Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿದ್ದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಮತ್ತು ಸೀಸಗಳನ್ನು ಒದಗಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು. ಆದುದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಹಾಗೂ ಸೀಸಗಳನ್ನು ನಿನಗೆ ಒದಗಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿದ್ದದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ ಕಬ್ಬಿಣ ತವರ ಸೀಸಗಳನ್ನು ನಿನಗೆ ಒದಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “‘ತಾರ್ಷೀಷ್ ನಿನ್ನ ಉತ್ತಮ ವ್ಯಾಪಾರ ಕೇಂದ್ರವಾಗಿತ್ತು. ಅವರು ತಮ್ಮ ಬೆಳ್ಳಿ, ಕಬ್ಬಿಣ, ತವರ ಮತ್ತು ಸೀಸ ಲೋಹಗಳನ್ನು ಕೊಟ್ಟು ನಿನ್ನಿಂದ ವಸ್ತುಗಳನ್ನು ಕೊಂಡುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ ‘ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು. ಆದ್ದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಹಾಗೂ ಸೀಸಗಳನ್ನು ನಿನಗೆ ಒದಗಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:12
22 ತಿಳಿವುಗಳ ಹೋಲಿಕೆ  

ಶೆಬದವರೂ, ದೆದಾನಿನವರೂ, ತಾರ್ಷೀಷಿನ ವರ್ತಕರೂ, ಅದರ ಸಿಂಹಪ್ರಾಯರೆಲ್ಲರೂ ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ಧನ ಕನಕ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದೆಯಾ?’” ಎಂದು ಕೇಳುವರು.


ತಾರ್ಷೀಷ್ ನಗರಿಯೇ, ನೈಲ್ ನದಿಯಂತೆ ನಿನ್ನ ಭೂಮಿಯನ್ನು ಬಿತ್ತು. ತೂರ್ ಪಟ್ಟಣದಲ್ಲಿ ಇನ್ನು ಮುಂದೆ ವ್ಯಾಪಾರ ಸ್ಥಳವು ಇರುವುದಿಲ್ಲ.


ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷೀಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರಗಳನ್ನು ಮತ್ತು ನವಿಲುಗಳನ್ನೂ ತರುತ್ತಿದ್ದವು.


ಯಾವಾನನ ಸಂತಾನದವರು - ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳದವರು. ಇವರು ಸಮುದ್ರದ ರೇವು ಪ್ರದೇಶಗಳಲ್ಲಿ ಹರಡಿಕೊಂಡರು.


ಆದರೆ ಯೋನನು ಯೆಹೋವನ ಸನ್ನಿಧಿಯಿಂದ ತಪ್ಪಿಸಿಕೊಳ್ಳಲು ತಾರ್ಷೀಷಿಗೆ ಓಡಿಹೋಗಬೇಕೆಂದು ಯೋಚಿಸಿ ಹೊರಟು ಯೊಪ್ಪ ಎಂಬ ಊರಿಗೆ ಬಂದು ಅಲ್ಲಿ ತಾರ್ಷೀಷಿಗೆ ಹೊರಡುವ ಹಡಗನ್ನು ಕಂಡು ಪ್ರಯಾಣದ ದರವನ್ನು ಕೊಟ್ಟು ತಾರ್ಷೀಷಿಗೆ ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ಅದನ್ನು ಹತ್ತಿದನು.


“ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದುದರಿಂದಲೂ, ಅಪರಿಮಿತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದುದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ, ಹೆಲ್ಬೋನಿನ ದ್ರಾಕ್ಷಾರಸವನ್ನೂ ಹಾಗು ಚಾಹರಿನ ಉಣ್ಣೆಯನ್ನೂ ನಿನ್ನಲ್ಲಿ ತುಂಬಿಸುತ್ತಿದ್ದರು.


“ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ, ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.


ಬೆಳ್ಳಿಯ ತಗಡುಗಳು ತಾರ್ಷೀಷಿನಿಂದಲೂ, ಕೆತ್ತನೆಗಾರನ ಮತ್ತು ಎರಕದವನ ಕೈಕೆಲಸವಾದ ಚಿನ್ನವೂ ಊಫಜಿನಿಂದಲೂ ಸಾಗಿಬರುತ್ತವೆ. ನೀಲಧೂಮ್ರ ವಸ್ತ್ರಗಳು ಅವುಗಳ ಉಡುಪಾಗಿವೆ, ಇವೆಲ್ಲಾ ಕುಶಲಕರ್ಮಿಗಳ ಕೌಶಲ್ಯ.


ಯೆಹೋವನು ನಿನ್ನನ್ನು ವೈಭವಪಡಿಸಿರುವುದನ್ನು ಕೇಳಿ ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ನಿಧಿಯೂ, ಇಸ್ರಾಯೇಲಿನ ಸದಮಲಸ್ವಾಮಿಯ ಸನ್ನಿಧಿಯ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವುದರಲ್ಲಿ ಮುಂದಾಗುತ್ತಿವೆ.


ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು.


ತಾರ್ಷೀಷಿಗೆ ಸಮುದ್ರದ ಮೇಲೆ ಹಾದುಹೋಗಿರಿ, ದ್ವೀಪ ನಿವಾಸಿಗಳೇ, ಗೋಳಾಡಿರಿ!


ಎಲ್ಲಾ ದೊಡ್ಡ ದೊಡ್ಡ ತಾರ್ಷೀಷ್ ನ ಹಡಗುಗಳ ಮೇಲೆಯೂ, ಅಂತೂ ನೋಡತಕ್ಕ ಮನೋಹರವಾದ ಪ್ರತಿಯೊಂದು ವಸ್ತುವಿನ ಮೇಲೆಯೂ ಆ ದಿನವೂ ತಪ್ಪದೇ ಬರುವುದು.


ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.


ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷಿಷ್ ಹಡಗುಗಳನ್ನು ಮಾಡಿಸಿದನು.


ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಷ್ಮೆ, ಕಡುಗೆಂಪು ಉಡುಪು ಸಕಲ ವಿಧವಾದ ಮರಮುಟ್ಟು ಮತ್ತು ದಂತದ ಸಾಮಾನುಗಳು, ಬೆಲೆಬಾಳುವ ಮರ, ತಾಮ್ರ, ಕಬ್ಬಿಣ, ಚಂದ್ರಕಾಂತ ಶಿಲೆ. ಸುಗಂಧ ಸರಕುಗಳಾದ


ಅರ್ವಾದಿನವರೂ ಮತ್ತು ಹೆಲೆಕರು ನಿನ್ನ ಸೈನಿಕರ ಸಂಗಡ ನಿನ್ನ ಗೋಡೆಗಳ ಸುತ್ತಲೂ ನಿಂತಿದ್ದರು. ಗಮ್ಮಾದ್ಯರು ನಿನ್ನ ಕೊತ್ತಲುಗಳಲ್ಲಿ ಕಾವಲಾಗಿದ್ದರು. ಎಲ್ಲರೂ ತಮ್ಮ ಗುರಾಣಿಗಳನ್ನು ಸುತ್ತಮುತ್ತಲು ನಿನ್ನ ಗೋಡೆಗಳ ಮೇಲೆ ನೇತುಹಾಕಿ, ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದರು!


ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ಗುಲಾಮರನ್ನೂ ಮತ್ತು ತಾಮ್ರದ ಪಾತ್ರೆಗಳನ್ನೂ ನಿನಗೆ ಸರಬರಾಜು ಮಾಡುತ್ತಿದ್ದರು.


ನಿನ್ನ ಸರಕುಗಳು ಸಮುದ್ರಗಳನ್ನು ದಾಟಿ ಹರಡಿಕೊಂಡವು, ಅವುಗಳಿಂದ ಅನೇಕ ಜನಾಂಗಗಳನ್ನು ತೃಪ್ತಿಪಡಿಸಿದಿ; ನಿನ್ನ ಅಪಾರವಾದ ಐಶ್ವರ್ಯದಿಂದಲೂ, ವ್ಯಾಪಾರದ ವಸ್ತುಗಳಿಂದಲೂ ಭೂರಾಜರನ್ನು ಸಮೃದ್ಧಿಪಡಿಸಿದಿ.


ನೀನು ನಿನ್ನ ಅಧಿಕ ಜ್ಞಾನದಿಂದ ವ್ಯಾಪಾರದಲ್ಲಿ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಕೊಂಡಿದೆ.”


“‘ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದೆ. ಆದಕಾರಣ ನಾನು ನಿನ್ನನ್ನು ದೇವರ ಪರ್ವತದಿಂದ ಅಪವಿತ್ರನೆಂದು ತಳ್ಳಿಬಿಟ್ಟೆನು; ಹೌದು, ನೆರಳು ನೀಡುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.


ಅರಸನ ಹಡುಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರ, ನವಿಲು ಇವುಗಳನ್ನು ತರುತ್ತಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು