Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದು ಸಮುದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿರುವುದು. ನಾನೇ ಇದನ್ನು ನುಡಿದಿದ್ದೇನೆ ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ, ‘ಅದು ಜನಾಂಗಗಳಿಗೆ ಸೂರೆಯಾಗುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅದು ಸಮುದ್ರದ ನಡುವೆ ಬಲೆಗಳಿಗೆ ಹಾಸುಬಂಡೆಯಾಗುವುದು; ನಾನೇ ಇದನ್ನು ನುಡಿದಿದ್ದೇನೆ, ಎಂದು ಸರ್ವೇಶ್ವರನಾದ ದೇವರು ಎನ್ನುತ್ತಾರೆ; ಅದು ಜನಾಂಗಗಳಿಗೆ ಸೂರೆಯಾಗುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅದು ಸಮುದ್ರದ ನಡುವೆ ಬಲೆಗಳಿಗೆ ಹಾಸಬಂಡೆಯಾಗುವದು; ನಾನೇ ಇದನ್ನು ನುಡಿದಿದ್ದೇನೆ ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ; ಅದು ಜನಾಂಗಗಳಿಗೆ ಸೂರೆಯಾಗುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಬೆಸ್ತರು ತಮ್ಮ ಬಲೆಗಳನ್ನು ಹರಡಿ ಒಣಗಿಸುವ ಸ್ಥಳವನ್ನಾಗಿ ಮಾಡುವೆನು. ಇದು ನನ್ನ ನುಡಿ.” ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಸೈನಿಕರು ಯುದ್ಧದ ಸಮಯದಲ್ಲಿ ಬೆಲೆಬಾಳುವ ವಸ್ತುವನ್ನು ಕೊಳ್ಳೆ ಮಾಡುವಂತೆ ತೂರ್ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅದು ಸಮುದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿರುವುದು. ನಾನೇ ಅದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅದು ಜನಾಂಗಗಳಿಗೆ ಕೊಳ್ಳೆಯಾಗಿರುವುದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:5
6 ತಿಳಿವುಗಳ ಹೋಲಿಕೆ  

ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತ ದೇಶವನ್ನು ಕೊಡುತ್ತೇನೆ; ಅವನು ಅದರ ಜನಸಮೂಹವನ್ನೂ, ಅದರ ಕೊಳ್ಳೆಯನ್ನೂ, ಅದರ ಸುಲಿಗೆಯನ್ನೂ ಸೂರೆಮಾಡುವನು; ಇದೇ ಅವನ ಸೈನ್ಯಕ್ಕೆ ಸಿಕ್ಕುವ ಪ್ರತಿಫಲವಾಗುವುದು.


ಆಗ ಆ ಸಮುದ್ರದ ತೀರದಲ್ಲಿ ಬೆಸ್ತರು ನಿಂತಿರುವರು; ಏನ್ ಗೆದಿಯಿಂದ ಏನ್ ಎಗ್ಲಯಿಮಿನವರೆಗೆ ದಡವೆಲ್ಲಾ ಬಲೆ ಹಾಸುವ ಸ್ಥಳವಾಗುವುದು; ಬಗೆಬಗೆಯ ಮೀನುಗಳು ಮಹಾಸಾಗರದ ಮೀನುಗಳಂತೆ ಅವರಿಗೆ ರಾಶಿ ರಾಶಿಯಾಗಿ ಸಿಕ್ಕುವವು.


ಅವರು ರೋದನ ಮಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು, ‘ಸಮುದ್ರದ ನಡುವೆ ಹಾಳಾಗಿರುವ ತೂರಿಗೆ ಯಾವ ಪಟ್ಟಣ ಸಮಾನವಾಗಿದೆ?’


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ಹಾಳು ಊರನ್ನಾಗಿ ಮಾಡಿ, ನಿರ್ಜನ ಪಟ್ಟಣಗಳ ಗತಿಗೆ ತಂದು, ನೀನು ಜಲರಾಶಿಯಲ್ಲಿ ಮುಳುಗಿ ಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಬರಮಾಡುವೆನು.


ಆದುದರಿಂದ ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ಸುಲಿಗೆಗಾಗಿ ಮ್ಲೇಚ್ಛರಿಗೆ ವಶಪಡಿಸಿ, ಜನಾಂಗಗಳೊಳಗಿಂದ ಕಿತ್ತುಬಿಟ್ಟು, ದೇಶಗಳೊಳಗಿಂದ ನಿನ್ನ ಹೆಸರನ್ನು ಅಳಿಸಿ, ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.”


ನಾನು ನಿನ್ನನ್ನು ಬೋಳು ಬಂಡೆಯನ್ನಾಗಿ ಮಾಡುವೆನು; ನೀನು ಬಲೆಗಳನ್ನು ಹಾಕುವ ಸ್ಥಳವಾಗುವಿ; ನಿನ್ನ ಮೇಲೆ ಇನ್ನು ಕಟ್ಟಡವನ್ನು ಕಟ್ಟುವುದಿಲ್ಲ; ಯೆಹೋವನಾದ ನಾನೇ ಅಪ್ಪಣೆ ಕೊಟ್ಟಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು