Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿನ್ನಲ್ಲಿ ಸೇರಿಕೊಂಡಿದ್ದ ಗೇಬಾಲಿನ ಹಿರಿಯರೂ ಮತ್ತು ಜಾಣರೂ ನಿನ್ನ ಬಿರುಕುಗಳನ್ನು ಮುಚ್ಚಿದ್ದಾರೆ. ಸಮುದ್ರದ ಸಕಲ ನಾವೆಗಳ ಮತ್ತು ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು, ನಿನಗೆ ಸರಕುಗಳನ್ನು ತಂದೊಪ್ಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿನ್ನ ಕಂಡಿಗಳ ಭದ್ರಪಡಿಸಿಹರು, ನಿನ್ನಲ್ಲಿ ಸೇರಿದ್ದ ಗೆಬಲಿನ ಜಾಣರು, ಹಿರಿಯರು. ನಿನಗೆ ಸರಕುಗಳ ತಂದೊಪ್ಪಿಸುತ್ತಿದ್ದರು ಸಕಲ ನಾವೆಗಳು, ಸಕಲ ನಾವಿಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಿನ್ನಲ್ಲಿ ಸೇರಿಕೊಂಡಿದ್ದ ಗೆಬಲಿನ ಹಿರಿಯರೂ ಜಾಣರೂ ನಿನ್ನ ಕಂಡಿಗಳನ್ನು ಭದ್ರಪಡಿಸುವವರು. ಸಮುದ್ರದ ಸಕಲ ನಾವೆಗಳು ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸುತ್ತಿದ್ದವು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಗೆಬಲಿನ ಹಿರಿಯರೂ ಜ್ಞಾನಿಗಳೂ ನಿನ್ನ ಹಡಗುಗಳ ಬಿರುಕುಗಳನ್ನು ಸರಿಪಡಿಸುವವರಾಗಿದ್ದರು. ಸಾಗರದ ಹಡಗುಗಳೂ ಅದರ ನಾವಿಕರೂ ನಿನ್ನೊಂದಿಗೆ ವ್ಯಾಪಾರ ಮಾಡಲು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಗೆಬಾಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:9
7 ತಿಳಿವುಗಳ ಹೋಲಿಕೆ  

ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಹಾಗು ಗೆಬಾಲ್ಯರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವುದಕ್ಕಾಗಿ ಬೇಕಾಗುವ ಕಲ್ಲು ಮತ್ತು ಮರಗಳನ್ನು ಸಿದ್ಧಪಡಿಸಿದರೂ ಇವರೇ.


ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ತಪ್ಪಲಿನಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ದಾರಿಯ ವರೆಗಿರುವ ಲೆಬನೋನಿನ ಪೂರ್ವ ಪ್ರದೇಶ;


ಇವರೆಲ್ಲಾ ಏಕಮನಸ್ಸಿನಿಂದ ಕೂಡಿ, ನಿನಗೆ ವಿರುದ್ಧವಾಗಿ ಒಳಸಂಚು ಮಾಡುತ್ತಾರಲ್ಲಾ;


ಎಲ್ಲಾ ದೇಶಗಳವರೂ ಅವಳ ಜಾರತ್ವವೆಂಬ ಕ್ರೌರ್ಯದ ದ್ರಾಕ್ಷಾರಸವನ್ನು ಕುಡಿದರು. ಅವಳೊಂದಿಗೆ ಭೂಲೋಕದ ರಾಜರು ವ್ಯಭಿಚಾರ ಮಾಡಿದರು. ಅವಳ ಭೋಗವಿಲಾಸದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು” ಎಂದು ಹೇಳಿದನು.


“ಇದಲ್ಲದೆ ಭೂಮಿಯ ವರ್ತಕರು ಅವಳಿಗಾಗಿ ದುಃಖಿಸಿ ಗೋಳಾಡುತ್ತಾ,


ಅದರಲ್ಲಿ ಹಡಗುಗಳು ಸಂಚರಿಸುತ್ತವೆ ನೀನು ಉಂಟುಮಾಡಿದ ಲಿವ್ಯಾತಾನವು ಅದರಲ್ಲಿ ಆಡುತ್ತದೆ.


ಅಶ್ಯೂರ್ಯರೂ ಇವರೊಡನೆ ಕೂಡಿಕೊಂಡು, ಲೋಟನ ವಂಶದವರಿಗೆ ಭುಜಬಲವಾಗಿದ್ದಾರೆ. ಸೆಲಾ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು