Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಉರುಳಿಸಿ, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ, ಮರಗಳನ್ನೂ, ಮಣ್ಣುಗಳನ್ನೂ ಸಮುದ್ರದಲ್ಲಿ ಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಉರುಳಿಸಿ, ನಿನ್ನ ವಿನೋದಭವನಗಳನ್ನು ಕೆಡವಿ, ನಿನ್ನ ಕಲ್ಲುಮರಮಣ್ಣುಗಳನ್ನು ಸಮುದ್ರದ ಪಾಲುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು ನಿನ್ನ ಸರಕುಗಳನ್ನು ಕೊಳ್ಳೆಹೊಡೆದು ನಿನ್ನ ಗೋಡೆಗಳನ್ನು ಉರುಳಿಸಿ ನಿನ್ನ ವಿನೋದಭವನಗಳನ್ನು ಕಿತ್ತುಹಾಕಿ ನಿನ್ನ ಕಲ್ಲುಮರಮಣ್ಣುಗಳನ್ನು ಸಮುದ್ರದ ಪಾಲುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೆಬೂಕದ್ನೆಚ್ಚರನ ಸೈನ್ಯವು ನಿನ್ನ ಐಶ್ವರ್ಯವನ್ನು ದೋಚಿಕೊಳ್ಳುವದು. ನೀನು ಮಾರಬೇಕೆಂದಿದ್ದ ವಸ್ತುಗಳನ್ನು ಅವರು ದೋಚಿಕೊಳ್ಳುವರು. ನಿನ್ನ ಗೋಡೆಗಳನ್ನು ಒಡೆದು ಅಂದವಾದ ನಿನ್ನ ಮನೆಗಳನ್ನು ಹಾಳು ಮಾಡುವರು. ನಿನ್ನ ಮರದಿಂದ ಮತ್ತು ಕಲ್ಲುಗಳಿಂದ ಮಾಡಿದ ಮನೆಗಳನ್ನು ಕಸದಂತೆ ಸಮುದ್ರಕ್ಕೆ ಎಸೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರು ನಿನ್ನ ಸಂಪತ್ತನ್ನು ಕಸಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಒಡೆದು, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ ನಿನ್ನ ಮರಗಳನ್ನೂ ಧೂಳನ್ನೂ ನೀರಿನಲ್ಲಿ ಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:12
19 ತಿಳಿವುಗಳ ಹೋಲಿಕೆ  

ಅದು ಕಿರೀಟದಾಯಕವಾದ ಪಟ್ಟಣವು. ಅದರ ವರ್ತಕರು ಪ್ರಭುಗಳು, ಅದರ ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಸಂಕಲ್ಪವನ್ನು ಮಾಡಿದವನು ಯಾರು?


ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ.


ಹಿಜ್ಕೀಯನಿಗೆ ಅತ್ಯಧಿಕವಾದ ಧನ ಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ, ಆಭರಣ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕೋಸ್ಕರ ಭಂಡಾರಗಳನ್ನು ಸಿದ್ಧಪಡಿಸಿದನು


ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು. ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯ ದೇಶವನ್ನು ಹಾಳುಮಾಡಿದರು.’”


ಬೆಳ್ಳಿಯನ್ನು ಸೂರೆಮಾಡಿರಿ, ಬಂಗಾರವನ್ನು ಕೊಳ್ಳೆ ಹೊಡೆಯಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧವಾದ ಶ್ರೇಷ್ಠವಸ್ತುಗಳ ನಿಧಿಗೂ ಮಿತಿಯೇ ಇಲ್ಲ.


ಎಫ್ರಾಯೀಮು ತನ್ನ ಸಹೋದರರಲ್ಲಿ ಫಲಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವನು ಬೀಸಮಾಡುವ ಮೂಡಣ ಗಾಳಿಯು ಬರಲು ಅದರ ಬುಗ್ಗೆಯು ಬತ್ತುವುದು, ಅದರ ಒರತೆಯು ಒಣಗುವುದು. ಶತ್ರುವು ಅವರ ಪ್ರಿಯವಸ್ತುಗಳ ನಿಧಿಯನ್ನು ಸೂರೆಮಾಡುವನು.


ಅವರ ದೇವರುಗಳನ್ನೂ, ಎರಕದ ಬೊಂಬೆಗಳನ್ನೂ, ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ, ಸೂರೆ ಮಾಡಿಕೊಂಡು ಐಗುಪ್ತಕ್ಕೆ ಬಂದು, ಕೆಲವು ವರ್ಷಗಳ ತನಕ ಉತ್ತರ ದಿಕ್ಕಿನ ರಾಜನ ತಂಟೆಗೆ ಹೋಗುವುದಿಲ್ಲ.


“ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರದ ಮಧ್ಯದಲ್ಲಿ ಹತರಾದವರ ಹಾಗೆ ನೀನು ಸಾಯುವಿ.


ಅದು ಸಮುದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿರುವುದು. ನಾನೇ ಇದನ್ನು ನುಡಿದಿದ್ದೇನೆ ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ, ‘ಅದು ಜನಾಂಗಗಳಿಗೆ ಸೂರೆಯಾಗುವುದು.’


ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ನಾಯಕರೇ, ಬೂದಿಯಲ್ಲಿ ಬಿದ್ದು ಹೊರಳಾಡಿರಿ! ನಿಮ್ಮನ್ನು ವಧಿಸುವ ಕಾಲವು ಬಂದಿದೆ; ನಾನು ನಿಮ್ಮನ್ನು ಭಂಗಪಡಿಸುವೆನು; ನೀವು ಬಿದ್ದು ಒಡೆದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ.


ಇಷ್ಟವಾದ ಹೊಲಗಳ ಮತ್ತು ಫಲವತ್ತಾದ ದ್ರಾಕ್ಷಾಲತೆಗಾಗಿ ಎದುರುನೋಡಿರಿ.


ಯೆಹೋವನು ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅದರ ವಿಷಯವಾಗಿ ಯೆಹೋವನು ಅಪ್ಪಣೆಕೊಟ್ಟಿದ್ದಾನೆ.


ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು.


ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇಮಿನ ಸುತ್ತು ಗೋಡೆಗಳನ್ನೆಲ್ಲಾ ಕೆಡವಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು