Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಸಮುದ್ರದ ಸುತ್ತುಮುತ್ತಲಿನ ಸಕಲ ಅರಸರು ತಮ್ಮ ಸಿಂಹಾಸನದಿಂದ ಇಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ವಿಚಿತ್ರವಾಗಿ ಹೊಲೆದ ತಮ್ಮ ಕಸೂತಿಯ ಬಟ್ಟೆಯನ್ನು ಕಿತ್ತುಹಾಕಿ, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಳಿತು, ಕ್ಷಣ ಕ್ಷಣಕ್ಕೂ ನಡುಗುತ್ತಾ, ನಿನ್ನ ವಿಷಯವಾಗಿ ಆಶ್ಚರ್ಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಸಮುದ್ರದ ಸುತ್ತುಮುತ್ತಲಿನ ಎಲ್ಲ ಒಡೆಯರು ತಮ್ಮ ಸಿಂಹಾಸನಗಳಿಂದಿಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ಕಸೂತಿ ವಸ್ತ್ರಗಳನ್ನು ಕಿತ್ತೆಸೆದು, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಕ್ಕರಿಸಿ, ಕ್ಷಣಕ್ಷಣವೂ ನಡುಗುತ್ತಾ ನಿನಗೆ ಬೆಚ್ಚಿಬೆರಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಸಮುದ್ರದ ಸುತ್ತುಮುತ್ತಲಿನ ಸಕಲಪ್ರಭುಗಳು ತಮ್ಮ ಸಿಂಹಾಸನಗಳಿಂದಿಳಿದು ನಿಲುವಂಗಿಗಳನ್ನು ತೆಗೆದುಹಾಕಿ ಬೂಟೇದಾರಿಯ ವಸ್ತ್ರಗಳನ್ನು ಕಿತ್ತೆಸೆದು ತತ್ತರವನ್ನೇ ಹೊದ್ದುಕೊಂಡು ನೆಲದ ಮೇಲೆ ಕುಕ್ಕರಿಸಿ ಕ್ಷಣಕ್ಷಣವೂ ನಡುಗುತ್ತಾ ನಿನಗೆ ಬೆಚ್ಚಿ ಬೆರಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ಸಮುದ್ರ ತೀರದ ದೇಶಗಳ ನಾಯಕರೆಲ್ಲಾ ತಮ್ಮ ಸಿಂಹಾಸನದಿಂದ ಕೆಳಗಿಳಿದು ತಮ್ಮ ಶೋಕವನ್ನು ವ್ಯಕ್ತಪಡಿಸುವರು. ಅವರು ತಮ್ಮ ಸುಂದರವಾದ ರಾಜವಸ್ತ್ರಗಳನ್ನು ತೆಗೆದಿಟ್ಟು ಭಯದ ಬಟ್ಟೆಗಳನ್ನು ಧರಿಸಿಕೊಂಡು ನೆಲದ ಮೇಲೆ ಭಯದಿಂದ ಕುಳಿತುಕೊಳ್ಳುವರು. ನೀನು ಎಷ್ಟು ಬೇಗನೇ ನಾಶವಾದೆ ಎಂದು ಕೇಳಿ ದಂಗುಬಡಿದಂತಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಮೇಲೆ ಸಮುದ್ರತೀರದ ಎಲ್ಲಾ ರಾಜಕುಮಾರರು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲುವಂಗಿಗಳನ್ನು ತೆಗೆದುಹಾಕುವರು, ಕಸೂತಿ ಕೆಲಸದಿಂದ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು. ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳುವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯವಾಗಿ ಭಯಭೀತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:16
32 ತಿಳಿವುಗಳ ಹೋಲಿಕೆ  

ಹೌದು, ಅನೇಕ ಜನಾಂಗಗಳು ನಿನ್ನ ವಿಷಯದಲ್ಲಿ ಬೆಚ್ಚಿಬೆರಗಾಗುವಂತೆ ಮಾಡುವೆನು, ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಸುವಾಗ, ಅವರು ನಿನ್ನ ದುರ್ಗತಿಯನ್ನು ನೆನಸಿ ಭಯಭ್ರಾಂತರಾಗುವರು; ನಿನ್ನ ಸೋಲಿನ ದಿನದಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣದ ಬಗ್ಗೆ ಕ್ಷಣಕ್ಷಣವೂ ನಡುಗುವನು.”


ಆ ಸುದ್ದಿಯು ನಿನೆವೆಯ ಅರಸನಿಗೆ ತಿಳಿಯಲು ಅವನು ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡನು.


ಸಿಂಹದಂತೆ ಗರ್ಜಿಸುತ್ತಿರುವ ಯೆಹೋವನನ್ನು ಆತನ ಜನರು ಹಿಂಬಾಲಿಸುವರು; ಆತನು ಆರ್ಭಟಿಸಲು ಆತನ ಮಕ್ಕಳು ಪಶ್ಚಿಮದಿಂದ ನಡಗುತ್ತಾ ಬರುವರು;


ನಿನ್ನ ಶತ್ರುಗಳನ್ನು ಅವಮಾನವು ಮುಸುಕುವುದು; ದುಷ್ಟರ ನಿವಾಸವು ನಿರ್ಮೂಲವಾಗುವುದು.”


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”


ಅವಳ ಪುರದ್ವಾರಗಳಲ್ಲಿ ಪ್ರಲಾಪವೂ, ದುಃಖವೂ ತುಂಬಿರುವವು. ಅವಳು ಹಾಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.


ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು, ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ.


ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲವಾಯಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


ಇನ್ನು ಸ್ವಲ್ಪ ಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿದು, ನನ್ನ ಕೋಪವನ್ನು ತೀರಿಸಿಕೊಂಡು, ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.


ಚೀಯೋನ್ ನಗರಿಯ ಹಿರಿಯರು ನೆಲದಲ್ಲಿ ಮೌನವಾಗಿ ಕುಕ್ಕರಿಸಿದ್ದಾರೆ; ತಲೆಯ ಮೇಲೆ ಧೂಳನ್ನು ತೂರಿಕೊಂಡು, ಗೋಣಿ ತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇಮಿನ ಕನ್ಯೆಯರು ತಲೆಗಳನ್ನು ನೆಲಕ್ಕೆ ಬೊಗ್ಗಿಸಿದ್ದಾರೆ.


ಯೆರೂಸಲೇಮೇ, ಧೂಳನ್ನು ಝಾಡಿಸಿಕೋ! ಎದ್ದು ಆಸನದ ಮೇಲೆ ಕುಳಿತುಕೋ! ಸೆರೆಯಲ್ಲಿ ಬಿದ್ದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನವನ್ನು ಬಿಚ್ಚಿಕೋ!


ಯುವತಿಯೇ, ಬಾಬೆಲ್ ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕುಳಿತುಕೋ, ಕಸ್ದೀಯರ ಯುವತಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ! ನಿನ್ನನ್ನು ಇನ್ನು ಕೋಮಲೆ ಮತ್ತು ಸುಕುಮಾರಿ ಎಂದು ಕರೆಯುವುದಿಲ್ಲ.


ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವುದು.”


ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ; ನಾಚಿಕೆಯೇ ಅವರ ಹೊದಿಕೆಯಾಗಲಿ.


ಅವನು ಶಾಪವನ್ನೇ ವಸ್ತ್ರವನ್ನಾಗಿ ಹೊದ್ದುಕೊಳ್ಳಲಿ, ಅದು ನೀರಿನಂತೆ ಅವನ ಅಂತರಂಗದಲ್ಲಿಯೂ, ಎಣ್ಣೆಯಂತೆ ಎಲುಬುಗಳಲ್ಲಿಯೂ ಸೇರಲಿ.


ಎದೋಮ್ಯರ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಮೋವಾಬ್ಯರ ಸೈನಿಕರು ನಡುಗುವರು; ಕಾನಾನಿನ ನಿವಾಸಿಗಳೆಲ್ಲರೂ ಕರಗಿ ಹೋಗುವರು.


“ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾದ ಭೂರಾಜರು ಅವಳ ದಹನದಿಂದೇರುವ ಹೊಗೆಯನ್ನು ನೋಡಿ ಭಯಪಟ್ಟು ಅವಳಿಗಾಗಿ ದೂರದಲ್ಲಿ ನಿಂತು ಅಳುತ್ತಾ ಗೋಳಾಡುತ್ತಾ, ‘ಅಯ್ಯೋ ಅಯ್ಯೋ ಮಹಾ ನಗರವಾದ ಬಾಬೆಲ್ ಪಟ್ಟಣವೇ, ಬಲಿಷ್ಠವಾದ ಬಾಬೆಲ್ ನಗರಿಯೇ ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ತಾಸಿನಲ್ಲಿ ಬಂದಿತಲ್ಲಾ’ ಎಂದು ಶೋಕಿಸುವರು.


ದ್ವೀಪ ನಿವಾಸಿಗಳು ಕಂಡು ಬೆರಗಾದರು, ಭೂಮಿಯ ಕಟ್ಟ ಕಡೆಯವರು ನಡುಗಿದರು, ಎಲ್ಲರೂ ನೆರೆದು ಬಂದರು.


ಆಹಾ, ಭಂಗವಾಯಿತು! ಕಿರಿಚಿಕೊಳ್ಳುತ್ತಾರಲ್ಲಾ! ಓಹೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ! ಅದರ ನೆರೆಹೊರೆಯವರು ಅಣಕಿಸುವುದಕ್ಕೂ ಮತ್ತು ಬೆಚ್ಚಿಬೀಳುವುದಕ್ಕೂ ಆಸ್ಪದವಾಗಿದೆ.


ಅರಸನು ದುಃಖಿಸುವನು, ಭಯವು ಪ್ರಭುವನ್ನು ಮುಸುಕುವುದು, ಸಾಧಾರಣಜನರ ಕೈಗಳು ತತ್ತರಿಸುವವು; ನಾನು ಅವರ ದುರ್ನಡತೆಗೆ ತಕ್ಕ ಪ್ರತಿಕಾರವನ್ನು ಮಾಡಿ, ಅವರ ದುಷ್ಟ ಕಾರ್ಯಗಳಿಗೆ ಸರಿಯಾಗಿ ದಂಡನೆಯನ್ನು ವಿಧಿಸುವೆನು; ಆಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.”


ಇದಲ್ಲದೆ ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲಪ್ರಾಣಿಯ ಕೆಂಪು ಚರ್ಮದ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ, ನಯವಾದ ನಾರು ಮಡಿಯನ್ನು ನಿನಗೆ ಉಡಿಸಿ, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.


ನಿನ್ನನ್ನು ತೀರಾ ಧ್ವಂಸಮಾಡುವೆನು; ನೀನು ಇಲ್ಲವಾಗುವಿ; ಎಷ್ಟು ಹುಡುಕಿದರೂ ನೀನು ಎಂದಿಗೂ ಸಿಕ್ಕುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ.


“‘ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಬುದ್ಧಿಯನ್ನು ಹಾಳು ಮಾಡಿಕೊಂಡೆ; ನಾನು ನಿನ್ನನ್ನು ನೆಲಕ್ಕೆ ಹಾಕಿ, ನಿನ್ನನ್ನು ಅರಸರು ನೋಡುವಂತೆ ಅವರ ಕಣ್ಣ ಮುಂದೆ ಹಾಕುವೆನು.


ರಾಜ್ಯಗಳ ಸಿಂಹಾಸನವನ್ನು ಕೆಡವಿ, ಜನಾಂಗಗಳ ಸಂಸ್ಥಾನ ಬಲವನ್ನು ಧ್ವಂಸಮಾಡಿ ರಥಗಳನ್ನೂ ಮತ್ತು ಅದರ ಸವಾರರನ್ನು ದೊಬ್ಬಿಬಿಡುವೆನು; ಕುದುರೆಗಳೂ ಹಾಗೂ ರಾಹುತರೂ ಬಿದ್ದುಹೋಗುವರು, ಪ್ರತಿಯೊಬ್ಬನೂ ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.”


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆ ವೃಕ್ಷವು ಪಾತಾಳಕ್ಕೆ ಇಳಿದು ಹೋದ ದಿನದಲ್ಲಿ ನಾನು ದುಃಖವನ್ನು ಹುಟ್ಟಿಸುವೆನು. ಅದರ ವಿಯೋಗಕ್ಕಾಗಿ ನಾನು ಮಹಾ ನದಿಯನ್ನು ಮರೆಮಾಡಿ, ನದಿಗಳನ್ನು ತಡೆದುಬಿಟ್ಟೆನು, ಜಲಪ್ರವಾಹವು ನಿಂತುಹೋಯಿತು; ಅದಕ್ಕಾಗಿ ಲೆಬನೋನು ಗೋಳಿಡುವಂತೆ ಮಾಡಿದೆನು, ಭೂಮಿಯ ಸಕಲ ವೃಕ್ಷಗಳು ಆ ದುಃಖಕ್ಕೆ ಕುಗ್ಗಿಹೋದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು