Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 26:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ರಾಜಾಧಿರಾಜನೂ, ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಅಶ್ವಗಳ ಸಂಗಡಲೂ, ರಥಗಳ ಸಂಗಡಲೂ, ರಾಹುತರ ಸಂಗಡಲೂ, ಬಹುಜನರ ಸಂಗಡಲೂ ಕೂಡಿದವನಾಗಿ ನಾನು ಪೂರ್ವದಿಂದ ತೂರಿನ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಇಗೋ, ರಾಜಾಧಿರಾಜನೂ ಬಾಬಿಲೋನಿನ ಅರಸನೂ ಆದ ನೆಬೂಕದ್ನೆಚ್ಚರನನ್ನು, ಅಶ್ವ, ರಥ, ರಾಹುತ, ಬಹುಸೈನ್ಯ ಪರಿವಾರ ಇವುಗಳಿಂದ ಕೂಡಿದವನಾಗಿ, ನಾನು ಉತ್ತರದಿಂದ ಟೈರಿನ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಅಶ್ವ, ರಥ, ರಾಹುತ, ಬಹುಜನಪರಿವಾರ ಇವುಗಳಿಂದ ಕೂಡಿದವನನ್ನಾಗಿ ನಾನು ಬಡಗಲಿಂದ ತೂರಿನ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಉತ್ತರ ದಿಕ್ಕಿನಿಂದ ಒಬ್ಬ ಶತ್ರುವನ್ನು ನಾನು ತೂರಿಗೆ ವಿರುದ್ಧವಾಗಿ ಬರಮಾಡುವೆನು. ಅವನೇ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು. ಅವನು ಲೆಕ್ಕವಿಲ್ಲದಷ್ಟು ಕುದುರೆ ಸವಾರರು, ರಥಗಳು, ಕಾಲ್ಬಲವುಳ್ಳ ದೊಡ್ಡ ಸೈನ್ಯವನ್ನು ತೆಗೆದುಕೊಂಡು ಬರುವನು. ಅವನ ಸೈನಿಕರೆಲ್ಲಾ ಬೇರೆಬೇರೆ ಜನಾಂಗದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ಉತ್ತರದ ರಾಜಾಧಿರಾಜನೂ ಬಾಬಿಲೋನಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡವೂ ಸವಾರರ ಸಂಗಡವೂ ರಥಗಳ ಸಂಗಡವೂ ಬಹುಜನರ ಸಂಗಡವೂ ಟೈರಿನ ಮೇಲೆ ತರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 26:7
22 ತಿಳಿವುಗಳ ಹೋಲಿಕೆ  

ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ.


“ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ ಪರಲೋಕದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ ತಿಳಿಸುವುದೇನೆಂದರೆ,


ಅವರು ರಥಗಳ ಸಂಗಡವಾಗಿಯೂ, ಬಂಡಿಗಳ ಸಂಗಡ ಜನಗಳ ಸಮೂಹದ ಸಂಗಡ, ಬಲವುಳ್ಳವರಾಗಿ ನಿನ್ನ ವಿರುದ್ಧವಾಗಿ ಬರುವರು; ಸುತ್ತಲೂ ಗುರಾಣಿಗಳನ್ನೂ, ಶಿರಸ್ತ್ರಾಣವನ್ನೂ, ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯ ತೀರಿಸುವ ಅಧಿಕಾರವನ್ನು ಕೊಡುವೆನು. ಅವರು ತಮ್ಮ ನ್ಯಾಯಾನುಸಾರವಾಗಿ ನ್ಯಾಯತೀರಿಸುವರು.


ಅದು ಜನಾಂಗಗಳೊಳಗೆ ಜಾರರನ್ನು ಸಂಪಾದಿಸಿದರೂ, ಅದನ್ನು ನಾನು ಈಗ ಸೆರೆಗೆ ಒಳಪಡಿಸುವೆನು. ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿಕ್ಕೆ ಆರಂಭವಾಗುವುದು.


ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು.


ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತ ಸ್ಥಾನವನ್ನು ಕೊಟ್ಟನು.


ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.


ಅವನು ಹೇಳುವುದೇನೆಂದರೆ, “ನನ್ನ ಅಧಿಪತಿಗಳೆಲ್ಲಾ ಅರಸರಲ್ಲವೇ?


ಆದುದರಿಂದ ನಾನು ನಿನ್ನ ಮೇಲೆ ಭಯಂಕರವಾದ ಜನಾಂಗದವರಾದ ಮ್ಲೇಚ್ಛರನ್ನು ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ತೂರ್ ದೇಶವೇ, ನಾನು ನಿನಗೆ ವಿರುದ್ಧವಾಗಿದ್ದೇನೆ; ಸಮುದ್ರವು ತನ್ನ ತೆರೆಗಳನ್ನು ಎಬ್ಬಿಸುವಂತೆ ನಾನು ಅನೇಕ ಜನಾಂಗಗಳನ್ನು ನಿನ್ನ ಮೇಲೆ ಎಬ್ಬಿಸುವೆನು.


ಇವನ ರಾಜ್ಯವು ಮೇಲಕ್ಕೆ ಏಳಲಾರದೆ ಇದ್ದರೂ, ಒಡಂಬಡಿಕೆಯನ್ನು ಕೈಗೊಳ್ಳುವುದರಿಂದ ಅದು ನಿಲ್ಲುವುದು.


ತೂರಿನ ಎಲ್ಲಾ ಅರಸರು, ಚೀದೋನಿನ ಎಲ್ಲಾ ಅರಸರು, ಸಮುದ್ರದ ಆಚೆಯ ಕರಾವಳಿಯ ಅರಸರು,


ಬಿಲ್ಲನ್ನೂ, ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಬೋರ್ಗರೆಯುತ್ತದೆ, ಕುದುರೆಗಳನ್ನು ಹತ್ತಿದ್ದಾರೆ. ಚೀಯೋನ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ನುಡಿಯುತ್ತಾನೆ.


ಇಗೋ, ಆ ಶತ್ರುವು ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವರ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ.


ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು