ಯೆಹೆಜ್ಕೇಲನು 27:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ, ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಕೈಕೆಲಸದ ವಸ್ತುಗಳು ನಿನಗೆ ಅಪಾರವಾಗಿದ್ದವು; ಆದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಮಡಿ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿಯುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾವಿುನವರೂ ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಲು ರಕ್ತಾಂಬರ ಕಸೂತಿಯ ವಸ್ತ್ರ ನಾರುಬಟ್ಟೆ ಹವಳ ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಿನ್ನಲ್ಲಿ ಅನೇಕ ಬೆಲೆಬಾಳುವ ವಸ್ತುಗಳಿದ್ದುದರಿಂದ ಅರಾಮ್ ನಿನ್ನೊಂದಿಗೆ ವ್ಯಾಪಾರ ಮಾಡಿತು. ಅವರು ಇಂದ್ರನೀಲ, ಧೂಮ್ರ ಬಣ್ಣದ ಬಟ್ಟೆ, ಕಸೂತಿ ಕೆಲಸ, ನಯವಾದ ಬಟ್ಟೆ, ಹವಳ, ಕೆಂಪು ಹರಳು ಇತ್ಯಾದಿಗಳನ್ನು ಕೊಟ್ಟು ವಸ್ತುಗಳನ್ನು ನಿನ್ನಿಂದ ಕೊಂಡುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ ‘ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮ್ಯರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು. ಅಧ್ಯಾಯವನ್ನು ನೋಡಿ |