ಯೆಹೆಜ್ಕೇಲನು 26:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ಹಾಳು ಊರನ್ನಾಗಿ ಮಾಡಿ, ನಿರ್ಜನ ಪಟ್ಟಣಗಳ ಗತಿಗೆ ತಂದು, ನೀನು ಜಲರಾಶಿಯಲ್ಲಿ ಮುಳುಗಿ ಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಬರಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ನಾನು ನಿನ್ನನ್ನು ಹಾಳೂರು ಮಾಡಿ ನಿರ್ಜನ ಪಟ್ಟಣಗಳ ಗತಿಗೆ ತಂದು, ನೀನು ಜಲರಾಶಿಯಲ್ಲಿ ಮುಣುಗಿಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಉಕ್ಕಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ನಿನ್ನನ್ನು ಹಾಳೂರು ಮಾಡಿ ನಿರ್ಜನಪಟ್ಟಣಗಳ ಗತಿಗೆ ತಂದು ನೀನು ಜಲರಾಶಿಯಲ್ಲಿ ಮುಣುಗಿಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಉಕ್ಕಿಸುವಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಇದು ನನ್ನ ಒಡೆಯನಾದ ಯೆಹೋವನ ನುಡಿ. “ತೂರ್, ನಾನು ನಿನ್ನನ್ನು ನಾಶಮಾಡುವೆನು. ಆಗ ನೀನು ಬರಿದಾದ ನಗರವಾಗಿರುವೆ. ಯಾರೂ ಅಲ್ಲಿ ವಾಸ ಮಾಡುವದಿಲ್ಲ. ನಿನ್ನ ಮೇಲೆ ಸಮುದ್ರವು ತುಂಬುವಂತೆ ಮಾಡುವೆನು. ಆ ಮಹಾಸಾಗರವು ನಿನ್ನನ್ನು ಮುಚ್ಚಿಬಿಡುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧ ಜಲರಾಶಿಯನ್ನು ನಿನ್ನ ಮೇಲೆ ಬರಮಾಡುವೆನು. ಅಧ್ಯಾಯವನ್ನು ನೋಡಿ |