ಯೆಹೆಜ್ಕೇಲನು 27:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿನ್ನ ಹಾಯಿಯು ನಿನಗೆ ಧ್ವಜವಾಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರು ಬಟ್ಟೆಯಿಂದ ಮಾಡಿದರು. ನಿನ್ನ ಮೇಲ್ಕಟ್ಟನ್ನು ಎಲೀಷ ಕರಾವಳಿಯ ಧೂಮ್ರ ರಕ್ತವರ್ಣಗಳಿಂದ ಚಿತ್ರಿತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಿನ್ನ ಹಾಯಿ ನಿನಗೆ ಧ್ವಜವಾಗಲೆಂದೆ ಮಾಡಿಹರು ಈಜಿಪ್ಟಿನ ಕಸೂತಿಯ ನಾರುಮಡಿಯಿಂದ. ನಿನ್ನ ಮೇಲ್ಕಟ್ಟು ಚಿತ್ರಿತವಾಗಿದೆ ಎಲೀಷ ಕರಾವಳಿಯ ಊದಾ ಕಡುಗೆಂಪುಗಳಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಿನ್ನ ಹಾಯಿಯು ನಿನಗೆ ಧ್ವಜವೂ ಆಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರುಬಟ್ಟೆಯಿಂದ ಮಾಡಿದರು. ನಿನ್ನ ಮೇಲ್ಕಟ್ಟು ಎಲೀಷಕರಾವಳಿಯ ಧೂಮ್ರರಕ್ತವರ್ಣಗಳಿಂದ ಚಿತ್ರಿತವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಈಜಿಪ್ಟಿನಲ್ಲಿ ತಯಾರಿಸಿದ ಬಣ್ಣದ ನಾರುಮಡಿಯನ್ನು ನಿನ್ನ ಹಾಯಿಗಳಿಗಾಗಿ ಉಪಯೋಗಿಸಿದರು. ಆ ಹಾಯಿಯು ನಿನ್ನ ಧ್ವಜವಾಯಿತು. ನಿನ್ನ ಮೇಲ್ಮಾಳಿಗೆಯ ಹೊದಿಕೆಯು ನೀಲ ಮತ್ತು ಧೂಮ್ರ ವರ್ಣದವುಗಳಾಗಿದ್ದವು. ಅವು ಸೈಪ್ರಸ್ ದ್ವೀಪದಿಂದ ಬಂದವುಗಳಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಈಜಿಪ್ಟಿನ ಕಸೂತಿಯ ನಾರುಮಡಿಯಿಂದ ನಿನ್ನ ಪಟವನ್ನು ಮಾಡಿದರು ಮತ್ತು ಅದು ನಿನ್ನ ಧ್ವಜವಾಗಿತ್ತು. ನಿಮ್ಮ ಮೇಲ್ಕಟ್ಟುಗಳು ಎಲೀಷ ಕರಾವಳಿಯಿಂದ ನೀಲಿ ಮತ್ತು ನೇರಳೆ ಬಣ್ಣದ್ದಾಗಿದ್ದವು. ಅಧ್ಯಾಯವನ್ನು ನೋಡಿ |