Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನಿನಗಾಗಿ ತಲೆ ಬೋಳಿಸಿಕೊಂಡು, ಗೋಣಿತಟ್ಟನ್ನು ಸುತ್ತಿಕೊಂಡು, ಮನೋವ್ಯಥೆಯಿಂದ ಗೋಳಾಡಿ, ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ತಲೆ ಬೋಳಿಸಿಕೊಂಡು, ಗೋಣಿತಟ್ಟನು ಸುತ್ತಿಕೊಂಡು, ದುಃಖಿಸಿ ಗೋಳಾಡುವರು, ಅಳುವರು ನಿನಗಾಗಿ ನಿಟ್ಟುಸಿರಿಟ್ಟು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನಿನಗಾಗಿ ತಲೆಬೋಳಿಸಿಕೊಂಡು ಗೋಣೀತಟ್ಟು ಸುತ್ತಿಕೊಂಡು ಮನೋವ್ಯಥೆಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನಿನಗಾಗಿ ಶೋಕದಿಂದ ತಮ್ಮ ತಲೆಗಳನ್ನು ಬೋಳಿಸುವರು. ಶೋಕದ ಬಟ್ಟೆಗಳನ್ನು ಧರಿಸುವರು. ತಮ್ಮ ಪ್ರಿಯರು ಸತ್ತಾಗ ಅಳುವಂತೆ ನಿನಗಾಗಿ ಅಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನಿನಗಾಗಿ ತಲೆ ಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:31
17 ತಿಳಿವುಗಳ ಹೋಲಿಕೆ  

ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವುದು; ಎಲ್ಲರ ಮುಖದಲ್ಲಿಯೂ ನಾಚಿಕೆ ಕಾಣುವುದು, ಎಲ್ಲರೂ ತಲೆ ಬೋಳಿಸಿಕೊಂಡು ಇರುವರು.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.


ಹೀಗಿರಲು ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ ಯಜ್ಜೇರಿನವರೊಂದಿಗೆ ನಾನು ಅಳುವೆನು. ಹೆಷ್ಬೋನೇ, ಎಲ್ಲಾಲೇ ನನ್ನ ಕಣ್ಣೀರಿನಿಂದ ನಿಮ್ಮನ್ನು ತೋಯಿಸುವೆನು. ನಿಮ್ಮ ಹಣ್ಣಿನ ಮೇಲೆಯೂ, ನಿಮ್ಮ ಬೆಳೆಯ ಮೇಲೆಯೂ ಬಿದ್ದು ಆರ್ಭಟಿಸುವುದನ್ನು ನಿಲ್ಲಿಸಿಬಿಟ್ಟಿದ್ದೇನೆ.


ಬಯಿತ್ ಮತ್ತು ದೀಬೋನ್ ಊರಿನವರು ಆಳುವುದಕ್ಕಾಗಿ, ತಮ್ಮ ಎತ್ತರವಾದ ಪೂಜಾ ಸ್ಥಳಗಳಿಗೆ ಹೋಗುತ್ತಾರೆ. ನೆಬೋವಿನಲ್ಲಿಯೂ, ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ. ಎಲ್ಲರ ತಲೆಯು ಬೋಳಾಗಿರುವುದು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಲ್ಪಡುವುದು.


ಹೀಗಿರಲು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ, ಬಹು ಸಂಕಟದಿಂದ ನಾನು ಅಳುವೆನು, ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.


ಯೆಹೂದವೇ, ನಿನ್ನಿಂದ ಸೆರೆಹೋಗಿರುವ ನಿನ್ನ ಮುದ್ದು ಮಕ್ಕಳಿಗಾಗಿ ಕ್ಷೌರಮಾಡಿಸಿಕೋ ಮತ್ತು ತಲೆಬೋಳಿಸಿಕೋ. ನಿನ್ನ ಬೋಳುತನವನ್ನು ರಣಹದ್ದಿನ ಹಾಗೆ ವಿಸ್ತರಿಸಿಕೋ.


ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು, ಬರಿಗಾಲಾಗಿಯೂ, ಬೆತ್ತಲೆಯಾಗಿಯೂ ನಡೆದಾಡುವೆನು. ನರಿಗಳಂತೆ ಅರಚಿಕೊಳ್ಳುವೆನು. ಉಷ್ಟ್ರಪಕ್ಷಿಗಳ ಹಾಗೆ ಕಿರಿಚಿಕೊಳ್ಳುವೆನು.


ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು ಮತ್ತು ನಿಮ್ಮ ಹರ್ಷಗೀತೆಗಳನ್ನೆಲ್ಲಾ ಶೋಕಗೀತೆಗೆ ತಿರುಗಿಸುವೆನು. ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆಬೋಳಿಸಿಕೊಳ್ಳುವಂತೆ ಮಾಡುವೆನು. ನಿಮ್ಮ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವುದು, ಅದು ಆದ ಮೇಲೆಯೂ ಶೋಕವು ಇದ್ದೇ ಇರುವುದು.


ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು.


“ಗಾಜಾ ಊರು ಬೋಳಿಸಿಕೊಂಡಿದೆ, ಅಷ್ಕೆಲೋನ್ ನಾಶಹೊಂದಿದೆ; ಫಿಲಿಷ್ಟಿಯದ ಬಯಲು ಸೀಮೆಯಲ್ಲಿ ಉಳಿದ ಪಟ್ಟಣವೇ, ನಿನ್ನನ್ನು ಎಂದಿನ ವರೆಗೆ ಕತ್ತರಿಸಿಕೊಳ್ಳುತ್ತಿರುವಿ?


ಈ ದೇಶದಲ್ಲಿನ ದೊಡ್ಡವರೂ. ಅಲ್ಪರೂ ಸಾಯುವರು. ಅವರನ್ನು ಯಾರೂ ಹೂಣಿಡುವುದಿಲ್ಲ, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಗಾಯಮಾಡಿಕೊಳ್ಳುವುದಿಲ್ಲ, ತಲೆಬೋಳಿಸಿಕೊಳ್ಳುವುದಿಲ್ಲ.


ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವುದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು ಮತ್ತು ತಲೆಯ ಮುಂದಿನಭಾಗವನ್ನು ಬೋಳಿಸಿಕೊಳ್ಳಲೂ ಬಾರದು.


ಅವರು ತಲೆಬೋಳಿಸಿಕೊಳ್ಳಬಾರದು, ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಬಾರದು; ದೇಹವನ್ನು ಗಾಯಮಾಡಿಕೊಳ್ಳಬಾರದು.


ಆಗ ಸುಗಂಧದ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ, ಅಂದವಾದ ಜಡೆಯ ಬದಲಾಗಿ ಬೋಳುತಲೆ, ನಡುವಿನ ಶಲ್ಯಕ್ಕೆ ಬದಲಾಗಿ ಗೋಣಿತಟ್ಟು, ಸೌಂದರ್ಯಕ್ಕೆ ಬದಲಾಗಿ ಕುರೂಪ, ಬೆತ್ತಲೆ ಉಂಟಾಗುವುದು.


“ನರಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ, ತನ್ನ ಸೈನಿಕರಿಂದ ಅತಿ ಕ್ರೂರವಾಗಿ ಸೇವೆಯನ್ನು ಮಾಡಿಸಿದ್ದಾನೆ; ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲು ಸುಲಿದು ಹೋಗಿದೆ. ಆದರೂ ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ, ಅವನ ಸೈನಿಕರಿಗಾಗಲಿ ತೂರಿನಿಂದ ಪ್ರತಿಫಲವೇನೂ ಸಿಕ್ಕಲಿಲ್ಲ.”


ಆ ಸುದ್ದಿಯು ನಿನೆವೆಯ ಅರಸನಿಗೆ ತಿಳಿಯಲು ಅವನು ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡನು.


ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ! ಯಜ್ಞವೇದಿಯ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದುಕೊಂಡಿರಿ. ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಆಲಯಕ್ಕೆ ಬಾರದೆ ನಿಂತುಹೋಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು