Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅರ್ವಾದಿನವರೂ ಮತ್ತು ಹೆಲೆಕರು ನಿನ್ನ ಸೈನಿಕರ ಸಂಗಡ ನಿನ್ನ ಗೋಡೆಗಳ ಸುತ್ತಲೂ ನಿಂತಿದ್ದರು. ಗಮ್ಮಾದ್ಯರು ನಿನ್ನ ಕೊತ್ತಲುಗಳಲ್ಲಿ ಕಾವಲಾಗಿದ್ದರು. ಎಲ್ಲರೂ ತಮ್ಮ ಗುರಾಣಿಗಳನ್ನು ಸುತ್ತಮುತ್ತಲು ನಿನ್ನ ಗೋಡೆಗಳ ಮೇಲೆ ನೇತುಹಾಕಿ, ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅರ್ವಾದಿನವರೂ ನಿನ್ನ ಸೈನಿಕರೂ ಸುತ್ತುಮುತ್ತಲು ನಿನ್ನ ತೆನೆಗೋಡೆಗಳಲ್ಲಿ ನಿಂತಿದ್ದರು; ಗಮ್ಮಾದ್ಯರು ನಿನ್ನ ಕೊತ್ತಲಗಳಲ್ಲಿ ಕಾವಲಾಗಿದ್ದರು; ಎಲ್ಲರು ತಮ್ಮ ಖೇಡ್ಯಗಳನ್ನು ಸುತ್ತಮುತ್ತಲು ನಿನ್ನ ಗೋಡೆಗಳಿಗೆ ನೇತುಹಾಕಿ ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅರ್ವಾದಿನವರೂ ನಿನ್ನ ಸೈನಿಕರೂ ಸುತ್ತುಮುತ್ತಲು ನಿನ್ನ ತೆನೆಗೋಡೆಗಳಲ್ಲಿ ನಿಂತಿದ್ದರು, ಗಮ್ಮಾದ್ಯರು ನಿನ್ನ ಕೊತ್ತಲಗಳಲ್ಲಿ ಕಾವಲಾಗಿದ್ದರು, ಎಲ್ಲರೂ ತಮ್ಮ ಖೇಡ್ಯಗಳನ್ನು ಸುತ್ತಮುತ್ತಲು ನಿನ್ನ ಗೋಡೆಗಳಿಗೆ ನೇತುಹಾಕಿ ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅರ್ವಾದ್ ಮತ್ತು ಸಿಲಿಸಿಯಾದ ಜನರು ನಿನ್ನ ಕೋಟೆಗೋಡೆಗಳಲ್ಲಿ ಕಾವಲಿಗಿರುವರು. ಗಮ್ಮಾದಿನಿಂದ ಬಂದ ಜನರು ನಿನ್ನ ಬುರುಜುಗಳಲ್ಲಿರುವರು. ನಿನ್ನ ಸೌಂದರ್ಯವನ್ನು ಅವರು ಪರಿಪೂರ್ಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅರ್ವಾದಿನವರು ಮತ್ತು ಹೆಲೆಕರು ನಿನ್ನ ದಂಡಿನ ಸಂಗಡ ನಿನ್ನ ಗೋಡೆಗಳ ಸುತ್ತಲೂ ಇದ್ದರು. ಗಮ್ಮಾದ್ಯರು ನಿನ್ನ ಗೋಪುರಗಳಲ್ಲಿ ಕಾವಲಾಗಿದ್ದರು. ತಮ್ಮ ಖೇಡ್ಯಗಳನ್ನು ಸುತ್ತಮುತ್ತಲೂ ನಿನ್ನ ಗೋಡೆಗಳ ಮೇಲೆ ನೇತುಹಾಕಿ ಇವರು ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:11
5 ತಿಳಿವುಗಳ ಹೋಲಿಕೆ  

ನಿನ್ನ ಕೊರಳು ದಾವೀದನು ಕಟ್ಟಿಸಿದ ನುಣುಪಾದ ಗೋಪುರದಂತಿದೆ, ನಿನ್ನ ಕತ್ತಿನ ಹಾರ ಸಾವಿರ ಶೂರರ ಗುರಾಣಿಗಳನ್ನು ನೇತುಹಾಕಿರುವ ದಾವೀದನ ಬುರುಜಿನ ಹಾಗಿದೆ.


ಚೀದೋನಿನ, ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವರು; ತೂರೇ, ನಿನ್ನಲ್ಲಿನ ವಿವೇಕಿಗಳು ನಿನ್ನ ನಾವಿಕರು.


ಪಾರಸಿಯರೂ, ಲೂದ್ಯರೂ, ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು. ಗುರಾಣಿಯನ್ನು ಮತ್ತು ಶಿರಸ್ತ್ರಾಣವನ್ನು ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು!


“ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿದ್ದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಮತ್ತು ಸೀಸಗಳನ್ನು ಒದಗಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು