ಯೆಹೆಜ್ಕೇಲನು 27:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತ ಕೊಂಬು ಮತ್ತು, ಕಪ್ಪುಮರಗಳನ್ನೂ ನಿನಗೆ ಕಪ್ಪವಾಗಿ ಸಲ್ಲಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದೆದಾನಿನವರು ನಿನ್ನ ವರ್ತಕರಾಗಿದ್ದರು; ಬಹುದ್ವೀಪಗಳ ಉತ್ಪತ್ತಿ ನಿನ್ನ ಕೈಗೆ ಸೇರಿತ್ತು. ಗಜದಂತಗಳನ್ನೂ, ಕರೀಮರವನ್ನೂ ನಿನಗೆ ಕಪ್ಪವಾಗಿ ಸಲ್ಲಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ದೇದಾನಿನವರು ನಿನ್ನ ವರ್ತಕರು; ಬಹು ದ್ವೀಪಗಳ ಉತ್ಪತ್ತಿಯು ನಿನ್ನ ಕೈಗೆ ಸೇರಿತು; ಗಜದಂತಗಳನ್ನೂ ಕರೀಮರವನ್ನೂ ನಿನಗೆ ಕಪ್ಪವಾಗಿ ಸಲ್ಲಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ರೋಧೆ ದ್ವೀಪದ ಜನರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ನೀನು ಅನೇಕ ಕಡೆಗಳಲ್ಲಿ ವ್ಯಾಪಾರ ಮಾಡಿದಿ. ಜನರು ದಂತವನ್ನೂ ಬೀಟೆ ಮರಗಳನ್ನೂ ತಂದು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ ‘ದೆದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದ ಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು. ಅಧ್ಯಾಯವನ್ನು ನೋಡಿ |