ಯೆಹೆಜ್ಕೇಲನು 26:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 “ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲಿ ಸೇರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆಗ ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ, ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ನಿವಾಸಿಯಾಗುವಂತೆ, ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲೇ ಸೇರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಪುರಾತನಕಾಲದಲ್ಲಿ ಹಾಳಾದ ಪಟ್ಟಣಗಳಂತೆ ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ ನಿರ್ನಿವಾಸಿಯಾಗುವಂತೆ ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲಿ ಸೇರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆಳವಾದ ಗುಂಡಿಗೆ, ಸತ್ತವರು ಹೋಗುವ ಸ್ಥಳಕ್ಕೆ ನಿನ್ನನ್ನು ಕಳುಹಿಸುವೆನು. ಬೇರೆ ಹಳೇ ನಗರಗಳಂತೆ ನಾನು ಭೂಮಿಯ ಕೆಳಗೆ ನಿನ್ನನ್ನು ಕಳುಹಿಸಿಬಿಡುವೆನು. ಸಮಾಧಿಯೊಳಗಿರುವವರೊಂದಿಗೆ ನೀನು ಇರುವೆ. ನಿನ್ನಲ್ಲಿ ಆಗ ಯಾರೂ ವಾಸ ಮಾಡುವದಿಲ್ಲ. ನೀನು ಎಂದಿಗೂ ಜೀವಿಸುವವರ ಲೋಕದಲ್ಲಿರುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವವುಳ್ಳವರ ಲೋಕದಲ್ಲಿ ನೆಲೆಗೊಳಿಸದೆ ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರೊಂದಿಗೆ ವಾಸಿಸುವಂತೆ ಸೇರಿಸುವೆನು. ಅಧ್ಯಾಯವನ್ನು ನೋಡಿ |