Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಜನಾಂಗಗಳಲ್ಲಿ ನಿನ್ನನ್ನು ಬಲ್ಲವರೆಲ್ಲರೂ ನಿನ್ನ ಗತಿಗೆ ಬೆಚ್ಚಿ ಬೆರಗಾಗುವರು; ನೀನು ಸಂಪೂರ್ಣ ನಾಶವಾಗಿ ಇನ್ನೆಂದಿಗೂ ಇಲ್ಲದಂತಾಗುವೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಿನ್ನೀ ಗತಿ ನೋಡಿ ಬೆರಗಾದರು ನಿನ್ನನ್ನರಿತ ರಾಷ್ಟ್ರಗಳು ಪೂರ್ತಿಯಾಗಿ ನೀ ಧ್ವಂಸವಾದೆ, ಇಲ್ಲವಾದೆ ಇನ್ನೆಂದಿಗೂ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಜನಾಂಗಗಳಲ್ಲಿ ನಿನ್ನನ್ನು ಬಲ್ಲವರೆಲ್ಲರೂ ನಿನ್ನ ಗತಿಗೆ ಬೆಚ್ಚಿ ಬೆರಗಾಗುವರು; ನೀನು ತೀರಾ ಧ್ವಂಸವಾಗಿ ಇನ್ನೆಂದಿಗೂ ಇಲ್ಲದಂತಾದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “‘ಬೇರೆ ಜನಾಂಗಗಳ ಜನರು ನಿನಗೆ ಆದದ್ದನ್ನು ನೋಡಿ ಬೆಚ್ಚಿಬೆರಗಾದರು. ನಿನಗಾದ ದುಸ್ಥಿತಿಯು ಜನರನ್ನು ಭಯಪಡಿಸಿತು. ನಿನ್ನ ಅಂತ್ಯವಾಯಿತು!’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಿನ್ನನ್ನು ಅರಿತ ಜನರೆಲ್ಲರೂ ನಿನ್ನ ವಿಷಯದಲ್ಲಿ ಭಯಗೊಳ್ಳುವರು. ನೀನು ಸಂಪೂರ್ಣ ಭೀತಿಗೊಳಗಾಗಿ ಇನ್ನೆಂದಿಗೂ ಇಲ್ಲದಂತಾಗುವೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:19
12 ತಿಳಿವುಗಳ ಹೋಲಿಕೆ  

ನಿನ್ನನ್ನು ತೀರಾ ಧ್ವಂಸಮಾಡುವೆನು; ನೀನು ಇಲ್ಲವಾಗುವಿ; ಎಷ್ಟು ಹುಡುಕಿದರೂ ನೀನು ಎಂದಿಗೂ ಸಿಕ್ಕುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ.


ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ತೆಗೆದುಕೊಂಡು ಸಮುದ್ರದೊಳಗೆ ಬಿಸಾಡಿ, “ಮಹಾಪಟ್ಟಣವಾದ ಬಾಬೆಲನ್ನು ಹೀಗೆ ಹಿಂಸಾಚಾರದಿಂದ ಬಿಸಾಡುವನು. ಅದು ಇನ್ನೆಂದಿಗೂ ಕಾಣಿಸುವುದಿಲ್ಲ.


ನಾನು ನಿನ್ನನ್ನು ಬೋಳು ಬಂಡೆಯನ್ನಾಗಿ ಮಾಡುವೆನು; ನೀನು ಬಲೆಗಳನ್ನು ಹಾಕುವ ಸ್ಥಳವಾಗುವಿ; ನಿನ್ನ ಮೇಲೆ ಇನ್ನು ಕಟ್ಟಡವನ್ನು ಕಟ್ಟುವುದಿಲ್ಲ; ಯೆಹೋವನಾದ ನಾನೇ ಅಪ್ಪಣೆ ಕೊಟ್ಟಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.


ಆತನು ಭೂಪತಿಗಳಿಗೆ ಭಯಪ್ರದರಾಗಿದ್ದ ಪ್ರಭುಗಳ ಅಹಂಭಾವವನ್ನು ಮುರಿದುಬಿಡುವನು.


ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,


“ನಾನು ನಿನ್ನ ನಾಶದ ಸುದ್ದಿಯನ್ನು, ಜನಾಂಗಗಳಲ್ಲಿ ನಿನಗೆ ತಿಳಿಯದ ದೇಶಗಳಿಗೂ ಮುಟ್ಟಿಸುವಾಗ, ಅವರ ಮನಸ್ಸಿನಲ್ಲಿ ಗಲಿಬಿಲಿಯನ್ನು ಎಬ್ಬಿಸುವೆನು.


ನಾನು ನಿನ್ನ ಪ್ರಜೆಯನ್ನು ಅತಿಭಯಂಕರ ಜನಾಂಗದವರಾದ ಬಲಿಷ್ಠರ ಕತ್ತಿಗಳಿಂದ ಸಂಹರಿಸುವೆನು. ಅವರು ಐಗುಪ್ತದ ಮಹತ್ತನ್ನು ನಾಶ ಮಾಡುವರು. ಅದರ ಜನ ಸಮೂಹವೆಲ್ಲಾ ನಿರ್ನಾಮವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು