ಯೆಹೆಜ್ಕೇಲನು 28:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನರಪುತ್ರನೇ, ನೀನು ತೂರಿನ ಅರಸನಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನೇ ದೇವರು, ಸಮುದ್ರ ಮಧ್ಯದಲ್ಲಿ ದೇವರ ಸ್ಥಾನದಲ್ಲಿ ಕುಳಿತುಕೊಂಡಿರುವೆನು’ ಎಂದು ಹೇಳಿಕೊಂಡಿದ್ದೀ; ನೀನು ದೇವರಲ್ಲ, ಮನುಷ್ಯನೇ. ಆದರೂ ನಿನ್ನನ್ನು ನೀನೇ ದೇವರಿಗೆ ಸಮಾನನೆಂದು ಭಾವಿಸಿಕೊಂಡಿರುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಅಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನರಪುತ್ರನೇ, ನೀನು ತೂರಿನ ಪ್ರಭುವಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನು ದೇವರು, ಸಮುದ್ರ ಮಧ್ಯದಲ್ಲಿ ದೇವರ ಆಸನವನ್ನೇ ಹತ್ತಿದ್ದೇನೆ ಅಂದುಕೊಂಡಿಯಷ್ಟೆ; ನೀನು ನಿನ್ನ ಮನಸ್ಸನ್ನು ದೇವರ ಮನಸ್ಸಿನಷ್ಟು ಹೆಚ್ಚಿಸಿಕೊಂಡದೇನು? ನೀನು ಎಂದಿಗೂ ದೇವರಲ್ಲ, ನೀನು ನರಪ್ರಾಣಿಯೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ನರಪುತ್ರನೇ, ತೂರಿನ ರಾಜನಿಗೆ ಹೀಗೆ ಹೇಳು, ‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “‘ನೀನು ಬಹಳ ಹೆಮ್ಮೆಯುಳ್ಳವನು. “ನಾನು ದೇವರು ಎಂದು ಹೇಳುವೆ. ಸಾಗರದ ಮಧ್ಯದಲ್ಲಿ ದೇವರುಗಳ ಸಿಂಹಾಸನದಲ್ಲಿ ನಾನು ಕೂತಿರುತ್ತೇನೆ ಎಂದು ಅನ್ನುವೆ.” “‘ಆದರೆ ನೀನು ಮನುಷ್ಯನು, ದೇವರಲ್ಲ. ನೀನು ದೇವರೆಂದು ನೀನೇ ನೆನಸಿಕೊಳ್ಳುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಮನುಷ್ಯಪುತ್ರನೇ, ಟೈರಿನ ಆಡಳಿತ ಅಧಿಕಾರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ಗರ್ವದಿಂದ, “ನಾನು ಒಬ್ಬ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿರುವೆನು,” ಎಂದು ಹೇಳಿಕೊಂಡಿದ್ದೀ. ಆದರೆ ನೀನು ದೇವರಲ್ಲ, ಮನುಷ್ಯನೇ, ಆದರೂ ನಿನ್ನನ್ನು ನೀನೇ ದೇವರಿಗೆ ಸಮನೆಂದು ಭಾವಿಸಿದೆ. ಅಧ್ಯಾಯವನ್ನು ನೋಡಿ |