಅದು ಮೋವಾಬ್ಯರ ತಲೆಯನ್ನು ಸೀಳಿಹಾಕುವುದು ಸೇತನ ಎಲ್ಲಾ ಮಕ್ಕಳನ್ನು ಸಂಹರಿಸಿವುದು.


“ನರಪುತ್ರನೇ, ತೂರು, ಯೆರೂಸಲೇಮಿನ ವಿಷಯವಾಗಿ, ಅಹಾ!, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ! ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು” ಅಂದುಕೊಳ್ಳುವೆನು.


ಯೆರೂಸಲೇಮಿನ ದೇವರಾದ ಯೆಹೋವನು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನನು ಎಂದು ಅನ್ಯದೇವರುಗಳಿಗೆ ಹೋಲಿಸಿ ಮಾತನಾಡಿದರು.


ಯೆಹೋವನು ತನ್ನ ಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸ್ವತ್ತಿಗೆ ಕೈಹಾಕುವ ತನ್ನ ಕೆಟ್ಟ ನೆರೆಯವರ ವಿಷಯದಲ್ಲಿ, “ಆಹಾ, ಅವರನ್ನು ಅವರವರ ಸೀಮೆಗಳೊಳಗಿಂದ ಕಿತ್ತುಹಾಕಿ, ಅವರ ಮಧ್ಯದಲ್ಲಿನ ಯೆಹೂದ ವಂಶವನ್ನೂ ಕಿತ್ತುಹಾಕುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು