Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ತೂರು, ಯೆರೂಸಲೇಮಿನ ವಿಷಯವಾಗಿ, ಅಹಾ!, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ! ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು” ಅಂದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ಜೆರುಸಲೇಮಿನ ವಿಷಯವಾಗಿ ಟೈರ್ ನಗರವು ‘ಅಹಹ, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ, ನನ್ನ ಕಡೆಗೆ ತೆರೆದುಬಿದ್ದಿದೆ; ಜೆರುಸಲೇಮ್ ಹಾಳಾದ ಕಾರಣ ನಾನು ವೃದ್ಧಿಗೊಳ್ಳುವೆನು’ ಎಂದುಕೊಂಡಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ತೂರು ಯೆರೂಸಲೇವಿುನ ವಿಷಯವಾಗಿ - ಅಹಹ, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ, ನನ್ನ ಕಡೆಗೆ ತೆರೆದುಬಿಟ್ಟಿದೆ ; ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಅಂದುಕೊಂಡದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನರಪುತ್ರನೇ, ಜೆರುಸಲೇಮ್ ಬಗ್ಗೆ ತೂರ್ ಕೆಟ್ಟ ಮಾತುಗಳನ್ನಾಡಿದೆ. ‘ಜನರನ್ನು ಸುರಕ್ಷಿತವಾಗಿರಿಸುವ ನಗರದ್ವಾರವು ಕೆಡವಲ್ಪಟ್ಟು ದ್ವಾರವೇ ಇಲ್ಲದಂತಾಗಿದೆ. ನಗರವು ಹಾಳಾಗಿರುವುದರಿಂದ ಕೊಳ್ಳೆ ಹೊಡೆಯಲು ಸುಲಭವಾಯಿತು’ ಎಂದು ಅದು ಅಂದುಕೊಂಡಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಮನುಷ್ಯಪುತ್ರನೇ, ಟೈರ್, ಯೆರೂಸಲೇಮಿನ ವಿಷಯವಾಗಿ, ‘ಆಹಾ, ಜನರ ದ್ವಾರವಾಗಿದ್ದದ್ದು ಮುರಿದುಹೋಯಿತು, ಅದು ನನ್ನ ಕಡೆಗೆ ತೆರೆದುಕೊಂಡಿದೆ. ಯೆರೂಸಲೇಮು ಹಾಳಾದದ್ದರಿಂದ ನಾನು ವೃದ್ಧಿಗೊಳ್ಳುವೆನು,’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:2
27 ತಿಳಿವುಗಳ ಹೋಲಿಕೆ  

ತೂರ್, ಚೀದೋನ್, ಫಿಲಿಷ್ಟಿಯರ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರುದ್ಧ ನಿಮಗೆ ಕೋಪವೇಕೆ? ನನಗೆ ಪ್ರತಿಕಾರ ಮಾಡುವಿರೋ? ನೀವು ನನಗೆ ಪ್ರತಿಕಾರ ಮಾಡಿದರೆ, ನೀವು ಮಾಡುವ ಕೇಡನ್ನು ತ್ವರೆಯಾಗಿ ನಿಮ್ಮ ತಲೆಗೆ ಬರುವಂತೆ ಮಾಡುವೆನು.


ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ಶತ್ರುವು ನಿಮ್ಮನ್ನು ನೋಡಿ, “ಆಹಾ!” ಎನ್ನುತ್ತಾ, ಈ ಪುರಾತನ ದುರ್ಗಗಳು ನಮ್ಮ ವಶವಾಗಿವೆ’” ಎಂದು ಹೇಳುವರು.


ತೂರಿನ ಎಲ್ಲಾ ಅರಸರು, ಚೀದೋನಿನ ಎಲ್ಲಾ ಅರಸರು, ಸಮುದ್ರದ ಆಚೆಯ ಕರಾವಳಿಯ ಅರಸರು,


ಆ ಸೀಮೆಯನ್ನಲ್ಲದೆ, ಅಮ್ಮೋನನ್ನೂ ಮೂಡಣದವರಿಗೆ ಬಾಧ್ಯವಾಗಿ ಕೊಟ್ಟು, ಅಮ್ಮೋನ್ಯರು ಜನಾಂಗಗಳೊಳಗೆ ನಿರ್ನಾಮವಾಗಬೇಕೆಂಬ ನನ್ನ ಸಂಕಲ್ಪವನ್ನು ನೆರವೇರಿಸುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಬಡಿದು, ಇಸ್ರಾಯೇಲ್ ದೇಶವನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದರ ಗತಿಗೆ ಹಿಗ್ಗಿಕೊಂಡೆ.


ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಗುಲಾಮಳಾದಳು.


ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?


ಏಕೆಂದರೆ ಆ ದಿನದಲ್ಲಿ ಫಿಲಿಷ್ಟಿಯರೆಲ್ಲರೂ ಸೂರೆಯಾಗುವರು, ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಉಳಿದವರೆಲ್ಲಾ ನಿರ್ಮೂಲವಾಗುವರು; ಕಫ್ತೋರ್ ದ್ವೀಪದವರಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು ಯೆಹೋವನೇ ಸೂರೆಮಾಡುವನು.


ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಮೂಲಕ ಅವುಗಳನ್ನು ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನ್ಯರ ರಾಜ, ತೂರಿನ ರಾಜ, ಚೀದೋನಿನ ರಾಜ, ಇವರಿಗೆ ಕಳುಹಿಸು.


ಇವರೆಲ್ಲಾ ಏಕಮನಸ್ಸಿನಿಂದ ಕೂಡಿ, ನಿನಗೆ ವಿರುದ್ಧವಾಗಿ ಒಳಸಂಚು ಮಾಡುತ್ತಾರಲ್ಲಾ;


ಆಹಾ, ಆಹಾ ಎಂದು ಪರಿಹಾಸ್ಯಮಾಡುವವರು ತಮಗಾಗುವ ಅಪಮಾನದಿಂದ ಬೆನ್ನು ಕೊಟ್ಟು ಓಡಿಹೋಗಲಿ.


ಆಹಾ, ಆಹಾ ಎಂದು ನನ್ನನ್ನು ಪರಿಹಾಸ್ಯಮಾಡುವವರು, ತಮಗೆ ಆಗುವ ಅವಮಾನದಿಂದ ವಿಸ್ಮಯಗೊಳ್ಳಲಿ.


ಅವರು ನನ್ನನ್ನು ನೋಡಿ ಬಾಯಿಕಿಸಿದು, “ಆಹಾ, ಆಹಾ, ನಮ್ಮ ಕಣ್ಣು ಕಂಡಿತಲ್ಲಾ” ಎಂದು ಅನ್ನುತ್ತಾರೆ.


ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ, ದೇವದಾರುಮರಗಳನ್ನೂ, ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ದಾವೀದನಿಗೋಸ್ಕರ ಅರಮನೆಯನ್ನು ಕಟ್ಟಿದರು.


ಅಲ್ಲಿಂದ ಅದು ತಿರುಗಿಕೊಂಡು ರಾಮ, ತೂರ್ ಕೋಟೆ, ಹೋಸಾ ಇವುಗಳ ಮೇಲೆ ಅಕ್ಜೀಬ್ ಪ್ರಾಂತ್ಯಕ್ಕೆ ಹೋಗಿ ಸಮುದ್ರ ತೀರದಲ್ಲಿ ಕೊನೆಗೊಳ್ಳುತ್ತದೆ.


ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಸರಿಪಡಿಸಿರಿ. ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಲ್ಲಿ ಧ್ವಜವನ್ನೆತ್ತಿರಿ!


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಯೆಹೂದ ವಂಶವು ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು? ಎಂದು ಮೋವಾಬೂ ಮತ್ತು ಸೇಯೀರೂ ಅಂದುಕೊಂಡಿದೆ.


ಹನ್ನೊಂದನೆಯ ವರ್ಷದ, ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


ನೀನು, “ಈ ಎರಡು ಜನಾಂಗಗಳೂ ಈ ಎರಡು ದೇಶಗಳೂ ನನ್ನ ವಶವಾಗುವವು” ಎಂದೂ ಹೇಳಿದ್ದರಿಂದ, ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ ಎಂದು ಅಂದುಕೊಂಡು, ಅಲ್ಲಿ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದರಿಂದ,


ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, “ಯೆಹೋವನು ಮಹೋನ್ನತನು” ಎಂದು ಯಾವಾಗಲೂ ಹೇಳುವವರಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು