Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದೆ; ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು ಸ್ಫಟಿಕ, ಚಿನ್ನ ಈ ಅಮೂಲ್ಯ ರತ್ನಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿರುವ ಈ ರತ್ನಗಳು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೀನಿದ್ದೆ ದೇವರ ಉದ್ಯಾನವನದ ಏದೆನಿನೊಳು ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ಬೆರುಲ್ಲ, ವೈಡೂರ್ಯ, ನೀಲ, ಕೆಂಪರಲು, ಸ್ಫಟಿಕವೆಂಬ ನವರತ್ನಗಳಿಂದ ಭೂಷಿತನಾಗಿದ್ದೆ ನೀನು. ನಿನ್ನ ಕಿವಿಯೋಲೆ ಆಭರಣಗಳು ಸುವರ್ಣಖಚಿತವಾಗಿದ್ದವು. ನಿನ್ನ ಸೃಷ್ಟಿಯ ದಿನದಂದೇ ಸಿದ್ಧವಾಗಿದ್ದವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದಿ; ಮಾಣಿಕ್ಯ ಪುಷ್ಯರಾಗ ಪಚ್ಚೆ ಪೀತರತ್ನ ಬೆರುಲ್ಲ ವೈಡೂರ್ಯ ನೀಲಕೆಂಪರಲು ಸ್ಫಟಿಕ ಈ ನವರತ್ನಗಳಿಂದ ಭೂಷಿತವಾಗಿದ್ದಿ; ನಿನ್ನಲ್ಲಿನ [ಈ ರತ್ನಗಳ] ಗೂಡುಗಳೂ ಮನೆಗಳೂ ಸುವರ್ಣ ರಚಿತವಾಗಿದ್ದವು; ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರ ಉದ್ಯಾನವನವಾಗಿದ್ದ ಏದೆನಿನಲ್ಲಿ ನೀನಿದ್ದೆ. ನಿನ್ನ ಬಳಿಯಲ್ಲಿ ಬಂಗಾರದ ಚೌಕಟ್ಟಿನಲ್ಲಿ ಕುಳ್ಳಿರಿಸಿದ ವಜ್ರ, ವೈಢೂರ್ಯ, ನವರತ್ನಗಳ ಆಭರಣಗಳಿದ್ದವು. ನೀನು ಸೃಷ್ಟಿಸಲ್ಪಟ್ಟ ದಿನದಲ್ಲಿ ಈ ಸೌಂದರ್ಯವು ನಿನಗೆ ಕೊಡಲ್ಪಟ್ಟಿತು. ದೇವರು ನಿನ್ನನ್ನು ಬಲಾಢ್ಯನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದೇವರ ತೋಟವಾದ ಏದೆನಿನಲ್ಲಿ ನೀನಿದ್ದೆ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು, ಸ್ಪಟಿಕ ಚಿನ್ನ ಈ ಅಮೂಲ್ಯವಾದವುಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:13
25 ತಿಳಿವುಗಳ ಹೋಲಿಕೆ  

ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು.


“ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ, ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.


ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು.


ಯೆಹೋವನು ಚೀಯೋನನ್ನು ಸಂತೈಸುವನು. ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ, ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ, ಬೀಳುಭೂಮಿಯನ್ನು ಯೆಹೋವನ ವನದ ಹಾಗೆ ಕಂಗೊಳಿಸುವಂತೆ ಮಾಡುವನು. ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ ಇವು ಅಲ್ಲಿ ನೆಲೆಯಾಗಿರುವವು.


ಆಗ ಜನರು, ‘ಹಾಳಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ, ಜನಭರಿತವಾಗಿದೆ’ ಎಂದು ಹೇಳುವರು.


ಮತ್ತು ಯೆಹೋವನು ಸಂಕಲ್ಪಿಸಿದ ದಂಡದ ಪ್ರತಿಯೊಂದು ಪೆಟ್ಟು, ದಮ್ಮಡಿ, ಕಿನ್ನರಿಗಳ ನಾದದೊಡನೆ ಅವರ ಮೇಲೆ ಬೀಳುವುದು. ಆತನು ಅವರೊಂದಿಗೆ ಹೋರಾಡುತ್ತಾ ಯುದ್ಧಮಾಡುವನು.


ಅದೇನೆಂದರೆ, “ಎಲ್ಲರೂ ಮರೆತುಹೋದ ವ್ಯಭಿಚಾರಿಯೇ, ಕಿನ್ನರಿಯನ್ನು ತೆಗೆದುಕೊಂಡು ಪಟ್ಟಣದಲ್ಲಿ ಅಲೆಯುತ್ತಾ, ಜನರು ನಿನ್ನನ್ನು ಜ್ಞಾಪಿಸಿಕೊಳ್ಳುವಂತೆ ಚೆನ್ನಾಗಿ ನುಡಿಸಿ, ಬಹಳ ಗೀತೆಗಳನ್ನು ಹಾಡು” ಎಂಬುದೇ.


ನಿನ್ನ ವೈಭವವೂ ವೀಣಾನಾದದೊಂದಿಗೆ ಪಾತಾಳಕ್ಕೆ ತಳ್ಳಲ್ಪಟ್ಟಿವೆ. ನಿನಗೆ ಹುಳಗಳೇ ಹಾಸಿಗೆ, ಕ್ರಿಮಿಗಳೇ ನಿನ್ನ ಹೊದಿಕೆಯು.


ಆ ಸ್ತ್ರೀಯು ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ, ರತ್ನ, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ ಅಸಹ್ಯವಾದವುಗಳಿಂದಲೂ ಮತ್ತು ತನ್ನ ಅಶುದ್ಧ ಜಾರತ್ವಗಳಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.


“ಶೆಬದವರೂ ಮತ್ತು ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ, ಎಲ್ಲಾ ಶ್ರೇಷ್ಠವಾದ ಸುಗಂಧದ್ರವ್ಯದಿಂದಲೂ, ಅಮೂಲ್ಯವಾದ ರತ್ನಗಳಿಂದಲೂ, ಚಿನ್ನದಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.


ನಾನು ನಿನ್ನ ಸಂಗೀತಗಳ ಧ್ವನಿಯನ್ನು ನಿಲ್ಲಿಸಿಬಿಡುವೆನು; ನಿನ್ನ ಕಿನ್ನರಿಗಳ ನುಡಿಯು ಇನ್ನು ಕೇಳಿಸದು.


“‘ಕತ್ತಿಯನ್ನು ಒರೆಗೆ ಸೇರಿಸು. ನಿನ್ನ ಸೃಷ್ಟಿಯಾದ ಸ್ಥಳದಲ್ಲಿ, ನಿನ್ನ ಜನ್ಮಭೂಮಿಯಲ್ಲಿ ನಿನಗೆ ನ್ಯಾಯ ತೀರಿಸುವೆನು.


ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು.


ಅವುಗಳ ಮುಂದೆ ಬೆಂಕಿಯು ದಹಿಸುತ್ತದೆ, ಹಿಂದೆ ಜ್ವಾಲೆಯು ಧಗಧಗಿಸುತ್ತದೆ. ಅವು ಬರುವುದಕ್ಕೆ ಮೊದಲು ದೇಶವು ಏದೆನ್ ಉದ್ಯಾನದಂತೆ ಇತ್ತು, ಅವು ದಾಟಿಹೋದ ಮೇಲೆ ಬೆಗ್ಗಾಡಾಯಿತು. ಹೌದು, ಅವುಗಳಿಂದ ಯಾವುದೂ ತಪ್ಪಿಸಿಕೊಳ್ಳಲಾರದು.


ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸಿಗಳ ಕೋಲಾಹಲವು ಕೊನೆಗೊಂಡಿದೆ, ಕಿನ್ನರಿಯ ಆನಂದವು ಅಡಗಿದೆ.


“‘ನೀನು ರೆಕ್ಕೆತೆರೆದು ನೆರಳು ನೀಡುವ ಕೆರೂಬಿಯಾಗಿದ್ದೆ; ನಾನು ನಿನ್ನನ್ನು ದೇವರ ಪರಿಶುದ್ಧ ಪರ್ವತದಲ್ಲಿ ನೆಲೆಗೊಳಿಸಿದೆನು; ನೀನು ಅಮೂಲ್ಯ ರತ್ನಗಳ ಕೆಂಡದ ಮಧ್ಯದಲ್ಲಿ ವಿಹಾರ ಮಾಡುತ್ತಿದ್ದೆ.


ಕೂಷ್ ದೇಶದ ಪುಷ್ಯರಾಗವು ಅದಕ್ಕೆ ಸಾಟಿಯಿಲ್ಲ, ಶುದ್ಧ ಕನಕದೊಡನೆ ಅದನ್ನು ತೂಗಲಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು