Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “‘ನೀನು ರೆಕ್ಕೆತೆರೆದು ನೆರಳು ನೀಡುವ ಕೆರೂಬಿಯಾಗಿದ್ದೆ; ನಾನು ನಿನ್ನನ್ನು ದೇವರ ಪರಿಶುದ್ಧ ಪರ್ವತದಲ್ಲಿ ನೆಲೆಗೊಳಿಸಿದೆನು; ನೀನು ಅಮೂಲ್ಯ ರತ್ನಗಳ ಕೆಂಡದ ಮಧ್ಯದಲ್ಲಿ ವಿಹಾರ ಮಾಡುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ರೆಕ್ಕೆ ತೆರೆದು ನೆರಳು ನೀಡುವ ಕೆರೂಬಿ ನೀನಾಗಿದ್ದೆ ದೇವರ ಪರಿಶುದ್ಧ ಮರೆಯಲ್ಲಿ ನಿನ್ನ ನಾ ನೆಲೆಗೊಳಿಸಿದ್ದೆ. ಕೆಂಡದ ಮಡುಮಧ್ಯೆ ನೀ ವಿಹಾರಮಾಡುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀನು ರೆಕ್ಕೆತೆರೆದು ನೆರಳುಕೊಡುವ ಕೆರೂಬಿಯಾಗಿದ್ದಿ; ನಾನು ನಿನ್ನನ್ನು ದೇವರ ಪರಿಶುದ್ಧಪರ್ವತದಲ್ಲಿ ನೆಲೆಗೊಳಿಸಿದೆನು; ನೀನು ಕೆಂಡದ ಮಳೆಯಲ್ಲಿ ವಿಹಾರಮಾಡುತ್ತಾ ಇದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀನು ಆರಿಸಲ್ಪಟ್ಟ ಕೆರೂಬಿಯರಲ್ಲಿ ಒಬ್ಬನಾಗಿದ್ದೆ. ನಿನ್ನ ರೆಕ್ಕೆಗಳು ನನ್ನ ಸಿಂಹಾಸನದ ಮೇಲೆ ಚಾಚಿದ್ದವು. ನಾನು ನಿನ್ನನ್ನು ದೇವರ ಪವಿತ್ರ ಪರ್ವತದಲ್ಲಿಟ್ಟೆನು. ನೀನು ಬೆಂಕಿಯಂತೆ ಹೊಳೆಯುವ ರತ್ನಗಳ ಮೇಲೆ ನಡೆದಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀನು ರಕ್ಷಕ ಕೆರೂಬಿಯಾಗಿ ಅಭಿಷೇಕಹೊಂದಿದೆ. ನಾನೇ ನಿನ್ನನ್ನು ನೇಮಿಸಿದ್ದೇನೆ. ನೀನು ದೇವರ ಪರಿಶುದ್ಧ ಪರ್ವತದ ಮೇಲೆ ಇದ್ದೆ; ನೀನು ಉರಿಯುತ್ತಿರುವ ಕಲ್ಲುಗಳ ನಡುವೆ ನಡೆದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:14
22 ತಿಳಿವುಗಳ ಹೋಲಿಕೆ  

ಆದುದರಿಂದ ದೇವದರ್ಶನದ ಗುಡಾರ, ಆಜ್ಞಾಶಾಸನಗಳ ಮಂಜೂಷ, ಮೇಜು, ಮೇಜಿನ ಉಪಕರಣಗಳು,


ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದೆ; ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು ಸ್ಫಟಿಕ, ಚಿನ್ನ ಈ ಅಮೂಲ್ಯ ರತ್ನಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿರುವ ಈ ರತ್ನಗಳು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ, ಉತ್ತಮ ನೈವೇದ್ಯಗಳನ್ನೂ, ಮೀಸಲಾದ ಎಲ್ಲವನ್ನೂ ಬರಮಾಡಿಕೊಳ್ಳುವೆನು.


“ನೀನು ಅಭಿಷೇಕತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿರುವುದೆಲ್ಲವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಅಭಿಷೇಕಿಸಿ ನನಗಾಗಿ ಪ್ರತಿಷ್ಠಿಸಬೇಕು; ಅಂದಿನಿಂದ ಅದು ಪರಿಶುದ್ಧವಾಗಿರುವುದು.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.


‘ಅಯ್ಯೋ ಅಯ್ಯೋ ನಯವಾದ ನಾರುಮಡಿಯನ್ನೂ, ಧೂಮ್ರವರ್ಣದ ವಸ್ತ್ರಗಳನ್ನೂ, ಕಡುಗೆಂಪು ಉಡುಪನ್ನೂ ಧರಿಸಿಕೊಂಡು, ಚಿನ್ನ, ರತ್ನ, ಮುತ್ತು ಇವುಗಳಿಂದ ತನ್ನನ್ನು ಅಲಂಕರಿಸಿಕೊಂಡಿದ್ದ ಈ ಮಹಾಪಟ್ಟಣಕ್ಕೆ ಎಂಥ ದುರ್ಗತಿ ಸಂಭವಿಸಿತು.’


ನಾನು ದರ್ಶನದಲ್ಲಿ ಕಂಡ ಕುದುರೆಗಳ ಮತ್ತು ಸವಾರರ ವಿವರಣೆ ಹೇಗಿತ್ತೆಂದರೆ, ಸವಾರರ ಕವಚಗಳ ಬಣ್ಣವು ಬೆಂಕಿ, ಹೊಗೆ, ಗಂಧಕ ಇವುಗಳ ಬಣ್ಣದ ಹಾಗಿತ್ತು ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು.


ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.


ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.


“ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ.


ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೇ? ಗರಗಸವು ಕತ್ತರಿಸುವವನಿಗೆ ಪ್ರತಿಯಾಗಿ ತನ್ನನ್ನು ಹೆಚ್ಚಿಸಿಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತಾಯಿತು, ಮರಕ್ಕಿಂತ ಶ್ರೇಷ್ಠನಾಗಿರುವ ಮನುಷ್ಯನನ್ನು ದೊಣ್ಣೆಯು ಎತ್ತಿಕೊಂಡ ಹಾಗಾಯಿತು.


ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.


ಇದನ್ನು ಅವನು ತನ್ನಷ್ಟಕ್ಕೆ ತಾನೇ ಹೇಳಲಿಲ್ಲ, ಆದರೆ ತಾನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದುದರಿಂದ, ಯೇಸು ಆ ಜನರಿಗೋಸ್ಕರ ಹಾಗೂ


ಅಯ್ಯೋ, ಕರ್ತನು ಕೋಪಗೊಂಡು ಚೀಯೋನ್ ನಗರಿಗೆ ಮೋಡವು ಕವಿಯುವಂತೆ ಮಾಡಿದ್ದಾನಲ್ಲಾ! ಆತನು ತನ್ನ ಸಿಟ್ಟನ್ನು ತೀರಿಸಿಕೊಂಡ ದಿನದಲ್ಲಿ ತನ್ನ ಪಾದಪೀಠವನ್ನು ನೆನಪಿಗೆ ತಾರದೆ ಇಸ್ರಾಯೇಲಿನ ಶಿರೋಮಣಿಯನ್ನು ಆಕಾಶದಿಂದ ಭೂಮಿಗೆ ತಳ್ಳಿಬಿಟ್ಟನು.


ಬಳಿಕ ಯೆಹೋವನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಗಳ ಮೇಲೆ ನಿಂತಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು