Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 28:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಚೀದೋನೇ, ನಾನು ನಿನ್ನ ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣದಲ್ಲಿ ನ್ಯಾಯ ತೀರಿಸಿ, ನಾನು ಮಹಿಮೆಯನ್ನು ಹೊಂದುವಾಗ ನಾನೇ ಯೆಹೋವನು’ ಎಂದು ಎಲ್ಲರಿಗೂ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಹಾ, ಸಿದೋನೇ, ನಾನು ನಿನಗೆ ವಿರುದ್ಧನಾಗಿ ನಿನ್ನ ಮಧ್ಯದಲ್ಲೆ ಪ್ರಖ್ಯಾತಿಗೊಳ್ಳುವೆನು ; ನಾನು ಈ ಪಟ್ಟಣವನ್ನು ದಂಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ, ನಾನೇ ಸರ್ವೇಶ್ವರ ಎಂದು ಎಲ್ಲರಿಗು ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಚೀದೋನೇ, ನಾನು ನಿನಗೆ ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣವನ್ನು ದಂಡಿಸಿ ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ ನಾನೇ ಯೆಹೋವನು ಎಂದು ಎಲ್ಲರಿಗೂ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನನ್ನ ಒಡೆಯನಾದ ಯೆಹೋವನು ಈ ಮಾತುಗಳನ್ನು ಹೇಳಿದನೆಂದು ಅವನಿಗೆ ತಿಳಿಸು: “‘ಚೀದೋನೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಿನ್ನ ಜನರು ನನ್ನನ್ನು ಗೌರವಿಸಲು ಕಲಿಯುವರು. ನಾನು ಚೀದೋನನ್ನು ಶಿಕ್ಷಿಸಿದಾಗ ನಾನೇ ಯೆಹೋವನೆಂದು ಜನರಿಗೆ ಗೊತ್ತಾಗುವದು. ನಾನು ಪವಿತ್ರನು ಎಂದು ಅವರು ತಿಳಿದು ಆ ರೀತಿಯಾಗಿ ಅವರು ನನ್ನೊಂದಿಗೆ ವರ್ತಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀನು ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಸೀದೋನೇ ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧವಾಗುವಾಗ ನಾನೇ ಯೆಹೋವ ದೇವರೆಂದು ತಿಳಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 28:22
32 ತಿಳಿವುಗಳ ಹೋಲಿಕೆ  

ಹೌದು, ದೇಶದ ಸಕಲ ಪ್ರಜೆಗಳು ಅವರನ್ನು ಸಮಾಧಿ ಮಾಡುವರು. ಹೀಗೆ ನಾನು ಮಹಿಮೆಯನ್ನು ಹೊಂದುವ ದಿನವು ನನ್ನ ಜನರಿಗೆ ಸ್ಮರಣೆಯ ದಿನವಾಗಿರುವುದು” ಇದು ಕರ್ತನಾದ ಯೆಹೋವನ ನುಡಿ.


ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಅಂಗೀಕರಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.


ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನು. ಅವರು ಇವರನ್ನು ಹಿಂದಟ್ಟುವರು. ಆಗ ನಾನು ಫರೋಹನ ಮೇಲೆಯೂ, ಅವನ ಸಮಸ್ತ ಸೈನ್ಯದವರ ಮೇಲೆಯೂ, ರಥಗಳ ಮೇಲೆಯೂ ಮತ್ತು ಕುದುರೆಗಳ ಮೇಲೆಯೂ ಪ್ರಖ್ಯಾತಿಗೊಳ್ಳುವೆನು.


ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ನಾನು ಫರೋಹನಲ್ಲಿಯೂ, ಅವನ ಸೈನ್ಯದಲ್ಲಿಯೂ ಮಹಿಮೆಗೊಳ್ಳುವೆನು. ‘ನಾನೇ ಯೆಹೋವನು’ ಎಂದು ಐಗುಪ್ತ್ಯರಿಗೆ ತಿಳಿದು ಬರುವುದು” ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲರು ನಡೆದುಕೊಂಡರು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಇಗೋ ನಾನು ನಿನಗೆ ವಿರುದ್ಧವಾಗಿದ್ದೇನೆ, ನಿನ್ನ ನೆರಿಗೆಯನ್ನು ನಿನ್ನ ಕಣ್ಣ ಮುಂದೆಯೇ ಕೀಳಿಸುವೆನು, ನಿನ್ನ ಬೆತ್ತಲೆತನವನ್ನು ಜನಾಂಗಗಳಿಗೆ ತೋರಿಸುವೆನು, ನಿನ್ನ ಅವಮಾನವನ್ನು ರಾಜ್ಯಗಳಿಗೆ ತೋರುವಂತೆ ಮಾಡುವೆನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ! ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ರಥಗಳನ್ನು ಸುಟ್ಟು ಹೊಗೆಹಾಯಿಸುವೆನು, ಕತ್ತಿಯು ನಿನ್ನ ಪ್ರಾಯದ ಸಿಂಹಗಳನ್ನು ಸೀಳಿ ನುಂಗಿ ಬಿಡುವವು; ನಿನಗೆ ಸಿಕ್ಕಿದ ಬೇಟೆಯನ್ನು ಲೋಕದೊಳಗಿಂದ ನಿರ್ಮೂಲಮಾಡುವೆನು; ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸುವುದಿಲ್ಲ.”


ಆತನ ಸಿಟ್ಟಿಗೆ ಯಾರು ಎದುರು ನಿಲ್ಲಲು ಸಾಧ್ಯ? ಆತನ ರೋಷಾಗ್ನಿಯ ಎದುರು ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ. ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಅನೇಕ ಜನಾಂಗಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ನಾನು ನಿನಗೆ ವಿರುದ್ಧವಾಗಿದ್ದೇನೆ.


ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನವುಳ್ಳ ನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು” ಇದು ಕರ್ತನಾದ ಯೆಹೋವನ ನುಡಿ.


ಹೀಗೆ ನಾನು ಐಗುಪ್ತ್ಯರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಯೆಹೋವನು” ಎಂದು ಅವರಿಗೆ ಗೊತ್ತಾಗುವುದು.


‘ಇಗೋ, ನಾನು ನಿನಗೂ, ನಿನ್ನ ನದಿಗೂ ವಿರುದ್ಧವಾಗಿ ಐಗುಪ್ತ ದೇಶವನ್ನು ಮಿಗ್ದೋಲಿನಿಂದ ಸೆವೇನಿಯ ತನಕ, ಹೌದು, ಕೂಷಿನ ಮೇರೆಯವರೆಗೂ ತೀರಾ ಹಾಳು ಮಾಡುವೆನು.


“ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ, ನಿನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು, ‘ಈ ನದಿ ನನ್ನದೇ, ನನಗಾಗಿಯೇ ಅದನ್ನು ಮಾಡಿಕೊಂಡಿದ್ದೇನೆ’ ಎಂದು ಹೇಳಿಕೊಳ್ಳುವ ದೊಡ್ಡ ಮೊಸಳೆಯೇ, ಇಗೋ, ನಾನು ನಿನ್ನ ವಿರುದ್ಧವಾಗಿದ್ದೇನೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ತೂರ್ ದೇಶವೇ, ನಾನು ನಿನಗೆ ವಿರುದ್ಧವಾಗಿದ್ದೇನೆ; ಸಮುದ್ರವು ತನ್ನ ತೆರೆಗಳನ್ನು ಎಬ್ಬಿಸುವಂತೆ ನಾನು ಅನೇಕ ಜನಾಂಗಗಳನ್ನು ನಿನ್ನ ಮೇಲೆ ಎಬ್ಬಿಸುವೆನು.


ಇಸ್ರಾಯೇಲ್ ದೇಶಕ್ಕೆ ಹೀಗೆ ಸಾರಿ ಹೇಳು, ‘ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು, ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಿ ಬಿಡುವೆನು.


ಆದುದರಿಂದ ಯೆರೂಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು ಇದು ಕರ್ತನಾದ ಯೆಹೋವನ ನುಡಿ.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ, “ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನ್ನ ವಿರುದ್ಧವಾಗಿದ್ದೇನೆ; ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ.


ಆಹಾ, ತಗ್ಗಿನ ನಗರವೇ, ಬಯಲು ಭೂಮಿಯ ಶಿಖರದ ಮೇಲಣ ಪುರಿಯೇ, ನಾನು ನಿನ್ನ ವಿರುದ್ಧವಾಗಿದ್ದೇನೆ. “ಯಾರು ಇಳಿದು ನಮ್ಮ ಮೇಲೆ ಬಂದಾರು? ನಮ್ಮ ನಿವಾಸಗಳಲ್ಲಿ ಯಾರು ನುಗ್ಗುವರು?” ಎಂದು ಹೇಳುವವರೇ,


ಹೀಗಿರುವುದರಿಂದ ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬುದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.”


ಅವರು ನಿರಂತರವೂ ಆಶಾಭಂಗದಿಂದ ಕಳವಳಗೊಳ್ಳಲಿ; ಅಪಮಾನದಿಂದ ನಾಶವಾಗಲಿ.


ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು: “ಯೆಹೋವನಿಗೆ ಕೀರ್ತನೆ ಹಾಡಿರಿ, ಆತನು ಮಹೋನ್ನತನಾದ ದೇವರಾಗಿದ್ದಾನೆ. ಕುದುರೆಗಳನ್ನೂ, ರಾಹುತರನ್ನೂ ಸಮುದ್ರದಲ್ಲಿ ಮುಳುಗಿಸಿ ನಾಶಮಾಡಿದನು.”


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.


ಚೀದೋನೇ, ನಾಚಿಕೆಪಡು. ಏಕೆಂದರೆ ಸಮುದ್ರವೂ, ಸಮುದ್ರದ ದುರ್ಗವೂ, “ನಾವು ವೇದನೆ ಪಡಲಿಲ್ಲ, ಪ್ರಸವಿಸಲಿಲ್ಲ, ಯುವತಿ ಯುವಕರನ್ನು ಸಾಕಿ ಸಲಹಲಿಲ್ಲ” ಎಂದು ನುಡಿದಿದೆಯಷ್ಟೆ.


ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.’”


ನಾನು ಫರೋಹನನಲ್ಲಿಯೂ ಅವನ ರಥಗಳಲ್ಲಿಯೂ, ಕುದುರೆಗಳಲ್ಲಿಯೂ ಪ್ರಖ್ಯಾತಿ ಹೊಂದಿದ ನಂತರ ನಾನೇ ಯೆಹೋವನು ಎಂಬುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು